AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರ್ಚಿ ಗುದ್ದಾಟದ ನಡುವೆ ನಾಳೆಯೇ ವಿದೇಶಕ್ಕೆ ಹಾರಲಿದ್ದಾರೆ ಸಿಎಂ ಸಿದ್ದರಾಮಯ್ಯ ಬಣದ ಕಾಂಗ್ರೆಸ್ ಶಾಸಕರು!

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಸಂಘರ್ಷ ತೀವ್ರಗೊಂಡಿರುವ ನಡುವೆಯೇ ಸಿಎಂ ಸಿದ್ದರಾಮಯ್ಯ ಬಣದ ಹಲವು ಶಾಸಕರು ಆಸ್ಟ್ರೇಲಿಯಾ ಪ್ರವಾಸಕ್ಕೆ ಸಜ್ಜಾಗಿದ್ದಾರೆ. ಕೆಲವೊಬ್ಬರು ವೀಸಾ ಕಾರಣ ಹಾಗೂ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗುವ ಆತಂಕದಿಂದ ರದ್ದುಪಡಿಸಿದರೂ, ಕುಟುಂಬದೊಂದಿಗೆ ತೆರಳಲು ಟಿಕೆಟ್ ಬುಕ್ ಮಾಡಿರುವವರು ಪ್ರಯಾಣ ಮುಂದುವರಿಸುತ್ತಿದ್ದಾರೆ ಎನ್ನಲಾಗಿದೆ.

ಕುರ್ಚಿ ಗುದ್ದಾಟದ ನಡುವೆ ನಾಳೆಯೇ ವಿದೇಶಕ್ಕೆ ಹಾರಲಿದ್ದಾರೆ ಸಿಎಂ ಸಿದ್ದರಾಮಯ್ಯ ಬಣದ ಕಾಂಗ್ರೆಸ್ ಶಾಸಕರು!
ಕುರ್ಚಿ ಗುದ್ದಾಟದ ನಡುವೆ ವಿದೇಶಕ್ಕೆ ಹಾರಲು ಕಾಂಗ್ರೆಸ್ ಶಾಸಕರು ಸಜ್ಜು (ಸಾಂದರ್ಭಿಕ ಚಿತ್ರ)Image Credit source: tv9
ಪ್ರಸನ್ನ ಗಾಂವ್ಕರ್​
| Edited By: |

Updated on: Feb 16, 2026 | 9:28 AM

Share

ಬೆಂಗಳೂರು, ಫೆಬ್ರವರಿ 16: ಕರ್ನಾಟಕ ರಾಜಕೀಯದಲ್ಲಿ, ಅದರಲ್ಲೂ ಕಾಂಗ್ರೆಸ್​ನಲ್ಲಿ (Congress) ಅಧಿಕಾರ ಹಂಚಿಕೆ ಸಂಘರ್ಷ ತೀವ್ರವಾಗಿರುವ ನಡುವೆಯೇ, ಸಮಾನ ಮನಸ್ಕ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸಕ್ಕೆ ತೆರಳಲು ಸಜ್ಜಾಗಿದ್ದಾರೆ. ಮಂಗಳವಾರ ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಲು ತೀರ್ಮಾನಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಪ್ರವಾಸಕ್ಕೆ ಹೋಗುವವರಲ್ಲಿ ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರೇ ಹೆಚ್ಚು ಸಂಖ್ಯೆಯಲ್ಲಿ ಇದ್ದಾರೆ ಎಂಬುದು ತಿಳಿದುಬಂದಿದೆ.

ವೀಸಾ ಸಿಗದ ಕಾರಣ ಕೆಲ ಶಾಸಕರು ಪ್ರವಾಸವನ್ನು ರದ್ದು ಮಾಡಿಕೊಂಡಿದ್ದಾರೆ. ಇನ್ನೂ ಕೆಲವರು ವಿವಿಧ ಕಾರಣಗಳನ್ನು ನೀಡಿ ಈ ಪ್ರವಾಸದಿಂದ ದೂರ ಉಳಿದಿದ್ದಾರೆ. ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಬಹುದೆಂಬ ಆತಂಕವೂ ಕೆಲವರ ನಿರ್ಧಾರಕ್ಕೆ ಕಾರಣವಾಗಿದೆ ಎಂಬ ಮಾತುಗಳು ಕಾಂಗ್ರರಸ್​ ಆಂತರಿಕ ವಲಯದಲ್ಲಿ ಕೇಳಿಬರುತ್ತಿವೆ.

ಕೆಲ ಶಾಸಕರು ಹೋಗುವುದೋ ಬೇಡವೋ ಎಂಬ ಅಂತಿಮ ನಿರ್ಧಾರವನ್ನು ಇಂದು ಕೈಗೊಳ್ಳಲಿದ್ದು, ಕುಟುಂಬ ಸಹಿತ ಟಿಕೆಟ್ ಬುಕ್ ಮಾಡಿರುವವರು ಪ್ರವಾಸ ರದ್ದುಪಡಿಸಲು ಹಿಂದೇಟು ಹಾಕುತ್ತಿದ್ದಾರೆ. ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಗುರಿಯಾಗಬೇಕಾಗಬಹುದು ಎಂಬ ಕಾರಣದಿಂದ ಅವರು ಪ್ರಯಾಣ ಮುಂದುವರಿಸಲು ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ, ಒಬ್ಬರೇ ಟಿಕೆಟ್ ಬುಕ್ ಮಾಡಿದ್ದ ಕೆಲವರು ತಮ್ಮ ಪ್ರಯಾಣವನ್ನು ಈಗಾಗಲೇ ರದ್ದುಪಡಿಸಿದ್ದಾರೆ.

ಈ ಎಲ್ಲ ಗೊಂದಲಗಳ ನಡುವೆಯೇ ಮಂಗಳವಾರ ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಆಸ್ಟ್ರೇಲಿಯಾ ಕಡೆ ಶಾಸಕರ ಪ್ರಯಾಣ ನಿಗದಿಯಾಗಿದೆ. ಮಾರ್ಚ್ 1ರಂದು ಅವರು ವಾಪಸ್ಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತೊಂದೆಡೆ, ಕಾಂಗ್ರೆಸ್ ಕುರ್ಚಿ ಗುದ್ದಾಟ ತೀವ್ರಗೊಳ್ಳುವ ಸುಳಿವು ಗೋಚರಿಸಿದೆ. ಭಾನುವಾರವಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಭಿನ್ನಾಭಿಪ್ರಾಯ ಬೇಡ. ಹೊಂದಾಣಿಕೆಯ ಮೂಲಕ ಮುಂದುವರಿದರೆ ಒಳ್ಳೆಯದು ಎಂದು ರಾಜ್ಯ ನಾಯಕರಿಗೆ ಕಿವಿ ಮಾತು ಹೇಳಿದ್ದಾರೆ. ಆದರೆ, ಪೂರ್ಣಾವಧಿ ಸಿದ್ದರಾಮಯ್ಯ ಅವರೇ ಸಿಎಂ ಎಂಬ ಎಂಎಲ್​ಸಿ ಯತೀಂದ್ರ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್ ಬಣದ ಶಾಸಕರ ಕೌಂಟರ್ ಮುಂದುವರಿದೇ ಇದೆ. ಡಿಕೆಶಿ ಸಿಎಂ ಆಗಲೇಬೇಕು. ಅವರಿಗೆ ಯಾವಾಗ ಏನು ಮಾಡಬೇಕು ಎಂಬುದು ಚೆನ್ನಾಗಿಯೇ ಗೊತ್ತಿದೆ ಎಂದು ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಮಾತಿಗೂ ಡೋಂಟ್​​ ಕೇರ್​: ‘ಕೈ’ ಮನೆಯಲ್ಲಿ ನಿಲ್ಲದ ಬಣಗಳ ವಾರ್

ಒಟ್ಟಿನಲ್ಲಿ ಕಾಂಗ್ರೆಸ್ ಕುರ್ಚಿ ಗುದ್ದಾಟ ಹಾಗೂ ಒಳರಾಜಕೀಯ ಗೊಂದಲಗಳು ತೀವ್ರವಾಗಿರುವ ಸಂದರ್ಭದಲ್ಲೇ ಶಾಸಕರು ವಿದೇಶ ಪ್ರವಾಸಕ್ಕೆ ಸಿದ್ಧರಾಗಿದ್ದಾರೆ. ಸದ್ಯ ಇದನ್ನು ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆ ಎಂದೇ ಹೇಳಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು