2028ಕ್ಕೆ ಸಿಎಂ ಆಗುವ ತಯಾರಿ ಇದೆ: ಡಿಕೆ ಶಿವಕುಮಾರ್​​ಗೆ ಶಾಕ್ ಕೊಟ್ಟ ಜಾರಕಿಹೊಳಿ

ಬೂದಿ ಮುಚ್ಚಿದ ಕೆಂಡ.. ಸಿಎಂ ಕುರ್ಚಿಯ ಮೇಲೆ ರಾಜಕಾರಣಿಗಳ ಹದ್ದಿನ ಕಣ್ಣು.. ಮುಖ್ಯಮಂತ್ರಿ ಪಟ್ಟಕ್ಕಾಗಿ ತೆರೆಮರೆಯ ಕಸರತ್ತು.. ಹೌದು.. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಚರ್ಚೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್​ನ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಬಳಿಕ, ಇದೀಗ ಸಚಿವರುಗಳ ಮಧ್ಯೆಯೇ ಮಾತಿನ ಸಮರ ಜೋರಾಗಿದೆ. ನಾನು ಹಿರಿಯ, ನೀನು ದೊಡ್ಡೊನು.. ಯಾರು ಅರ್ಹರು ಎಂಬ ಮಾತುಗಳೇ ಕೇಳಿ ಬರುತ್ತಿವೆ.

2028ಕ್ಕೆ ಸಿಎಂ ಆಗುವ ತಯಾರಿ ಇದೆ: ಡಿಕೆ ಶಿವಕುಮಾರ್​​ಗೆ ಶಾಕ್ ಕೊಟ್ಟ ಜಾರಕಿಹೊಳಿ
ಡಿಕೆ ಶಿವಕುಮಾರ್- ಸತೀಶ್ ಜಾರಕಿಹೊಳಿ
Follow us
ರಮೇಶ್ ಬಿ. ಜವಳಗೇರಾ
|

Updated on: Sep 08, 2024 | 2:55 PM

ಬೆಂಗಳೂರು, (ಸೆಪ್ಟೆಂಬರ್ 08): ಕರ್ನಾಟಕದಲ್ಲಿ ಮುಖ್ಯಮಂತ್ರಿ ಚರ್ಚೆ ವಿಚಾರ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಸಾಮಾನ್ಯವಾಗಿ ವಿಪಕ್ಷಗಳು ಆಡಳಿತರೂಢ ಪಕ್ಷವನ್ನ ಆಡಿಕೊಳ್ಳಲು ಇಂತಹ ತಂತ್ರ ಬಳಸುತ್ತವೆ. ಆದ್ರೆ, ರಾಜ್ಯ ರಾಜಕಾರಣದಲ್ಲಿ ಸಚಿವರು, ಆಡಳಿತದಲ್ಲಿರೋ ಪಕ್ಷಗಳ ಶಾಸಕರೇ ಇಂತಹದೊಂದು ಚರ್ಚೆಯನ್ನ ಎಳೆಎಳೆದು ತರುತ್ತಿದ್ದಾರೆ. ಹೌದು…ಕೆಲ ದಿನಗಳ ಹಿಂದಷ್ಟೇ ನಾನು ದೊಡ್ಡೋನು ಅನ್ನೋ ಮೂಲಕ ಆರ್.ವಿ ದೇಶಪಾಂಡೆ ಹಿರಿಯರು ಅನ್ನೋ ದಾಳ ಬಿಟ್ಟಿದ್ದರು. ಈ ಬೆನ್ನಲ್ಲೇ, ಶಿವಾನಂದ ಪಾಟೀಲ್ ಮತ್ತು ಎಂ.ಬಿ ಪಾಟೀಲ್ ಮಧ್ಯೆ ಮಾತಿನ ಕದನಕ್ಕೆ ದಾರಿ ಹಾಕಿಕೊಟ್ಟಿದೆ. ದೊಡ್ಡೊರು ಆಗ್ಲಿ ಎಂದು ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ರೆ, ನಾನು ದೊಡ್ಡೋನು ಎಂದು ಎಂ.ಬಿ ಪಾಟೀಲ್ ತಿರುಗು ಬಾಣ ಬಿಟ್ಟಿದ್ದಾರೆ. ಇಬ್ಬರು ಸಚಿವರು ನಡುವೆ ಟಾಕ್​ಪೈಟ್ ನಡೆಯುತ್ತಿರುವಾಗಲೇ ಸಿಎಂ ರೇಸ್​ನಲ್ಲಿ ಸತೀಶ್ ಜಾರಕಿಹೊಳಿ ಹೆಸರು ಮುನ್ನೆಲೆಗೆ ಬಂದಿದೆ.

ಸಿದ್ದರಾಮಯ್ಯ ರಾಜೀನಾಮೆ ಕೊಟ್ರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎನ್ನುವ ಅಭಿಯಾನ ಶುರುವಾಗಿದೆ. ಈ ಬಗ್ಗೆ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಬೆಳಗಾವಿ ಸಾಹುಕಾರ ಇತ್ತೀಚೆಗೆ ರಾಹುಲ್ ಗಾಂಧಿ ಭೇಟಿಯಾಗಿದ್ದು, ಸಿಎಂ ಬದಲಾದ್ರೆ ಜಾರಕಿಹೊಳಿಗೆ ಚಾನ್ಸ್ ಸಿಗುತ್ತಾ ಎಂಬ ಚರ್ಚೆ ನಡೆಯುತ್ತಿದೆ. ಈ ನಡುವೆ ಜಾರಕಿಹೊಳಿ ಸಿಎಂ ಪಟ್ಟದ ಕುರಿತ ಚರ್ಚೆಗಳನ್ನ ತಳ್ಳಿಹಾಕಿದ್ದಾರೆ. ಇದರ ಜತೆಗೆ ಸಚಿವ ಎಂ.ಬಿ ಪಾಟೀಲ್ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ: ಮಾಜಿ ಸಂಸದ ಡಿಕೆ ಸುರೇಶ್​

ಎಂಬಿ ಪಾಟೀಲ್​ಗೆ ಜಾರಕಿಹೊಳಿ ತಿರುಗೇಟು

ಸತೀಶ್ ಜಾರಕಿಹೊಳಿ‌ಗಿಂತ ನಾನು ಸಿನಿಯರ್ ಇದೀನಿ ಎಂಬ ಎಂಬಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯ ಇದ್ದಾರೆ ಅವರೇ ಮುಂದುವರೆಯುತ್ತಾರೆ. ನಾವೆಲ್ಲೂ ಸಿಎಂ ಸ್ಥಾನವನ್ನು ಕ್ಲೆಮ್ ಮಾಡಿಲ್ಲ. ಇದರಲ್ಲಿ ಗುದ್ದಾಟ, ಕುಸ್ತಿ ಮಾಡೋ ಅವಶ್ಯಕತೆ ಇಲ್ಲ. ಅನೇಕರು ಈಗಾಗಲೇ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಎಂಪಿ ಪಾಟೀಲ್​ಗೆ ತಿರುಗೇಟು ನೀಡಿದರು

2028ಕ್ಕೆ ಸಿಎಂ ಆಗುವ ತಯಾರಿ ಇದೆ

ಇನ್ನು ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ ಎಂದಿರುವ ಸತೀಶ್ ಜಾರಕಿಹೊಳಿ, 2028ಕ್ಕೆ ಸಿಎಂ ಆಗುವ ತಯಾರಿ ಇದೆ ನಮ್ಮದು. ಅಲ್ಲಿಯವರೆಗೆ ಅಭಿಮಾನಿಗಳು ಕಾಯಬೇಕು. ನಾನು ಸಿಎಂ ಆಗುವ ವಿಚಾರದ ಬಗ್ಗೆ ಮುಂದೆ ನೋಡೋಣ. 2028ಕ್ಕೆ ಈ ವಿಚಾರದ ಬಗ್ಗೆ ನೋಡೋಣ.​​ ಸದ್ಯ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ. ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯುವ ನಂಬಿಕೆ ಇದೆ. ಆರ್​​.ವಿ.ದೇಶಪಾಂಡೆ, ಪರಮೇಶ್ವರ್​​, ಡಿ.ಕೆ.ಶಿವಕುಮಾರ್​. ಎಂ.ಬಿ.ಪಾಟೀಲ್​, ಶಿವಾನಂದ ಪಾಟೀಲ್​ ಹಿರಿಯರಿದ್ದಾರೆ. ಎಲ್ಲರಿಗೂ ಮುಖ್ಯಮಂತ್ರಿ ಆಗುವ ಅಸೆ ಇದ್ದೇ ಇರುತ್ತೆ. ಸದ್ಯ ಈ ಪ್ರಶ್ನೆ ಉದ್ಭವಿಸುವುದಿಲ್ಲ ಮುಂದೇನುಗುತ್ತೆ ನೋಡೋಣ ಎಂದು ಹೇಳಿದರು.

ಸಿದ್ದರಾಮಯ್ಯ ಪರ ನ್ಯಾಯ ಸಿಗುತ್ತೆ ಎನ್ನುವ ನಂಬಿಕೆ ಇದೆ. ಸಿಎಂ ಬದಲಾವಣೆ ಪ್ರಶ್ನೆ ಬರಲ್ಲ ಎನ್ನುವ ವಿಶ್ವಾಸ ಇದೆ. ಈಗ ಸಿಎಂ ಕನಸು ಕಂಡಿಲ್ಲ. ಈಗಾಗಲೇ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಿದ್ದೇನೆ. ಯಾವುದೋ ಸಂದರ್ಭದಲ್ಲಿ ಹೇಳಿಕೆ ಕೊಟ್ಟಿರುತ್ತಾರೆ. ಎಲ್ಲಿಯೂ ನಾನೇ ಸಿಎಂ ಆಗ್ತೇನಿ ಅಂತಾ ಯಾರು ಹೇಳಿಲ್ಲ. ಈ ರೀತಿ ಹೇಳಿಕೆ ಎಪೇಕ್ಟ್ ಆಗುವುದಿಲ್ಲ. 2028ಕ್ಕೆ ಸಿಎಂ ಆಗುವ ತಯಾರಿ ಇದೆ ನಮ್ಮದು. ಅಲ್ಲಿಯವರೆಗೆ ಅಭಿಮಾನಿಗಳು ಕಾಯಬೇಕು ಎಂದು ತಮ್ಮ ಮನದಾಳದ ಮಾತು ಹೊರಹಾಕಿದ್ದಾರೆ.

ಡಿಕೆ ಶಿವಕುಮಾರ್​ಗೆ ಡಿಚ್ಚಿ ಕೊಡ್ತಾರಾ ಜಾರಕಿಹೊಳಿ?

ಈಗಾಗಲೇ ಡಿಕೆ ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ ನಡುವೆ ಕೆಲ ವಿಷಯಕ್ಕೆ ಮುಸುಕಿನ ಗುದ್ದಾಟ ಇತ್ತು. ಇದರ ಮಧ್ಯ ಇದೀಗ ಸತೀಶ್ ಜಾರಕಿಹೊಳಿ 2028ಕ್ಕೆ ಸಿಎಂ ಆಗುವ ತಯಾರಿ ನಮ್ಮದು ಎಂದಿದ್ದಾರೆ. ಈ ಮೂಲಕ ಮುಂದಿನ ಸಲ ನಾನೇ ಮುಖ್ಯಮಂತ್ರಿಯಾಗುತ್ತೇನೆ ಎನ್ನುವ ಸಂದೇಶವನ್ನು ಕಾಂಗ್ರೆಸ್​ ನಾಯಕರಿಗೆ ಜಾರಕಿಹೊಳಿ ರವಾನಿಸಿದ್ದಾರೆ. ಈ ಮೂಲಕ ಮುಂದಿನ ಸಿಎಂ ರೇಸ್​ನಲ್ಲಿರುವ ಉಪಮುಖ್ಯಂತ್ರಿ ಡಿಕೆ ಶಿವಕುಮಾರ್​ಗೆ ಟಕ್ಕರ್ ಕೊಟ್ಟಿದ್ದಾರೆ.

ಸಿದ್ದರಾಮಯ್ಯನವರು ಇದು ಕೊನೆ ಚುನಾವಣೆ ಎಂದು ಹೇಳಿದ್ದಾರೆ. ಈ ಮೂಲಕ ಅವರು ಚುನಾವಣಾ ಕಣದಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್​, ಈಗಾಗಲೇ ಸಿಎಂ ಕುರ್ಚಿಗೆ ಟವೆಲ್ ಹಾಕಿದ್ದಾರೆ. ಇದರ ನಡುವೆ ಈಗ ಸತೀಶ್ ಜಾರಕಿಹೊಳಿ ಸಹ ಎದ್ದು ನಿಂತಿದ್ದಾರೆ. ಇದರೊಂದಿಗೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದೆ.

ಈಗಾಗಲೇ ಸತೀಶ್ ಜಾರಕಿಹೊಳಿ ಅವರು ಮತ್ತೋರ್ವ ಸಿಎಂ ರೇಸ್​​ನಲ್ಲಿರುವ ಡಾ ಜಿ ಪರಮೇಶ್ವರ್​ ಅವರ ಜೊತೆ ಗೌಪ್ಯವಾಗಿ ಮಾತುಕತೆ ನಡೆಸಿ ಬಳಿಕ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಇದು ರಾಜ್ಯ ಕಾಂಗ್ರೆಸ್​​ನಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ