Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಗ್ರಾಮ ಪಂಚಾಯತಿ ಸದಸ್ಯರಿಗೆ ಅಭಿನಂದನೆ ಕಾರ್ಯಕ್ರಮ; ಬಿರಿಯಾನಿಗಾಗಿ ಮುಗಿಬಿದ್ದ ಕಾಂಗ್ರೆಸ್ ಕಾರ್ಯಕರ್ತರು

ಬಿರಿಯಾನಿ ತಿನ್ನುವುದಕ್ಕಾಗಿ ಜನರು ಮುಗಿಬಿದ್ದ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಗ್ರಾಮದ ಬಳಿ ನಡೆದಿದೆ. ಗ್ರಾಮ ಪಂಚಾಯತಿ ಸದ್ಯಸರಿಗಾಗಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಊಟಕ್ಕಾಗಿ ಬಿರಿಯಾನಿಯನ್ನು ಮಾಡಿಸಲಾಗಿತ್ತು.

ಕೋಲಾರದಲ್ಲಿ ಗ್ರಾಮ ಪಂಚಾಯತಿ ಸದಸ್ಯರಿಗೆ ಅಭಿನಂದನೆ ಕಾರ್ಯಕ್ರಮ; ಬಿರಿಯಾನಿಗಾಗಿ ಮುಗಿಬಿದ್ದ ಕಾಂಗ್ರೆಸ್ ಕಾರ್ಯಕರ್ತರು
ಬಿರಿಯಾನಿ ತಿನ್ನಲು ಕಾಂಗ್ರೆಸ್​ ಕಾರ್ಯಕರ್ತರ ನಡುವೆ ನೂಕುನುಗ್ಗಲು
Follow us
sandhya thejappa
|

Updated on:Mar 18, 2021 | 6:32 PM

ಕೋಲಾರ: ಜಿಲ್ಲೆಯ ಕೆಜಿಎಫ್​ ವಿಧಾನಸಭಾ ಕ್ಷೇತ್ರದಲ್ಲಿ ಇನ್ನು ಗ್ರಾಮ ಪಂಚಾಯತಿ ಚುನಾವಣೆ ಸದ್ದು ಮಾಡುತ್ತಲೇ ಇದೆ. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳಿಗೆ ಬೃಹತ್​ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು.

ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಗ್ರಾಮದ ಬಳಿ ನಡೆದ ಅಭಿನಂದನಾ ಸಮಾರಂಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಬಿರಿಯಾನಿ ತಿನ್ನಲು ತಳ್ಳಾಟ ನೂಕಾಟ ಏರ್ಪಟ್ಟಿತ್ತು. ಕಾರ್ಯಕ್ರಮದಲ್ಲಿ ಊಟಕ್ಕಾಗಿ ಬಿರಿಯಾನಿಯನ್ನು ಮಾಡಿಸಲಾಗಿತ್ತು. ಈ ವೇಳೆ ಬಿರಿಯಾನಿ ತಿನ್ನಲು ನಾ ಮುಂದು ತಾ ಮಂದು ಎಂದು ಜನರು ಬಿರಿಯಾನಿಗಾಗಿ ಮುಗಿಬಿದ್ದರು.

ಕೆಜಿಎಫ್ ಕ್ಷೇತ್ರದ ಕಾಂಗ್ರೆಸ್ ಶಾಸಕಿ ರೂಪಾ ಶಶಿಧರ್ ನೂತನ ಗ್ರಾಮ ಪಂಚಾಯತಿ ಸದಸ್ಯರಿಗಾಗಿ ಅಭಿನಂದನೆ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ 500 ಕೆಜಿ ಚಿಕನ್ ಮತ್ತು 500 ಕೆಜಿ ಬಿರಿಯಾನಿಯನ್ನು ಮಾಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಬಿರಿಯಾನಿ ತಿನ್ನಲು ತಟ್ಟೆಗಳನ್ನು ಹಿಡಿದು ನಾ ಮುಂದು ತಾ ಮುಂದೆ ಎಂದು ಕಿತ್ತಾಟ ಶುರುವಾಯಿತು.

ಸುಡುವ ಬಿಸಿಲಿನ ನಡುವೆಯೂ ಬಿಸಿ ಬಿಸಿ ಬಿರಿಯಾನಿ ತಿಂದ ಕಾರ್ಯಕರ್ತರು ಮುಂದಿನ ಚುನಾವಣೆಗೆ ಭರ್ಜರಿಯಾಗಿ ತಯಾರಾಗುತ್ತಿದ್ದಾರೆ. ಇನ್ನು ಸಮಾವೇಶಕ್ಕಾಗಿ ದೊಡ್ಡಕಾರಿ ಬಳಿ ಬೃಹತ್​ ವೇದಿಕೆಯನ್ನು ಹಾಕಲಾಗಿತ್ತು, ಕಾರ್ಯಕ್ರಮದಲ್ಲಿ ಶಾಸಕಿ ರೂಪಾ ಶಶಿಧರ್​, ಮಾಜಿ ಸಂಸದ ಕೆ.ಹೆಚ್.​ಮುನಿಯಪ್ಪ, ಕೋಲಾರ ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿ ಸಂಸದ ಕೆ.ಹೆಚ್. ಮುನಿಯಪ್ಪ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು. ಬಿಜೆಪಿ ಸರ್ಕಾರ ಜನ ವಿರೋಧಿ ಸರ್ಕಾರ ಹಾಗೂ ಸರ್ವಾಧಿಕಾರಿ ದೋರಣೆ ಅನುಸರಿಸುತ್ತಿದೆ. ಸಂಘ ಪರಿವಾರದವರೇ ಈ ಸರ್ಕಾರವನ್ನು ಬೀಳಿಸುವ ದಿನಗಳು ದೂರವಿಲ್ಲ ಎಂದರು. ಇನ್ನು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮುಂದಿನ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವೇದಿಕೆಯಲ್ಲಿದ್ದ ನಾಯಕರು ವಿಶ್ವಾಸ ವ್ಯಕ್ತಪಡಿಸಿದರು.

ಮಟನ್ ಮತ್ತು ಚಿಕನ್ ಬಿರಿಯಾನಿಗಾಗಿ ನಾ ಮುಂದು ತಾ ಮುಂದು ಎಂದು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನೂಕುನುಗ್ಗಲು

ಬಿರಿಯಾನಿಯನ್ನು ತಿನ್ನುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು

ಗ್ರಾಮ ಪಂಚಾಯತಿ ಸದ್ಯಸರ ಅಭಿನಂದನಾ ಕಾರ್ಯಕ್ರಮದಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು

ಕೆಜಿಎಫ್ ತಾಲೂಕಿನ ದೊಡ್ಡಕಾರಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮ

ಇದನ್ನೂ ಓದಿ

ಕಾಂಗ್ರೆಸ್‌ನಲ್ಲಿ ಮಾತ್ರ ಮಹಾನ್‌ ನಾಯಕರಿದ್ದಾರಾ ಬಿಜಿಪಿಯಲ್ಲಿಲ್ವಾ? ಸಿದ್ದರಾಮಯ್ಯ ಟಾಂಗ್‌

ಬಿಜೆಪಿ ನಾಯಕರಿಗೂ ಈ ಆರೋಪಿಗಳಿಗೂ ಏನು ಸಂಬಂಧ? ಟ್ವಿಟರ್ ಸಮರದಲ್ಲಿ ಕಾಂಗ್ರೆಸ್​​ ಪ್ರಶ್ನೆ

Published On - 5:29 pm, Thu, 18 March 21

VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ