Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜಾನ್​ ವೇಳೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ 1 ಗಂಟೆ ವಿನಾಯಿತಿ ನೀಡಿ: ಸಿಎಂಗೆ ಪತ್ರ

ಮುಸ್ಲಿಂ ಸರ್ಕಾರಿ ನೌಕರರಿಗೆ ರಂಜಾನ್ ತಿಂಗಳಲ್ಲಿ ಕೆಲಸದ ಸಮಯದಲ್ಲಿ ಒಂದು ಗಂಟೆ ವಿನಾಯಿತಿ ನೀಡುವಂತೆ ಕೆಪಿಸಿಸಿ ಉಪಾಧ್ಯಕ್ಷರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳು ಈಗಾಗಲೇ ಇಂತಹ ವಿನಾಯಿತಿ ನೀಡಿವೆ. ಕರ್ನಾಟಕದಲ್ಲೂ ಇದೇ ರೀತಿಯ ವಿನಾಯಿತಿ ನೀಡಬೇಕೆಂದು ಮನವಿ ಮಾಡಿದ್ದಾರೆ.

ರಂಜಾನ್​ ವೇಳೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ 1 ಗಂಟೆ ವಿನಾಯಿತಿ ನೀಡಿ: ಸಿಎಂಗೆ ಪತ್ರ
ಸಿಎಂ ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on:Feb 21, 2025 | 9:45 AM

ಬೆಂಗಳೂರು, ಫೆಬ್ರವರಿ 21: ರಂಜಾನ್ (Ramadan)​ ಸಮಯದಲ್ಲಿ ಉಪವಾಸ ತೊರೆಯಲು ಮುಸ್ಲಿಂ ಸರ್ಕಾರಿ ನೌಕರರಿಗೆ (Government Employees) ಕೆಲಸದ ಸಮಯದಲ್ಲಿ ಒಂದು ಗಂಟೆ ವಿನಾಯಿತಿ ನೀಡುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಕೆಪಿಸಿಸಿ ಉಪಾಧ್ಯಕ್ಷರಾದ ಸೈಯದ್​ ಅಹ್ಮದ್ ಮತ್ತು ನಜೀರ್​ ಅಹ್ಮದ್​ ಪತ್ರ ಬರೆದಿದ್ದಾರೆ. ಈಗಾಗಲೇ ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ರಂಜಾನ್​ ಉಪವಾಸ ತೊರೆಯಲು ಅನುಕೂಲವಾಗುವಂತೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ ಅಲ್ಲಿನ ಸರ್ಕಾರಗಳು ವಿನಾಯಿತಿ ನೀಡುತ್ತಿವೆ. ಅದೇರೀತಿ ರಾಜ್ಯದಲ್ಲೂ ಕೂಡ ವಿನಾಯಿತಿ ನೀಡುವಂತೆ ಕೋರಿ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಪತ್ರದಲ್ಲಿ ಏನಿದೆ?

“ರಂಜಾನ್​ ತಿಂಗಳು ಸಮೀಸುತ್ತಿದ್ದು, ಈಗಾಗಲೇ ಆಂಧ್ರಪ್ರದೇಶ, ತೆಲಂಗಾಣ ಸರ್ಕಾರವು ರಂಜಾನ್​ ತಿಂಗಳಲ್ಲಿ ಮುಸ್ಲಿಂ ಬಾಂಧವರು ಒಂದು ತಿಂಗಳು ಉಪವಾಸ ಇರುತ್ತಾರೆ. ಹೀಗಾಗಿ, ಅಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಜೆ 4 ಗಂಟೆಯ ನಂತರ ಅವರುಗಳ ನಿವಾಸಗಳಲ್ಲಿ ಉಪವಾಸ ಬಿಡಲು (ಇಪ್ತಿಯಾರ್​) ಅನುಮತಿ ನೀಡಲಾಗಿದೆ.”

ಇದನ್ನೂ ಓದಿ: ರಂಜಾನ್ ಮಾಸದಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಆಫೀಸ್​ನಿಂದ ಬೇಗ ಹೊರಡಲು ಅವಕಾಶ; ಬಿಜೆಪಿ ಆಕ್ರೋಶ

“ಆದುದರಿಂದ ದಯಮಾಡಿ ತಾವು ನಮ್ಮ ಕರ್ನಾಟಕದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಜೆ 4 ಗಂಟೆಯ ನಂತರ ಅವರುಗಳ ನಿವಾಸದಲ್ಲಿ ಉಪವಾಸ ಬಿಡಲು (ಇಪ್ತಿಯಾರ್​) ಅನುಮತಿ ನೀಡುವಂತೆ ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:42 am, Fri, 21 February 25

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ