ಕೇಂದ್ರದ ವಿರುದ್ಧ ರಾಜ್ಯ ಕಾಂಗ್ರೆಸ್​ ಸರ್ಕಾರದಿಂದ ಪ್ರತಿಭಟನೆ: ದಿಲ್ಲಿಯಲ್ಲಿ ಸ್ಥಳ ಪರಿಶೀಲಿಸಿದ ಡಿಕೆಶಿ

ಕೇಂದ್ರದಿಂದ ಕರ್ನಾಟಕಕ್ಕೆ ಬರಬೇಕಾದ ಅನುದಾನ ವಿಚಾರಕ್ಕೆ ಕಾಂಗ್ರೆಸ್ ಸಿಡಿದೆದ್ದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದಾಗಿದೆ. ಫೆಬ್ರವರಿ 7 ರಂದು ಬೆಳಗ್ಗೆ 11 ಗಂಟೆಗೆ ದಿಲ್ಲಿಯ ಜಂತರ್‌ ಮಂತರ್‌ನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಇಂದು ಡಿಕೆ ಶಿವಕುಮಾರ್ ಅವರು ಜಂತರ್ ಮಂತರ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೇಂದ್ರದ ವಿರುದ್ಧ ರಾಜ್ಯ ಕಾಂಗ್ರೆಸ್​ ಸರ್ಕಾರದಿಂದ ಪ್ರತಿಭಟನೆ: ದಿಲ್ಲಿಯಲ್ಲಿ ಸ್ಥಳ ಪರಿಶೀಲಿಸಿದ ಡಿಕೆಶಿ
ಫೆ.7 ರಂದು ಕೇಂದ್ರದ ವಿರುದ್ಧ ಪ್ರತಿಭಟನೆ: ದೆಹಲಿಯ ಜಂತರ್ ಮಂತರ್​​ಗೆ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರುImage Credit source: PTI
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: Rakesh Nayak Manchi

Updated on: Feb 05, 2024 | 8:30 PM

ನವದೆಹಲಿ, ಫೆ.5: ರಾಜ್ಯಕ್ಕೆ ಬರಬೇಕಾದ ಅನುದಾನಕ್ಕಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ಫೆಬ್ರವರಿ 7 ರಂದು ಪ್ರತಿಭಟನೆ ನಡೆಸಲು ಮುಂದಾಗಿದೆ. ಹೀಗಾಗಿ ಪ್ರತಿಭಟನಾ ಸ್ಥಳ ದೆಹಲಿಯ ಜಂತರ್ ಮಂತರ್​ಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಂಸದ ಡಿ.ಕೆ.ಸುರೇಶ್​, ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್​ ಇದ್ದರು.

ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಇದು‌ ಸರ್ಕಾರದ ಹೋರಾಟ, ಕಾಂಗ್ರೆಸ್, ಬಿಜೆಪಿಗೆ ಸಂಬಂಧವಿಲ್ಲ. ಕೇಂದ್ರದ ಗಮನ ಸೆಳೆಯಲು ಹೋರಾಟ ಮಾಡುತ್ತಿದ್ದೇವೆ. ನಮ್ಮ ಅನುದಾನ ನಮ್ಮ ಹಕ್ಕು, ಜನರಿಗೆ ಮನದಟ್ಟು ಮಾಡಬೇಕು. ನಮಗೆ ಸಿಗಬೇಕಾದ ಪಾಲು ಕೊಡಿಸುವುದು ನಮ್ಮ ಕರ್ತವ್ಯ. ಜನ ವೋಟ್ ಕೊಟ್ಟು ಗೆಲ್ಲಿಸಿದ್ದಾರೆ, ನ್ಯಾಯ ಸಲ್ಲಿಸಬೇಕಲ್ಲವೇ? ಕೇಂದ್ರ ಸರ್ಕಾರದ ಬಳಿ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಫೆ 7ರಂದು ದಿಲ್ಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಸರ್ಕಾರ ವಿರುದ್ಧ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಸ್ಟಂಟ್ ಮಾಡಲು ನಾನು ಸಿನಿಮಾ ನಟನಲ್ಲ. ಕೇಂದ್ರ ಬಳಿ ಅನುದಾನ ಕೇಳಲು ನಿಮಗೆ ಬಾಯಿ ಇಲ್ಲ ಅಂದರೆ ನಮಗೆ ಇಲ್ವಾ? ನೀವು ಇದ್ದಾಗ ಏನೂ ಮಾಡಿಲ್ಲ. ಬರ ಪರಿಹಾರಕ್ಕೆ ನಮ್ಮ ಸಚಿವರು ಬೇಡಿಕೆ ಇಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ಮನವಿ ಮಾಡಿದ್ದಾರೆ. ಇದು ಸ್ಟಂಟಾ? ಮನರೇಗಾ ಕೂಲಿ ಹಣಕೊಟ್ಟಿಲ್ಲ, ಇದು ಸ್ಟಂಟಾ? ಇದು ಜನರ ಧ್ವನಿ, ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ ಎಂದರು.

ನಾವು ಕಟ್ಟುವ ತೆರಿಗೆಯಲ್ಲಿ ಅರ್ಧ ಕೊಡಿ ಸಾಕು. ಪ್ರಧಾನಿ ಭೇಟಿಗೆ ಸಮಯ ಕೇಳಿದ್ದೇವೆ. ಹಣಕಾಸು ಸಚಿವರನ್ನು ಭೇಟಿ ಮನವಿ ಮಾಡುತ್ತೇವೆ. ರಾಜ್ಯದ ಎಲ್ಲ ಸಂಸದ, ಶಾಸಕರಿಗೂ ಪ್ರತಿಭಟನೆಗೆ ಭಾಗಿಯಾಗುವಂತೆ ಮನವಿ ಮಾಡಿದ್ದೇವೆ. ನರ್ಮತೆಯಿಂದ ತಲೆಬಾಗಿ ಕೇಳಿಕೊಳ್ಳುತ್ತೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ