AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಸ್ಕ್ರೀನಿಂಗ್ ಕಮಿಟಿ ಸಭೆ ಅಂತ್ಯ: ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು? ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು

ಲೋಕಸಭೆ ಹಾಗೂ ರಾಜ್ಯಸಭೆ ಟಿಕೆಟ್​ಗೆ ಸಂಬಂಧಿಸಿದಂತೆ ಇಂದಿನ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಚರ್ಚೆ ಮಾಡಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಮತ್ತೊಂದು ಸುತ್ತಿನ ಸಭೆ ಅಗತ್ಯವಿದೆ. ಮತ್ತೊಂದು ಸುತ್ತಿನ ಸಭೆ ಬಳಿಕ ಚುನಾವಣಾ ಸಮಿತಿಗೆ ಪಟ್ಟಿ ಕಳಿಸುತ್ತೇವೆ ಎಂದು ಸುರ್ಜೇವಾಲಾ ಹೇಳಿದ್ದಾರೆ.

ಕಾಂಗ್ರೆಸ್​ ಸ್ಕ್ರೀನಿಂಗ್ ಕಮಿಟಿ ಸಭೆ ಅಂತ್ಯ: ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು? ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಡಿಸಿಎಂ ಡಿಕೆ ಶಿವಕುಮಾರ್​
ಪ್ರಸನ್ನ ಗಾಂವ್ಕರ್​
| Edited By: |

Updated on:Feb 14, 2024 | 5:54 PM

Share

ಬೆಂಗಳೂರು, ಫೆಬ್ರವರಿ 14: ಲೋಕಸಭೆ ಚುನಾವಣೆ ಹಿನ್ನಲೆ ಇಂದು ನಗರದ ಖಾಸಗಿ ಹೋಟೆಲ್​​ನಲ್ಲಿ  ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಮಾಡಲಾಗಿದೆ. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ (D. K. Shivakumar) ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ, ಹರೀಶ್ ಚೌಧರಿ, ಜಿಗ್ನೇಶ್ ಮೇವಾನ್, ರೋಜಿ ಜಾನ್ ಹಾಗೂ ಎಐಸಿಸಿ ಕಾರ್ಯದರ್ಶಿ ಗಳು ಭಾಗಿಯಾಗಿದ್ದರು. ಲೋಕಸಭೆ ಹಾಗೂ ರಾಜ್ಯಸಭೆ ಟಿಕೆಟ್​ಗೆ ಸಂಬಂಧಿಸಿ ನಡೆಯಲಿರುವ ಮಹತ್ವದ ಚರ್ಚೆ ಮಾಡಲಾಗಿದೆ. ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್​, ಕಾರ್ಯಕರ್ತರು ಕೊಟ್ಟ ಅಭಿಪ್ರಾಯದ ಬಗ್ಗೆ ಚರ್ಚೆ ಆಗಿದೆ. ಜಿಲ್ಲಾ ವೀಕ್ಷಕರು, ಸಚಿವರು, ಕಾರ್ಯಕರ್ತರ ಅಭಿಪ್ರಾಯದ ಬಗ್ಗೆ ಚರ್ಚೆ ಆಗಿದೆ. ಸಮೀಕ್ಷೆ ವರದಿ ಬಗ್ಗೆ ವಿಮರ್ಶೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಮತ್ತೊಂದು ಸುತ್ತಿನ ಸಮೀಕ್ಷೆ ಮಾಡಿ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ. ಇನ್ನೂ ಸಹ ಯಾವುದೇ ಕ್ಷೇತ್ರದ ಟಿಕೆಟ್ ಫೈನಲ್ ಆಗಿಲ್ಲ. ವಿಳಂಬ ಮಾಡುವುದಿಲ್ಲ 50% ಅಭ್ಯರ್ಥಿಗಳ ಪಟ್ಟಿ ಬೇಗ ಮಾಡಬೇಕು. ಸಚಿವರು, ಕಾರ್ಯಕರ್ತರು, ಸಮೀಕ್ಷಾ ತಂಡಗಳು, ವೀಕ್ಷಕರು ನೀಡಿರುವ ಟಿಕೆಟ್ ಆಕಾಂಕ್ಷಿಗಳ ಹೆಸರುಗಳನ್ನ ಚರ್ಚೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ದೇವೇಗೌಡ್ರ ಸಭೆ ಅಂತ್ಯ: ಮಂಡ್ಯ ಜಿಡಿಎಸ್​ ಪಾಲು, ಅಭ್ಯರ್ಥಿ ಸಹ ಬಹುತೇಕ ಫೈನಲ್​!

ಯಾರು ಏನು ಅಭಿಪ್ರಾಯ ಕೊಟ್ಟಿದ್ದಾರೆಂದು ನನಗೆ ಮಾತ್ರ ಗೊತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಧಿಕೃತ ಪ್ರತಿ ಇವತ್ತು ನೀಡಿದ್ದೇನೆ. ಯಾರು ಏನು ಬರೆದುಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯಗೆ ಕೊಟ್ಟಿದ್ದೇನೆ. ಅಭಿಪ್ರಾಯಗಳನ್ನ ಗೌಪ್ಯವಾಗಿ ಇಡುತ್ತೇವೆ ಎಂದಿದ್ದಾರೆ.

ರಾಜಕೀಯದಲ್ಲಿ ಯಾರು ಬೇಕಾದ್ರೂ ಸ್ಪರ್ಧೆ ಮಾಡಬಹುದು: ಎಲ್ಲರಿಗೂ ಅವಕಾಶ ಇರಲಿದೆ: ಡಿಸಿಎಂ ಡಿಕೆ ಶಿವಕುಮಾರ್​

ಲೋಕಸಭೆ ಚುನಾವಣೆಯಲ್ಲಿ ಸಚಿವರು ಸ್ಪರ್ಧಿಸುವ ವಿಚಾರವಾಗಿ ಮಾತನಾಡಿದ ಅವರು, ರಾಜಕೀಯದಲ್ಲಿ ಯಾರು ಬೇಕಾದ್ರೂ ಸ್ಪರ್ಧೆ ಮಾಡಬಹುದು. ಎಲ್ಲರಿಗೂ ಒಂದು ಅವಕಾಶ ಇರಲಿದೆ. ಚುನಾವಣೆಯಲ್ಲಿ ಯಾರು ಗೆಲ್ತಾರೆ ಎನ್ನುವುದು ಪಕ್ಷಕ್ಕೆ ಮುಖ್ಯ. ಸಚಿವರು ಕೊಟ್ಟ ಪಟ್ಟಿಯನ್ನು ಮುಖ್ಯಮಂತ್ರಿಗೆ ಕೊಡಲಾಗಿದೆ. ಸರ್ವೆ ಮಾಡಲು ಸಿಎಂಗೆ ಲಿಸ್ಟ್ ಕೊಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹೈಕೋರ್ಟ್​ನಿಂದ 10 ಸಾವಿರ ದಂಡ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ

ಸುದೀರ್ಘ ಚರ್ಚೆ ನಡೆಸಿದ್ದೇವೆ, ಮೊದಲ ಹಂತದ ಚರ್ಚೆ ಮುಗಿದಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಮತ್ತೊಂದು ಸುತ್ತಿನ ಸಭೆ ಅಗತ್ಯವಿದೆ. ಮತ್ತೊಂದು ಸುತ್ತಿನ ಸಭೆ ಬಳಿಕ ಚುನಾವಣಾ ಸಮಿತಿಗೆ ಪಟ್ಟಿ ಕಳಿಸುತ್ತೇವೆ ಎಂದು ಸುರ್ಜೇವಾಲ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Wed, 14 February 24

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್