AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಧಾರವಾಡದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ಪ್ರಕಟಿಸಿದೆ. ಇದೀಗ ಅವರಿಗೆ ಜೀವಾವಧಿ ಶಿಕ್ಷೆ, ಇದರ ಕತೆಗೆ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಪ್ರಮುಖ ಆರೋಪಿಯಾಗಿರುವ ಇವರಿಗೆ ನ್ಯಾಯಾಲವೂ ಬುದವಾರ (ಏ.15) ಅಪರಾಧಿ ಎಂದು ಘೋಷಣೆ ಮಾಡಿತ್ತು. ಇದೀಗ ಶಿಕ್ಷೆ ಪ್ರಮಾಣ ಪ್ರಕಟ ಮಾಡಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ
Vinay Kulkarni Mla
ಅಕ್ಷಯ್​ ಪಲ್ಲಮಜಲು​​
| Edited By: |

Updated on:Apr 17, 2026 | 4:47 PM

Share

ಧಾರವಾಡ, ಏ.17: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ. ಇದೀಗ ಈ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆಯನ್ನು ಪ್ರಕಟಿಸಿದೆ.  ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ  ಜೀವಾವಧಿ ಶಿಕ್ಷೆ ನೀಡಿದೆ. ಇನ್ನು 19ನೇ ಆರೋಪಿ ಚನ್ನಕೇಶವ ಟಿಂಗರಿಕರ್​​ಗೆ 7 ವರ್ಷ ಜೈಲು ಶಿಕ್ಷೆ ನೀಡಲಾಗಿದೆ ಹಾಗೂ ಇನ್ನು ಎ 1 ಬಸವರಾಜ ಮುತ್ತಗಿ ಮಾಫಿ ಸಾಕ್ಷಿ ಸ್ಥಾನ ಕೋರ್ಟ್ ಖಚಿತಪಡಿಸಿದೆ. ಇದರ ಜತೆಗೆ ಯೋಗೀಶ್ ಗೌಡರ್ ಮಕ್ಕಳಿಗೆ 16 ಲಕ್ಷ ರೂ ಹಣವನ್ನು ಪರಿಹಾರವಾಗಿ ನೀಡಲು ಸೂಚನೆ ನೀಡಿದೆ.

ಇದೊಂದು ಕರ್ನಾಟಕ ರಾಜಕಾರಣದಲ್ಲಿ ಭಾರೀ ದೊಡ್ಡ ಸಂಚಲವನ್ನು ಮೂಡಿಸಿದೆ. ಇದೀಗ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಕೇಂದ್ರ ಸರ್ಕಾರ ತಂದಿರುವ ಪ್ರಜಾ ಪ್ರತಿನಿಧಿ ಕಾಯ್ದೆಯಡಿಯಲ್ಲಿ ಅವರು ಶಾಸಕ ಸ್ಥಾನದಿಂದ ವಜಾ ಕೂಡ ಮಾಡಲಾಗಿದೆ. ಇನ್ನು ಈ ಪ್ರಕರಣದಲ್ಲಿ 21 ಆರೋಪಿಗಳಿದ್ದರೆ, ಇವರ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇನ್ನು ಪ್ರಕರಣದ A 20 ವಾಸುದೇವ ನಿಲೇಕಣಿ, A21 ಸೋಮಶೇಖರ ಅವರನ್ನ ಬಿಡುಗಡೆಗೆ ಕೋರ್ಟ್ ಆದೇಶಿಸಿತ್ತು.

ಇನ್ನು ಉಳಿದಂತೆ ಎ2 ವಿಕ್ರಮ್, ಎ3 ಕೀರ್ತಿ ಕುಮಾರ್, ಎ 4 ಸಂದೀಪ್, ಎ5 ವಿನಾಯಕ್, ಎ6 ಮಹಾಬಲೇಶ್ವರ್ ಅಲಿಯಾಸ್ ಮುದಕ, ಎ 7 ಸಂತೋಷ್, ಎ 8 ದಿನೇಶ್, ಎ 9 ಅಶ್ವಥ್, ಎ10 ಸುನಿಲ್, ಎ 11 ನಜೀರ್ ಅಹಮದ್, ಎ 12 ಷಾನವಾಜ್, ಎ 13 ನೂತನ್ , ಎ14 ಹರ್ಷಿತ್, ಎ15 ವಿನಯ್ ಕುಲಕರ್ಣಿ, ಎ 16 ಚಂದ್ರು ಮಾಮ, ಎ18 ವಿಕಾಸ್ ಕಲಬುರ್ಗಿ, ಎ 19 ಚನ್ನಕೇಶವ ಟಿಂಗರಿಕರ್​​ ಅವರನ್ನು ದೋಷಿಗಳು ಎಂದು ಹೇಳಿ, ಶಿಕ್ಷೆಯನ್ನು ನೀಡಿದೆ.

ಬಟ್ಟೆ ಬದಲಿಸಲು ಅನುಮತಿ ನೀಡುವಂತೆ ಮನವಿ

ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್​ಷೆಯನ್ನು ಘೋಷಣೆ ಮಾಡಿದೆ. ಇದೀಗ ಅವರು 3 ದಿನದಿಂದ ಒಂದೇ ಬಟ್ಟೆಯಲ್ಲಿದ್ದಾರೆ, ಬಟ್ಟೆ ಬದಲಿಸಲು ಅನುಮತಿ ನೀಡುವಂತೆ ಶಾಸಕ ವಿನಯ್ ಕುಲಕರ್ಣಿ ಪರ ವಕೀಲ ಸುನಿಲ್ ಮನವಿ ಮಾಡಿದ್ದಾರೆ. ಅಪರಾಧಿಗಳಿಗೆ ಬಟ್ಟೆ ಒದಗಿಸಲು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೈಲು ಕೈಪಿಡಿಯಲ್ಲಿರುವಂತೆ ಬಟ್ಟೆ ಒದಗಿಸಲು ಜಡ್ಜ್‌ ಸೂಚನೆ ನೀಡಿದ್ದಾರೆ. ಇದರ ಜತೆಗೆ ಪ್ರತಿ ಸೆಕ್ಷನ್‌ಗೂ ಪ್ರತ್ಯೇಕವಾಗಿ ದಂಡ ವಿಧಿಸಲಾಗಿದೆ.

ಇದನ್ನೂ ಓದಿ: ಕೊಲೆ ಅಪರಾಧಿಯ ಶಾಸಕ ಸ್ಥಾನಕ್ಕೂ ಕುತ್ತು: ವಿನಯ್ ಕುಲಕರ್ಣಿ ಮುಂದಿರುವ ಕಾನೂನು ಆಯ್ಕೆಗಳೇನು?

ಇನ್ನು ಪ್ರಕರಣದ ಹಿನ್ನಲೆಗಳೇನು?

2016ರ ಜೂನ್ 15ರಂದು ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು ಸಪ್ತಾಪುರ ಬಡಾವಣೆಯ ಜಿಮ್​​ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡದ ಉಪನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸಿದ್ದರು. ಈ ಕೊಲೆ ಆಸ್ತಿ ವಿವಾದದ ವಿಚಾರಕ್ಕಾಗಿ ನಡೆದಿದೆ ಎಂದು ಹೇಳಲಾಗಿದೆ.ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದ್ರೆ, ಕೊಲೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂದು ಹೇಳಿತ್ತು. ಅಲ್ಲಿಂದ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು. ಈ ಕೊಲೆಯಲ್ಲಿ ಶಾಸಕ ವಿನಯ್‌ ಕುಲಕರ್ಣಿ ಕೈವಾಡವಿರುವ ಅನುಮಾನ ವ್ಯಕ್ತವಾಗಿತ್ತು. 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು, ವಿನಯ್‌ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇದರ ನಂತರ ವಿನಯ್‌ ಕುಲಕರ್ಣಿ ಜಾಮೀನು ಪಡೆದು ಹೊರಗೆ ಬಂದಿದ್ದರು. ನಂತರದಲ್ಲಿ ಈ ಪ್ರಕರಣವನ್ನು ಜನಪ್ರತಿನಿಧಿ ಕೋರ್ಟ್​​ಗೆ ನೀಡಲಾಗಿತ್ತು, ಇದೀಗ ಈ ಅವರಿಗೆ ಶಿಕ್ಷೆಯನ್ನು ಘೋಷಣೆ ಮಾಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:12 pm, Fri, 17 April 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ