ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಪ್ಲಾನ್; ಇಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ

ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಮುಂದಾಗಿದೆ. ಗೆಲ್ಲುವಂತಹ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಮುಂದಾಗಿದೆ, ಇಂದು ಸಭೆ ನಡೆಯಲಿದ್ದು ಚರ್ಚೆ ನಡೆಸಿ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಪ್ಲಾನ್; ಇಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ
ಪ್ರಾತಿನಿಧಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Mar 04, 2024 | 11:50 AM

ಬೆಂಗಳೂರು, ಮಾರ್ಚ್.04: ಲೋಕಸಭಾ ಚುನಾವಣೆಗೆ (Lok Sabha Election) ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸಿವೆ. ಬಿಜೆಪಿ (BJP) ಅಭ್ಯರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆ ಬೆನ್ನಲ್ಲೇ ಇತ್ತ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ (Congress) ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಗೆಲ್ಲುವ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಅಭ್ಯರ್ಥಿಗಳ ಆಯ್ಕೆಗೆ ಇಂದು ಅಂತಿಮ ಕಸರತ್ತು ನಡೆಯುವ ಸಾಧ್ಯತೆ ಇದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ಬೆಂಗಳೂರಲ್ಲಿ ಇಂದು ಕಾಂಗ್ರೆಸ್ ನಾಯಕರ ಅಭ್ಯರ್ಥಿಗಳ ಆಯ್ಕೆ ಸಭೆ ನಡೆಯಲಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಅಲರ್ಟ್ ಆದ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲು ಮುಂದಾಗಿದೆ.

ಕಳೆದ ಬಾರಿ ನಡೆದ ಸಭೆಯಲ್ಲಿ ಸಮೀಕ್ಷಾ ವರದಿ ಬಗ್ಗೆ ಚರ್ಚೆ ನಡೆದಿತ್ತು. ಈಗಾಗಲೇ ವೀಕ್ಷಕರು, ಜಿಲ್ಲಾ ಉಸ್ತುವಾರಿ ಸಚಿವರಿಂದ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಎಐಸಿಸಿ, ಕೆಪಿಸಿಸಿ, ಸಿಎಂ, ಡಿಸಿಎಂ ಮಾಡಿಸಿದ್ದ ಸಮೀಕ್ಷೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಯಾವುದೇ ಗೊಂದಲವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳ ಶಾರ್ಟ್​ಲಿಸ್ಟ್ ಬಿಡುಗಡೆ ಮಾಡಲಿದ್ದಾರೆ. ನಂತರ ಕಾಂಗ್ರೆಸ್ ನಾಯಕರು ಪ್ರತಿ ಕ್ಷೇತ್ರಕ್ಕೆ ಇಬ್ಬರ ಹೆಸರು ಶಿಫಾರಸು ಮಾಡಲಿದ್ದಾರೆ. ಕಾಂಗ್ರೆಸ್ ನಾಯಕರು ಎಐಸಿಸಿಗೆ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಲಿದ್ದಾರೆ. ರಾಜ್ಯದಲ್ಲಿ ಟಾರ್ಗೆಟ್ 20 ರೀಚ್ ಆಗಲು ಕಾಂಗ್ರೆಸ್ ನಾಯಕರ ಕಸರತ್ತು ನಡೆಸುತ್ತಿದ್ದಾರೆ. ಬೇಗ ಅಭ್ಯರ್ಥಿಗಳ ಆಯ್ಕೆಯಾದರೆ ಕ್ಷೇತ್ರದಲ್ಲಿ ಕೆಲಸ ಮಾಡಲು ಅನುಕೂಲ ಆಗುತ್ತೆ. ಸರ್ಕಾರದ ಗ್ಯಾರಂಟಿ ಯೋಜನೆ ಜೊತೆ ವೈಯಕ್ತಿಕ ಸಾಧನೆ ತಿಳಿಸಲು ಅನುಕೂಲ ಆಗುತ್ತೆ. ಹೀಗಾಗಿ ಕಾಂಗ್ರೆಸ್ ನಾಯಕರು ಮಹತ್ವದ ಸಭೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ರಂಗೇರಿದ ಮಂಡ್ಯ ಲೋಕಸಭಾ ಅಖಾಡ; ಟಿಕೆಟ್ ಘೋಷಣೆಗೂ ಮೊದಲೇ ಹಾಲಿ ಸಂಸದೆ ಸುಮಲತಾ ಫುಲ್ ಆಕ್ಟೀವ್

ಇನ್ನು ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಸಂಬಂಧ ವಾರದೊಳಗೆ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿ‌ನಲ್ಲಿ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಮತ್ತು ಕೋರ್ ಕಮಿಟಿ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಚರ್ಚೆ ನಡೆಸಿದೆ. ಕಳೆದ ಎರಡು ದಿನಗಳಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದ ವೀಕ್ಷಕರು ವರದಿಯನ್ನು ರಾಜ್ಯ ಚುನಾವಣಾ ಸಮಿತಿಗೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಸಮಿತಿ ಮತ್ತು ಕೋರ್ ಕಮಿಟಿ ವೀಕ್ಷಕರಿಂದ ಸಲ್ಲಿಕೆಯಾದ ಹೆಸರುಗಳ ಬಗ್ಗೆ ಚರ್ಚೆ ನಡೆಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್