ಕಾಂಗ್ರೆಸ್ ಶಾಸಕರಿಂದ ಇಂದು ರಾಜಭವನಕ್ಕೆ ಮುತ್ತಿಗೆ; ಭದ್ರತೆಗಾಗಿ 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

| Updated By: sandhya thejappa

Updated on: Jul 22, 2021 | 8:53 AM

ಕಾಂಗ್ರೆಸ್ ನಾಯಕರು ಹಾಗೂ ಜೆಡಿಎಸ್ ನಾಯಕರ ಫೋನ್ ಕದ್ದಾಲಿಕೆ ಮಾಡಿದೆ ಅಂತಾ ಕಾಂಗ್ರೆಸ್ ಆರೋಪಿಸುತ್ತಿದೆ. ಅಲ್ಲದೇ ಇಂದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಮೊಳಗಿಸಲಿದೆ.

ಕಾಂಗ್ರೆಸ್ ಶಾಸಕರಿಂದ ಇಂದು ರಾಜಭವನಕ್ಕೆ ಮುತ್ತಿಗೆ; ಭದ್ರತೆಗಾಗಿ 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಕಾಂಗ್ರೆಸ್ (Congress) ನಾಯಕರ ದೂರವಾಣಿ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿ ಕೈ ಶಾಸಕರು ಮತ್ತು ಸಂಸದರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಲು ಮುಂದಾಗಿದ್ದು, ಇಂದು (ಜುಲೈ 22) ರಾಜಭವನಕ್ಕೆ (Raj Bhavan)ಮುತ್ತಿಗೆ ಹಾಕಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಕೆಪಿಸಿಸಿ ಕಚೇರಿಯಿಂದ ಪ್ರತಿಭಟನಾ ಱಲಿ ನಡೆಸಲಿರುವ ಶಾಸಕರು, ನಂತರ ರಾಜಭವನಕ್ಕೆ ಮುತ್ತಿಗೆ ಹಾಕಲಿದ್ದಾರೆ. ರಾಜಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ರಾಜಭವನದ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ರಾಜ್ಯ ಬಿಜೆಪಿಯಲ್ಲಿ ಬದಲಾವಣೆಯ ಬಿರುಗಾಳಿ ಎದ್ದಿರುವ ಸಮಯದಲ್ಲೇ, ಕೇಸರಿ ಪಾಳಯಕ್ಕೆ ಶಾಕ್ ಕೊಡಲು ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಕೇಂದ್ರ ಸರ್ಕಾರ ವಾಮಮಾರ್ಗದಲ್ಲಿ ಕುತಂತ್ರ ಮಾಡಿದೆ. ಅಂದರೆ, ಪೆಗಾಸಸ್ (Pegasus Spyware )ಎನ್ನುವ ಸಾಫ್ಟ್​ವೇರ್ ಮೂಲಕ ಕಾಂಗ್ರೆಸ್ ನಾಯಕರು ಹಾಗೂ ಜೆಡಿಎಸ್ ನಾಯಕರ ಫೋನ್ ಕದ್ದಾಲಿಕೆ ಮಾಡಿದೆ ಅಂತಾ ಕಾಂಗ್ರೆಸ್ ಆರೋಪಿಸುತ್ತಿದೆ. ಅಲ್ಲದೇ ಇಂದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಮೊಳಗಿಸಲಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದು, ಕೇಂದ್ರ ವಿಭಾಗ ಡಿಸಿಪಿ ಅನುಚೇತ್ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಕೊವಿಡ್ ಹಿನ್ನೆಲೆ ಸದ್ಯ ಪ್ರತಿಭಟನೆಗೆ ಯಾವುದೇ ಅವಕಾಶ ಇಲ್ಲ. ಹೀಗಿದ್ದೂ ಕಾಂಗ್ರೆಸ್ ಶಾಸಕರು ಮತ್ತು ಸಂಸದರು ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸ್ ತಿಮ್ಮಯ್ಯ ಸರ್ಕಲ್ನಲ್ಲಿ ಪೊಲೀಸರು ಸಿದ್ಧತೆ ನಡೆಸಿಕೊಂಡಿದ್ದಾರೆ.

ಇದನ್ನೂ ಓದಿ

ಪ್ರಣಬ್ ಮುಖರ್ಜಿ ಸೇರಿದಂತೆ ತನ್ನದೇ ಪಕ್ಷದ ನಾಯಕರ ಫೋನ್​ಗಳನ್ನೂ ಕಾಂಗ್ರೆಸ್ ಸರ್ಕಾರ ಕದ್ದಾಲಿಕೆ ಮಾಡಿತ್ತು!

ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಪ್ರಕರಣ: ಜುಲೈ 22ರಂದು ಕಾಂಗ್ರೆಸ್ ಶಾಸಕರಿಂದ ರಾಜಭವನ ಮುತ್ತಿಗೆ

(Congress MLAs and MPs are besieging the Raj Bhavan today and Over 200 policemen have been deployed for security)

Published On - 8:51 am, Thu, 22 July 21