ರಾಹುಲ್ ಗಾಂಧಿ ಇಡಿ ವಿಚಾರಣೆ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ; ವಿಚಾರಣೆ ಮಾಡಬಾರದೆಂಬ ಒತ್ತಡ‌ ಒಂದು ರೀತಿ ಗೂಂಡಾಗಿರಿ ಎಂದ ಕೆ.ಎಸ್.ಈಶ್ವರಪ್ಪ

ವಿಜಯಪುರ, ಮಂಡ್ಯ, ರಾಯಚೂರು, ಚಾಮರಾಜನಗರ, ಮಡಿಕೇರಿ, ಉಡುಪಿ, ಕೊಪ್ಪಳ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೈ ನಾಯಕರು ಬಿಜೆಪಿ ವಿರುದ್ಧ & ಮೋದಿ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

ರಾಹುಲ್ ಗಾಂಧಿ ಇಡಿ ವಿಚಾರಣೆ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ; ವಿಚಾರಣೆ ಮಾಡಬಾರದೆಂಬ ಒತ್ತಡ‌ ಒಂದು ರೀತಿ ಗೂಂಡಾಗಿರಿ ಎಂದ ಕೆ.ಎಸ್.ಈಶ್ವರಪ್ಪ
ಕಾಂಗ್ರೆಸ್ ಪ್ರತಿಭಟನೆ
Follow us
TV9 Web
| Updated By: ಆಯೇಷಾ ಬಾನು

Updated on:Jun 17, 2022 | 1:29 PM

ಬೆಂಗಳೂರು: ರಾಹುಲ್ ಗಾಂಧಿ(Rahul Gandhi) ಇಡಿ ವಿಚಾರಣೆ ಖಂಡಿಸಿ, ಕಾಂಗ್ರೆಸ್ ನಿನ್ನೆ ದೊಡ್ಡ ಮಟ್ಟದಲ್ಲಿ ಱಲಿ ಮಾಡಿತ್ತು ಇಂದು ಕೂಡ ಈ ಪ್ರತಿಭಟನೆ(Congress Protest) ಮುಂದುವರೆದಿದೆ. ವಿಜಯಪುರ, ಮಂಡ್ಯ, ರಾಯಚೂರು, ಚಾಮರಾಜನಗರ, ಮಡಿಕೇರಿ, ಉಡುಪಿ, ಕೊಪ್ಪಳ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೈ ನಾಯಕರು ಬಿಜೆಪಿ ವಿರುದ್ಧ & ಮೋದಿ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಐಟಿ ಕಚೇರಿಗೆ ನುಗ್ಗಲೆತ್ನಿಸಿದ ಕಾರ್ಯಕರ್ತರು ವಶ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಱಲಿ ಹಮ್ಮಿಕೊಂಡಿದ್ದು ಫಳ್ನೀರ್ ಎಸ್.ಎಲ್.ಮಥಾಯಿಸ್ ಪಾರ್ಕ್ನಿಂದ ಅತ್ತಾವರದ ಐಟಿ ಕಚೇರಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಐಟಿ ಕಚೇರಿ ಬಳಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಲಾಗುತ್ತಿದೆ. ಮಾಜಿ ಸಚಿವ ರಮಾನಾಥ ರೈ, ಐವನ್ ಡಿಸೋಜಾ ಮತ್ತಿತರು ಭಾಗಿಯಾಗಿದ್ದು ಐಟಿ ಕಚೇರಿಗೆ ನುಗ್ಗಲೆತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಮತ್ತೊಂದು ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ನೇತೃತ್ವದಲ್ಲಿ ಬಳ್ಳಾರಿ ರಾಯಲ್ ವೃತ್ತದಲ್ಲಿ ‘ಕೈ’ ಕಾರ್ಯರ್ತರ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಪುರಭವನದಿಂದ ನಜರ್ಬಾದ್ನ ಐಟಿ ಕಚೇರಿವರೆಗೆ ಮೆರವಣಿಗೆ ನಡೆಸಲಾಗುತ್ತಿದ್ದು ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಅನಿಲ್ ಚಿಕ್ಕಮಾದು, ಡಾ.ಹೆಚ್.ಸಿ.ಮಹದೇವಪ್ಪ, ಡಾ.ಬಿ.ಜೆ.ವಿಜಯಕುಮಾರ್ ಭಾಗಿಯಾಗಿದ್ದಾರೆ. ಚಿತ್ರದುರ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟನೆ ನಡೆಸಿದ್ದು ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಲಾಗುತ್ತಿದೆ. ಪ್ರತಿಭಟನೆಯಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ MLC ರಘು ಆಚಾರ್, ಕಾಂಗ್ರೆಸ್ ಜಿಲ್ಲಾದ್ಯಕ್ಷ ತಾಜ್ ಪೀರ್ ಭಾಗಿಯಾಗಿದ್ದಾರೆ. ಇದನ್ನೂ ಓದಿ: Translated Story: ನೆರೆನಾಡ ನುಡಿಯೊಳಗಾಡಿ; ಅಪ್ಪನ ಮುಖ ವಿಚಿತ್ರ ರೀತಿಯಲ್ಲಿ ಹೆದರಿಕೆ ಹುಟ್ಟಿಸುವಂತಾಗಿತ್ತು

ಗದಗನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್ ಪ್ರತಿಭಟನಾ ಧರಣಿ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಭವನಕ್ಕೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇಬ್ಬರು ಡಿವೈಎಸ್ಪಿ, ಐದು ಜನ ಸಿಪಿಐ, 10 ಕ್ಕೂ ಹೆಚ್ಚು ಪಿಎಸ್ಐ, ಮೂರು ಡಿಆರ್ ತುಕಡಿ ಸೇರಿದಂತೆ ನೂರಾರು ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆದ ಮಾಜಿ ಶಾಸಕ ಜಿ.ಎಸ್. ಪಾಟೀಲ್ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಮಾಜಿ ಶಾಸಕ ಡಿ.ಆರ್. ಪಾಟೀಲ್, ರಾಮಕೃಷ್ಣ ದೊಡ್ಡಮನಿ ಸೇರಿದಂತೆ ನೂರಾರು ಜನ್ರು ಭಾಗಿಯಾಗಿದ್ದಾರೆ.

ಬೀದರ್​ನ  ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಮಾಜಿ ಸಚಿವ ಶರಣ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಕೈ ನಾಯಕರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಮಾಜಿ ಸಚಿವ ಶರಣ ಪ್ರಕಾಶ ಪಾಟೀಲ್, ಎಂಎಲ್ಸಿ ಅರವಿಂದ ಅರಳಿ ಸೇರಿ ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಶಿವಮೊಗ್ಗದಲ್ಲಿ ಡಿಸಿ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಪೊಲೀಸರು, ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಏಜ್ ಈಸ್ ಜಸ್ಟ್ ಎ ನಂಬರ್: ಫುಟ್​ಬಾಲ್ ಬ್ಯಾಲೆನ್ಸ್ ಮಾಡಿದ 64 ವರ್ಷದ ವೃದ್ಧ! ವಿಡಿಯೋ ವೈರಲ್

ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ತನ್ವೀರ್ ಸೇಠ್ ವಶಕ್ಕೆ ಮೈಸೂರಿನಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ಱಲಿ ನಡೆಯುತ್ತಿದ್ದು ಐಟಿ ಕಚೇರಿಗೆ ಮುತ್ತಿಗೆ ಹಾಕಲು ತೆರಳುತ್ತಿದ್ದ ‘ಕೈ’ ನಾಯಕರನ್ನು ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಡಾ.ಮಹದೇವಪ್ಪ, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ತನ್ವೀರ್ ಸೇಠ್ ವಶಕ್ಕೆ ಪಡೆಯಲಾಗಿದೆ. ಬಲವಂತವಾಗಿ ಎಳೆದೊಯ್ದು ಪೊಲೀಸರು ವಾಹನಕ್ಕೆ ತುಂಬಿಸುತ್ತಿದ್ದಾರೆ.

ದೂರು ಬಂದಾಗ ತನಿಖಾ ಸಂಸ್ಥೆಗಳು ವಿಚಾರಣೆ ಮಾಡಬಾರದಾ? ಇನ್ನು ಕಾಂಗ್ರೆಸ್ ಪ್ರತಿಭಟನೆ ಸಂಬಂಧ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸಾವನದುರ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ದೂರು ಬಂದಾಗ ತನಿಖಾ ಸಂಸ್ಥೆಗಳು ವಿಚಾರಣೆ ಮಾಡಬಾರದಾ? ವಿಚಾರಣೆ ಮಾಡಬಾರದೆಂಬ ಒತ್ತಡ‌ ಒಂದು ರೀತಿ ಗೂಂಡಾಗಿರಿ. ತನಿಖೆ ಬಳಿಕ ತಪ್ಪಿತಸ್ಥ ಅಲ್ಲವೆಂದು ಸಾಬೀತುಪಡಿಸಿದ್ರೆ ಖುಷಿ. ವಿಚಾರಣೆಯೇ ಮಾಡಬೇಡಿ ಎಂಬುದು ಪ್ರಜಾಪ್ರಭುತ್ವ ಅಲ್ಲ. ಇದು ಸಂವಿಧಾನಕ್ಕೆ ದೊಡ್ಡ ಅಪಚಾರವೆಸಗಿದಂತೆ. ಸಣ್ಣಪುಟ್ಟ ಅವ್ಯವಹಾರ ಅಲ್ಲ, 2 ಸಾವಿರ ಕೋಟಿ ಅವ್ಯವಹಾರ. ರಾಹುಲ್ ಗಾಂಧಿ ಹೇಳಿಕೆ ನೋಡಿ ನನಗೆ ಆಶ್ಚರ್ಯ ಆಯಿತು. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನನ್ನದೇನು ತಪ್ಪಿಲ್ಲ, ಮೋತಿಲಾಲ್ ವೋರಾ ಪಾತ್ರವಿದೆ ಅಂತಾ ಹೇಳಿದ್ದಾರೆ. ಯಾಕೆ ಹೋರಾಟ ಮಾಡ್ತಿದ್ದಾರೆ ಕಾಂಗ್ರೆಸ್ ಬಳಿ ಉತ್ತರ ಇಲ್ಲ. ಇರುವ ವಿಚಾರವನ್ನು ನೇರವಾಗಿ ಹೇಳಿದ್ರೆ ವಿವಾದ ಆಗುತ್ತೆ. ಮುಚ್ಚುಮರೆ ಇಟ್ಟು ಮಾತನಾಡುವುದು ನನಗೆ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:28 pm, Fri, 17 June 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?