CBI ರೇಡ್ ಬಳಿಕ.. ಸಂಸದ DK ಸುರೇಶ್ಗೆ ಕೊರೊನಾ ಪಾಸಿಟಿವ್
ಬೆಂಗಳೂರು: KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೇಲೆ CBI ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ ಬೆನ್ನಲ್ಲೇ ಅವರ ಸಹೋದರ, ಸಂಸದ ಡಿ.ಕೆ. ಸುರೇಶ್ರ ನಿವಾಸದ ಮೇಲೂ ದಾಳಿ ನಡೆದಿತ್ತು. ಇದೇ ವೇಳೆ ಇಬ್ಬರೂ ಸಹೋದರರ ನಿವಾಸದ ಮುಂದೆ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು. ನಿನ್ನೆ ಮನೆಯ ಬಳಿ ಅತಿಯಾಗಿ ಜನ ಸಂದಣಿ ಇದ್ದ ಹಿನ್ನೆಲೆಯಲ್ಲಿ ಸಂಸದ ಡಿ.ಕೆ. ಸುರೇಶ್ ಕೊವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇಂದು ಸುರೇಶ್ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಹಾಗಾಗಿ […]

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೇಲೆ CBI ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ ಬೆನ್ನಲ್ಲೇ ಅವರ ಸಹೋದರ, ಸಂಸದ ಡಿ.ಕೆ. ಸುರೇಶ್ರ ನಿವಾಸದ ಮೇಲೂ ದಾಳಿ ನಡೆದಿತ್ತು. ಇದೇ ವೇಳೆ ಇಬ್ಬರೂ ಸಹೋದರರ ನಿವಾಸದ ಮುಂದೆ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು.
ನಿನ್ನೆ ಮನೆಯ ಬಳಿ ಅತಿಯಾಗಿ ಜನ ಸಂದಣಿ ಇದ್ದ ಹಿನ್ನೆಲೆಯಲ್ಲಿ ಸಂಸದ ಡಿ.ಕೆ. ಸುರೇಶ್ ಕೊವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇಂದು ಸುರೇಶ್ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಹಾಗಾಗಿ ಸಂಸದ ಸುರೇಶ್ ಈಗ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ.
#Covid19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ #Corona ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ.
— DK Suresh (@DKSureshINC) October 6, 2020

Published On - 12:56 pm, Tue, 6 October 20



