AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ ಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ‘ಕೈ’ ಅಭ್ಯರ್ಥಿಗಳ ಹೆಸರು ಘೋಷಣೆ

ನಾಯಕರ ನಡುವಿನ ತೀವ್ರ ಜಿದ್ದಾ ಜಿದ್ದಿನ ಸ್ಪರ್ಧೆಯ ನಡುವೆ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್​​ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅದಾಗಲೇ ಘೋಷಿಸಿದ್ದರೂ, ಕಾಂಗ್ರೆಸ್​​ ಮಾತ್ರ ಸಾಕಷ್ಟು ಅಳೆದು ತೂಗಿ ಕ್ಯಾಂಡಿಡೇಟ್​​ಗಳನ್ನು ಫೈನಲ್​​ ಮಾಡಿದೆ. ಏಪ್ರಿಲ್ 9ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಉಪ ಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ 'ಕೈ' ಅಭ್ಯರ್ಥಿಗಳ ಹೆಸರು ಘೋಷಣೆ
ಸಾಂದರ್ಭಿಕ ಚಿತ್ರImage Credit source: Google
ಪ್ರಸನ್ನ ಗಾಂವ್ಕರ್​
| Edited By: |

Updated on:Mar 22, 2026 | 12:16 PM

Share

ಬೆಂಗಳೂರು, ಮಾರ್ಚ್​​ 22: ಸಾಕಷ್ಟು ಲೆಕ್ಕಾಚಾರಗಳ ಬಳಿಕ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಕಾಂಗ್ರೆಸ್​​ ಕೊನೆಗೂ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಬಾಗಲಕೋಟೆಯಿಂದ ಉಮೇಶ್ ಮೇಟಿ ಮತ್ತು ದಾವಣಗೆರೆ ದಕ್ಷಿಣದಿಂದ ಶಾಮನೂರು ಕುಟುಂಬದ ಸಮರ್ಥ್​​ ಅಭ್ಯರ್ಥಿಗಳಾಗಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಬಹಳ ಹೆಚ್ಚಿದ್ದು, ಟಿಕೆಟ್​​ಗಾಗಿ ತೀವ್ರ ಪೈಪೋಟಿ ನಡೆಯುತ್ತಿತ್ತು. ಈ ಹಿನ್ನೆಲೆ ಅಳೆದು ತೂಗಿ, ಕೆಲ ನಾಯಕರ ಮನವೊಲಿಸಿ ಕಾಂಗ್ರೆಸ್​​ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಆ ಮೂಲಕ ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ್ ಮತ್ತು ಕಾಂಗ್ರೆಸ್​​ನಿಂದ ಉಮೇಶ್ ಮೇಟಿ ನಡುವೆ ಸ್ಪರ್ಧೆ ಏರ್ಪಟ್ಟಿದ್ದರೆ ಇತ್ತ ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿಯ ಶ್ರೀನಿವಾಸ್ ಟಿ. ದಾಸಕರಿಯಪ್ಪ ವಿರುದ್ಧ ಸಚಿವ ಎಸ್​​.ಎಸ್​​. ಮಲ್ಲಿಕಾರ್ಜುನ್​​ ಅವರ ಪುತ್ರ ಸಮರ್ಥ್​​ ಅಖಾಡಕ್ಕಿಳಿದಿದ್ದಾರೆ.

ಅಲ್ಪ ಸಂಖ್ಯಾತರಿಂದ ಟಿಕೆಟ್​​ಗಾಗಿ ಹೋರಾಟದ ನಡುವೆಯೂ ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್​​ ಟಿಕೆಟ್​​ ಅಂತಿಮವಾಗಿ ಶಾಮನೂರು ಕುಟುಂಬದ ಪಾಲಾಗಿದೆ. ‘ಕೈ’ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರ್ ನಾಳೆ ನಾಮಪತ್ರ ಸಲ್ಲಿಸಲಿದ್ದು, ಸಿಎಂ ಸಿದ್ದರಾಮಯ್ಯ , ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್​​ ಸೇರಿದಂತೆ ವಿವಿಧ ನಾಯಕರು ಈ ವೇಳೆ ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ. ನಾಮಪತ್ರ ಸಲ್ಲಿಕೆಗೂ ಮುನ್ನ ದಾವಣಗೆರೆ ನಗರ ದೇವತೆ ದುರ್ಗಾಂಬಿಕಾ ದೇವಸ್ಥಾನದಿಂದ ಮೆರವಣಿಗೆ ನಡೆಯಲಿದೆ.

ಇದನ್ನೂ ಓದಿ: ಬಾಗಲಕೋಟೆ ಉಪಚುನಾವಣೆ; ಮೇಟಿ ಕುಟುಂಬದ ಒಳಜಗಳದಿಂದ ಕಾಂಗ್ರೆಸ್​ಗೆ ತಲೆನೋವು, ಖುದ್ದು ಸಿಎಂ ಸಭೆ ನಡೆಸಿದರೂ ಒಮ್ಮತವಿಲ್ಲ

ಇತ್ತ ಬಾಗಲಕೋಟೆಯಲ್ಲಿ ಟಿಕೆಟ್​​ಗಾಗಿ ಮೇಟಿ ಕುಟುಂಬದ ನಡುವೆಯೇ ಫೈಟ್ ನಡುವೆ ಹೆಚ್​​.ವೈ. ಮೇಟಿ ಅವರ ಎರಡನೇ ಮಗ ಉಮೆಶ್​​ ಅವರನ್ನು ಕಾಂಗ್ರೆಸ್​​ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ. ಸದ್ಯ ರೇವಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿರುವ ಉಮೇಶ ಮೇಟಿ , ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರು. 1994ರಲ್ಲಿಯೇ ರಾಜಕೀಯ ಅಖಾಡ ಪ್ರವೇಶಿದ್ದ ಉಮೆಶ್​​, ತಂದೆ ಹೆಚ್​​.ವೈ. ಮೆಟಿಯವರ ಜೊತೆಗೇ ಇದ್ದವರು. ಮೇಟಿ ಅವರ ಮಕ್ಕಳಾದ ಮಲ್ಲಿಕಾರ್ಜುನ ಮೇಟಿ ಮತ್ತು ಮಹಾದೇವಿ ಮೇಟಿ ಕೂಡ ಕಾಂಗ್ರೆಸ್​​ ಟಿಕೆಟ್​​ ಆಕಾಂಕ್ಷಿಯಾಗಿದ್ದರು ಎನ್ನುವುದಿಲ್ಲಿ ಗಮನಾರ್ಹ.

ಮೇಟಿ‌ ಮಕ್ಕಳಲ್ಲೇ ಟಿಕೆಟ್​​ಗಾಗಿ ಪೈಪೋಟಿ ಉಂಟಾಗಿದ್ದ ಹಿನ್ನೆಲೆ ಪಕ್ಷ ತನಗೆ ಮಣೆ ಹಾಕದಿದ್ದರೆ ಬಂಡಾಯ ಏಳುವ ಎಚ್ಚರಿಕೆಯನ್ನು ಮಹಾದೇವಿ ಮೇಟಿ ನೀಡಿದ್ದರು. ಹೀಗಾಗಿ ಈ ವಿಚಾರ ಸಿಎಂವರೆಗೂ ಹೋಗಿತ್ತು. ಈ ವೇಳೆ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಎಲ್ಲರೂ ಒಪ್ಪಿ ಬೆಂಬಲಿಸಬೇಕೆಂದು ಸಿದ್ದರಾಮಯ್ಯ ಮೂವರಿಗೂ ಸೂಚಿಸಿದ್ದರು. ಸದ್ಯ ಉಮೇಶ್ ಮೇಟಿಗೆ ಟಿಕೆಟ್ ಘೋಷಣೆ ಹಿನ್ನೆಲೆ ಅವರ ಪರ ಒಲವು ಹೊಂದಿದ್ದ ಮಹಾದೇವಿ ‌ಮೇಟಿ ಕೂಡ ಸೈಲೆಂಟ್​​ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:52 am, Sun, 22 March 26

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More