ರೈತ ಹೋರಾಟಗಾರ್ತಿ ವಿರುದ್ದ ಕೈ ಶಾಸಕ ವಿನಯ್ ಕುಲಕರ್ಣಿ ಆಪ್ತನಿಂದ ದೂರು ದಾಖಲು
ರೈತ ಹೋರಾಟಗಾರ್ತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಧಾರವಾಡ ಶಾಸಕ ವಿನಯ ಕುಲಕರ್ಣಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಇದೀಗ ವಿನಯ್ ಕುಲಕರ್ಣಿ ಆಪ್ತ ಅರ್ಜುನ್ ಗುಡ್ಡದ ರೈತ ಹೋರಾಟಗಾರ್ತಿ ಮಹಿಳೆ ವಿರುದ್ಧ 20 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ದೂರು ದಾಖಲಿಸಿದ್ದಾರೆ.
ಹುಬ್ಬಳ್ಳಿ, ಅಕ್ಟೋಬರ್ 14: ರೈತ ಹೋರಾಟಗಾರ್ತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಇತ್ತೀಚೆಗೆ ಶಾಸಕ ವಿನಯ್ ಕುಲಕರ್ಣಿ (Vinay Kulkarni) ವಿರುದ್ಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ವಿನಯ್ ಕುಲಕರ್ಣಿ ಸಹ ರೈತ ಹೋರಾಟಗಾರ್ತಿ ವಿರುದ್ಧ ಬೆಂಗಳೂರಿನಲ್ಲಿ ಒಂದು ದೂರು ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಅವರ ಆಪ್ತ ಅರ್ಜುನ್ ಗುಡ್ಡದ ಸಹ ಮತ್ತೊಂದು ದೂರು ದಾಖಲಿಸಿದ್ದಾರೆ.
ಬೆದರಿಕೆ ಹಾಕಿದ ಆರೋಪದಡಿ ವಿನಯ್ ಕುಲಕರ್ಣಿ ಆಪ್ತ ಅರ್ಜುನ್ ಗುಡ್ಡದ ವಿರುದ್ಧವೂ ದೂರು ದಾಖಲಾಗಿತ್ತು. ಇದೀಗ ರೈತ ಹೋರಾಟಗಾರ್ತಿ ಸೇರಿ ನಾಲ್ವರ ವಿರುದ್ಧ ಅರ್ಜುನ್ ಗುಡ್ಡದ ಹುಬ್ಬಳ್ಳಿಯ ಗೋಕುಲ ರೋಡ್ ಠಾಣೆಯಲ್ಲಿ IPC 1860,U/S 384,506 ಅಡಿಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: ಸಾಮಾಜಿಕ ಕಾರ್ಯಕರ್ತೆಗೆ ಲೈಂಗಿಕ ದೌರ್ಜನ್ಯ: ವಿನಯ್ ಕುಲಕರ್ಣಿ ವಿರುದ್ಧ ಎಫ್‌ಐಆರ್
20 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ರೈತ ಹೋರಾಟಗಾರ್ತಿ ವಿರುದ್ಧ ದೂರು ದಾಖಲಾಗಿದೆ. ನಾನು ಹತ್ತಿ ಬೀಜದ ಕಂಪನಿಯ ಬ್ರಾಂಡ್ ಅಂಬಾಸಿಡರ್ ಎಂದು ಅರ್ಜುನ್ಗೆ ಮಹಿಳೆ ಪರಿಚಯವಾಗಿದ್ದಾರೆ. ಬಳಿಕ ನಕಲಿ ಫೋಟೋ ತೋರಿಸಿ ಹಣಕ್ಕೆ ಬ್ಲ್ಯಾಕ್ಮೇಲ್ ಆರೋಪ ಮಾಡಿದ್ದಾರೆ.
ಹಾವೇರಿ ಮೂಲದ ಮಹಿಳೆಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಧಾರವಾಡ ಶಾಸಕ ವಿನಯ ಕುಲಕರ್ಣಿ ವಿರುದ್ಧ ಅತ್ಯಾಚಾರ ಪ್ರಕರಣದ ದಾಖಲಾಗಿತ್ತು. ಇದೇ ವೇಳೆ ಅದಕ್ಕೂ ಮುನ್ನವೇ ವಿನಯ ಕುಲಕರ್ಣಿ ತಮಗೆ ಬ್ಲ್ಯಾಕ್ ಮೇಲ್ ಮಾಡಿ ಹಣದ ಬೇಡಿಕೆ ಇಟ್ಟಿದ್ದ ಬಗ್ಗೆ ಅದೇ ಮಹಿಳೆ ಮೇಲೆ ಕೇಸ್ ದಾಖಲಿಸಿದ್ದರು.
ಇದನ್ನೂ ಓದಿ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಪ್ರಕರಣ ಸಿಐಡಿಗೆ ವರ್ಗಾವಣೆ
ರಾಜ್ಯ ಸರಕಾರ ತಮ್ಮ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಾದರೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆದರೆ ವಿರೋಧ ಪಕ್ಷದ ಶಾಸಕರ ಮೇಲೆ ಎಫ್‌ಐಆರ್ ದಾಖಲಾದರೆ ಕೂಡಲೇ ಅವರನ್ನು ಬಂಧಿಸುತ್ತಿದೆ ಅಂತಾ ಬಿಜೆಪಿ ಆರೋಪ ಮಾಡುತ್ತಿದೆ. ಶಾಸಕರಾದ ಮುನಿರತ್ನ, ರೇವಣ್ಣನ ವಿಚಾರದಲ್ಲಿ ನಡೆದುಕೊಂಡ ರೀತಿಯೇ ವಿನಯ ಕುಲಕರ್ಣಿ ವಿಚಾರಕ್ಕೂ ನಡೆದುಕೊಳ್ಳಬೇಕಿತ್ತು ಅನ್ನುತ್ತಿರೋ ಬಿಜೆಪಿ, ಕೂಡಲೇ ವಿನಯ ಕುಲಕರ್ಣಿ ಅವರನ್ನು ಬಂಧಿಸಬೇಕು ಅಂತಾ ಆಗ್ರಹಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:20 pm, Mon, 14 October 24