ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್‌ ಪಕ್ಷ, ರಾಹುಲ್‌ ಗಾಂಧಿ ಜನರಿಗೆ ಕ್ಷಮೆ ಕೇಳಲಿ: ಅಶೋಕ ಆಗ್ರಹ

|

Updated on: Jun 24, 2024 | 2:49 PM

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿಯಿಂದ ಇಂದು ತುರ್ತು ಪರಿಸ್ಥಿತಿ ಸಂಬಂಧ ರಾಹುಲ್‌ ಗಾಂಧಿ ಕ್ಷಮೆ ಕೋರಬೇಕೆಂಬ ಆಗ್ರಹದ ಪೋಸ್ಟರ್‌ ಅಭಿಯಾನ ಮಾಡಲಾಯಿತು. ಬಿಜಿಪಿ ನಾಯಕರು ಅಭಿಯಾನದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್​. ಅಶೋಕ್​, ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ ಮಾಡಿದ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್​ ಗಾಂಧಿ ಜನರಿಗೆ ಕ್ಷೇಮೆ ಕೇಳುವಂತೆ ಆಗ್ರಹಿಸಿದ್ದಾರೆ.

ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್‌ ಪಕ್ಷ, ರಾಹುಲ್‌ ಗಾಂಧಿ ಜನರಿಗೆ ಕ್ಷಮೆ ಕೇಳಲಿ: ಅಶೋಕ ಆಗ್ರಹ
ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್‌ ಪಕ್ಷ, ರಾಹುಲ್‌ ಗಾಂಧಿ ಜನರಿಗೆ ಕ್ಷಮೆ ಕೇಳಲಿ: ಅಶೋಕ ಆಗ್ರಹ
Follow us on

ಬೆಂಗಳೂರು, ಜೂನ್‌ 24: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ ಮಾಡಿದ್ದ ಕಾಂಗ್ರೆಸ್ ಪಕ್ಷ ಮತ್ತು​ ನಾಯಕ ರಾಹುಲ್‌ ಗಾಂಧಿ (Rahul Gandhi) ರಾಮ್‌ಲೀಲಾ ಮೈದಾನದಲ್ಲಿ ತಲೆಬಾಗಿ ನಿಂತು ಜನರಿಗೆ ಕ್ಷಮೆ ಕೇಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಆಗ್ರಹಿಸಿದ್ದಾರೆ. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿಯಿಂದ ನಡೆದ ತುರ್ತು ಪರಿಸ್ಥಿತಿ ಸಂಬಂಧ ರಾಹುಲ್‌ ಗಾಂಧಿ ಕ್ಷಮೆ ಕೋರಬೇಕೆಂಬ ಆಗ್ರಹದ ಪೋಸ್ಟರ್‌ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್‌ ರಚಿಸಿದ ಸಂವಿಧಾನವನ್ನು ಮೂಲೆಗೆ ತಳ್ಳಿ ಸರ್ವಾಧಿಕಾರಿ ಧೋರಣೆ ತೋರಿದ ಕಾಂಗ್ರೆಸ್‌ ಪಕ್ಷ ಹಾಗೂ ಇಂದಿರಾ ಗಾಂಧಿ ರಾತ್ರೋರಾತ್ರಿ ತುರ್ತು ಪರಿಸ್ಥಿತಿ ಹೇರಿದ್ದರು. ನ್ಯಾಯಾಂಗ ವ್ಯವಸ್ಥೆಯನ್ನು ಕಪಿಮುಷ್ಟಿಗೆ ತೆಗೆದುಕೊಂಡು, ಪತ್ರಕರ್ತರನ್ನು ಜೈಲಿಗೆ ಹಾಕಿದ್ದರು. ಎಲ್‌.ಕೆ.ಅಡ್ವಾಣಿ, ಅಟಲ್‌ ಬಿಹಾರಿ ವಾಜಪೇಯಿ ಮೊದಲಾದ ಘಟಾನುಘಟಿ ನಾಯಕರನ್ನು ಜೈಲಿಗೆ ತಳ್ಳಿದ್ದರು ಎಂದರು.

ಇದನ್ನೂ ಓದಿ: ಬೆಂಗಳೂರು: ಮೈ ಮೇಲೆ ಸಗಣಿ ಸುರಿದುಕೊಂಡು ರೈತರ ಪ್ರತಿಭಟನೆ, ಬೇಡಿಕೆ ಈಡೇರಿಸುವಂತೆ ಒತ್ತಾಯ

ಆಗ ನಾನು ವಿವಿ ಪುರ ಕಾಲೇಜಿನಲ್ಲಿ ಮೊದಲ ಪಿಯುಸಿ ವಿದ್ಯಾರ್ಥಿಯಾಗಿದ್ದೆ. ಯಶವಂತಪುರ ಸರ್ಕಲ್‌ನಲ್ಲಿ ಆರ್‌ಎಸ್‌ಎಸ್‌ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಇಂದಿರಾಗಾಂಧಿ ವಿರುದ್ಧ ಎರಡು ವಾಕ್ಯ ಘೋಷಣೆ ಕೂಗಿದ್ದೆ. ಆಗ ಯಶವಂತಪುರ ಪೊಲೀಸರು ಬಂಧಿಸಿ ಚಿತ್ರಹಿಂಸೆ ನೀಡಿದ್ದರು. ನಮ್ಮ ಇಡೀ ಕುಟುಂಬದಲ್ಲಿ ಆರ್‌ಎಸ್‌ಎಸ್‌ನವರೇ ಇದ್ದರು. ಅವರು ಕೂಡ ತಲೆಮರೆಸಿಕೊಳ್ಳಬೇಕಾಯಿತು. ನಾನು ಒಂದು ತಿಂಗಳು ಸ್ವಾತಂತ್ರ್ಯ ಉದ್ಯಾನದ ಜೈಲಿನಲ್ಲಿದ್ದೆ. 200 ಜನರಿಗೆ ಒಂದು ಶೌಚಾಲಯವಿತ್ತು. ಊಟ ಕೂಡ ಕೊಡುತ್ತಿರಲಿಲ್ಲ. ಆ ಕಷ್ಟಗಳು ಈಗಲೂ ನೆನಪಿನಲ್ಲಿದೆ. ಜನರಿಗೆ ಅಷ್ಟು ಕಿರುಕುಳ ನೀಡಿದ ಕಾಂಗ್ರೆಸ್‌ ಈಗ ಅಧಿಕಾರದಲ್ಲಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಸಂವಿಧಾನ ಕುರಿತ ಹೇಳಿಕೆ ಡ್ಯಾಮೇಜ್ ಕಂಟ್ರೋಲ್​ಗೆ ಸಂಘ ಪರಿವಾರದಿಂದ ಯೋಜನೆ: ಕಾಂಗ್ರೆಸ್​ಗೇ ತಿರುಗುಬಾಣವಾಗಿಸಲು ತಂತ್ರ

ಸಂವಿಧಾನಕ್ಕೆ ಅಪಮಾನ ಮಾಡಿದ ಕಾಂಗ್ರೆಸ್‌ ಈಗ ಯಾವ ಮುಖ ಇಟ್ಟುಕೊಂಡು ಜನರ ಬಳಿ ಹೋಗುತ್ತಾರೆ ಎಂದು ಅರ್ಥವಾಗುತ್ತಿಲ್ಲ. ಆದ್ದರಿಂದ ರಾಹುಲ್‌ ಗಾಂಧಿ ಅವರಿಗೆ ಮಾನ, ಮರ್ಯಾದೆ ಇದ್ದರೆ ರಾಮ್‌ಲೀಲಾ ಮೈದಾನಕ್ಕೆ ಬಂದು ಇಡೀ ದೇಶದ ಜನರ ಮುಂದೆ ತಲೆಬಾಗಿ ಕ್ಷಮೆ ಕೇಳಬೇಕು. ಸಂವಿಧಾನಕ್ಕೆ ಅಪಚಾರ ಮಾಡಿದ ದೇಶ ವಿರೋಧಿ ಕಾಂಗ್ರೆಸ್‌ ಪಕ್ಷ ಕ್ಷಮೆ ಕೇಳಬೇಕು. ಸಂವಿಧಾನ ಬದಲಾವಣೆ ಮಾಡಲಿದ್ದೇವೆ ಎಂದು ಬಿಜೆಪಿಯ ಮೇಲೆ ಆರೋಪ ಮಾಡುತ್ತಾರೆ. ಆದರೆ ದ್ರೋಹ ಬಗೆದಿದ್ದು ಕಾಂಗ್ರೆಸ್‌ ಎಂದು ದೂರಿದರು.

ಸಂವಿಧಾನ ನಮಗೆ ಭಗವದ್ಗೀತೆಗೆ ಸಮಾನ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ ಸಂವಿಧಾನವನ್ನು ಕಾಂಗ್ರೆಸ್‌ ಬದಲಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.