AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ವೈಯಕ್ತಿಕ ಹೇಳಿಕೆ: ಜಮೀರ್ ಅಹ್ಮದ್

ಸಿದ್ದರಾಮಯ್ಯ ಭಾವಿ ಮುಖ್ಯಮಂತ್ರಿ ಎಂಬ ಹೇಳಿಕೆ ವಿಚಾರಕ್ಕೆ ಈಗ ಬಿಜೆಪಿ ನಾಯಕರಿಂದಲೂ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗೆಂದು ಸಿದ್ದರಾಮಯ್ಯನವರೇ ಪ್ರಚಾರ ಮಾಡುವುದಕ್ಕೆ ಹೇಳಿರಬೇಕು. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರನ್ನು ಕೇಳಿ ಎಂದು ಕೊಪ್ಪಳದಲ್ಲಿ ಕೃಷಿ ಇಲಾಖೆ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ವೈಯಕ್ತಿಕ ಹೇಳಿಕೆ: ಜಮೀರ್ ಅಹ್ಮದ್
ಜಮೀರ್ ಅಹ್ಮದ್
TV9 Web
| Edited By: |

Updated on: Jun 19, 2021 | 5:44 PM

Share

ಬೆಂಗಳೂರು: ಮುಖ್ಯಮಂತ್ರಿ ಯಾರಾಗಬೇಕು ಎಂದು ಹೈಕಮಾಂಡ್ ತೀರ್ಮಾನಿಸುತ್ತದೆ. ನಾನು, ಡಿ.ಕೆ. ಶಿವಕುಮಾರ್ ತೀರ್ಮಾನ ಮಾಡೋಕೆ ಆಗಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿಕೆಗೆ ಶಾಸಕ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂಬುದು ನನ್ನ ವೈಯಕ್ತಿಕ ಹೇಳಿಕೆ. ರಾಜ್ಯದ ಜನರ ಅಭಿಪ್ರಾಯ ನಾನು ಹೇಳಿದ್ದೇನೆ ಎಂದು ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ.

ಸಿದ್ದರಾಮಯ್ಯ ಭಾವಿ ಮುಖ್ಯಮಂತ್ರಿ ಎಂಬ ಜಮೀರ್ ಅಹ್ಮದ್ ಹೇಳಿಕೆ ಕಾಂಗ್ರೆಸ್ ರಾಜಕೀಯದಲ್ಲಿ ಒಂದಷ್ಟು ಸಂಚಲನವನ್ನು ಮೂಡಿಸಿದೆ. ಜಮೀರ್​ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಪಕ್ಷದ ವಿಚಾರವನ್ನು ನಾನು ಮಾಧ್ಯಮದ ಮುಂದೆ ಚರ್ಚಿಸಲ್ಲ. ಎಲ್ಲಿ ಏನ್ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ ಎಂದು ಜಮೀರ್​ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಣೆ ತೋರಿದ್ದಾರೆ.

ಸಿದ್ದರಾಮಯ್ಯ ಭಾವಿ ಮುಖ್ಯಮಂತ್ರಿ ಎಂಬ ಶಾಸಕ ಜಮೀರ್ ಅಹ್ಮದ್ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಜಮೀರ್ ಅಹ್ಮದ್ ಹೇಳಿದ್ದು ಪಕ್ಷದ ಅಭಿಪ್ರಾಯವಲ್ಲ. ಶಾಸಕರು ಅವರ ಅಭಿಪ್ರಾಯವನ್ನು ಹೇಳಿದ್ದಾರೆ ಎಂದು ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಭಾವಿ ಮುಖ್ಯಮಂತ್ರಿ ಎಂಬ ಹೇಳಿಕೆ ವಿಚಾರಕ್ಕೆ ಈಗ ಬಿಜೆಪಿ ನಾಯಕರಿಂದಲೂ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗೆಂದು ಸಿದ್ದರಾಮಯ್ಯನವರೇ ಪ್ರಚಾರ ಮಾಡುವುದಕ್ಕೆ ಹೇಳಿರಬೇಕು. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರನ್ನು ಕೇಳಿ ಎಂದು ಕೊಪ್ಪಳದಲ್ಲಿ ಕೃಷಿ ಇಲಾಖೆ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ಸದ್ಯಕ್ಕೆ ಮುಖ್ಯಮಂತ್ರಿ ಯಾರೆಂಬ ಪ್ರಶ್ನೆಯೇ ಬರುವುದಿಲ್ಲ. ಮುಂದಿನ ಬಾರಿಯೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್‌ನವರು ಸುಮ್ಮನೆ ಹಗಲುಗನಸು ಕಾಣುತ್ತಿದ್ದಾರೆ ಎಂದು ಕೊಪ್ಪಳದಲ್ಲಿ ಕೃಷಿ ಇಲಾಖೆ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಅವರ ತಟ್ಟೆಯಲ್ಲೇ ಕತ್ತೆ ಬಿದ್ದಿದೆ, ಅವರು ಇನ್ನೇನು ಬಿಜೆಪಿ ಬಗ್ಗೆ ಮಾತಾಡ್ತಾರೆ? ನೀವು ಜಮೀರ್ ಅಹ್ಮದ್ ಅಥವಾ ಡಿಕೆಶಿ ಅವರನ್ನು ಕೇಳಿ. ನಾನು ಬಿಜೆಪಿ ಪಕ್ಷದಲ್ಲಿ‌ ಇದ್ದೇನೆ, ನಾನು ಕಾಂಗ್ರೆಸ್ ಅಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ಜಮೀರ್ ಹೃದಯವಂತ ರಾಜಕಾರಣಿ; ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ: ಸಿದ್ದರಾಮಯ್ಯ ಪ್ರತಿಕ್ರಿಯೆ

Siddaramaiah: ವಿಪಕ್ಷ ನಾಯಕ ಸಿದ್ದರಾಮಯ್ಯ ಮಹಾನ್ ಹರಿಶ್ಚಂದ್ರರಾ? ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಪ್ರಶ್ನೆ

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು