ಶಾಸಕ ತನ್ವೀರ್ ಸೇಠ್​ಗೆ ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ

ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಮೈಸೂರಿನಲ್ಲಿ ತನ್ವೀರ್ ಸೇಠ್ ಕಾರ್ಪೊರೇಟರ್ ಅಫ್ತಾಬ್ ಮನೆಯ ಮದುವೆಯ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು ಈ ಸಂರ್ದಭದಲ್ಲಿ ಶಾಸಕರ ಬೆಂಬಲಿಗನೇ ಆದ ಫರಾನ್ ಎಂಬ ಯುವಕ ತನ್ವೀರ್ ಸೇಠ್ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಬಲವಾಗಿ ಹೊಡೆದಿದ್ದ. ನಿನ್ನೆ ರಾತ್ರಿ ತನ್ವೀರ್ ಸೇಠ್​ರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವೈದ್ಯರಾದ ಡಾ.ದತ್ತಾತ್ರೆ ಹಾಗೂ ಡಾ.ಪ್ರವೀಣ್‌ ತಡರಾತ್ರಿ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಶಸ್ತ್ರ ಚಿಕಿತ್ಸೆ […]

ಶಾಸಕ ತನ್ವೀರ್ ಸೇಠ್​ಗೆ ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ
ಸಾಧು ಶ್ರೀನಾಥ್​

Updated on: Nov 18, 2019 | 2:36 PM

ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಮೈಸೂರಿನಲ್ಲಿ ತನ್ವೀರ್ ಸೇಠ್ ಕಾರ್ಪೊರೇಟರ್ ಅಫ್ತಾಬ್ ಮನೆಯ ಮದುವೆಯ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು ಈ ಸಂರ್ದಭದಲ್ಲಿ ಶಾಸಕರ ಬೆಂಬಲಿಗನೇ ಆದ ಫರಾನ್ ಎಂಬ ಯುವಕ ತನ್ವೀರ್ ಸೇಠ್ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಬಲವಾಗಿ ಹೊಡೆದಿದ್ದ. ನಿನ್ನೆ ರಾತ್ರಿ ತನ್ವೀರ್ ಸೇಠ್​ರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ದಾಖಲಿಸಲಾಗಿತ್ತು.

ಆಸ್ಪತ್ರೆಯ ವೈದ್ಯರಾದ ಡಾ.ದತ್ತಾತ್ರೆ ಹಾಗೂ ಡಾ.ಪ್ರವೀಣ್‌ ತಡರಾತ್ರಿ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಈಗ ಸದ್ಯ ಐಸಿಯುನಲ್ಲಿ ಶಾಸಕ ತನ್ವಿರ್ ಸೇಠ್ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ನಿಖರವಾಗಿ ಇನ್ನು ಆರೋಗ್ಯದ ಬಗ್ಗೆ ಏನು ಹೇಳಲು ಸಾಧ್ಯವಿಲ್ಲ. ಇನ್ನು 48 ಗಂಟೆಗಳ ಕಾಲ ಕಾಯಬೇಕು ಎಂದು ತಿಳಿಸಿದ್ದಾರೆ.

Published On - 12:46 pm, Mon, 18 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us