AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂನ್ಯ ಬಡ್ಡಿ ದರದಲ್ಲಿ ಪೆಟ್ರೋಲ್‌ಗೆ ಲೋನ್ ಕೊಡುತ್ತೇವೆ ಬನ್ನಿ, ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ನಿಂದ ವಿನೂತನ ಧರಣಿ

ಮೈಸೂರಿನ ದೇವರಾಜ ಮೊಹಲ್ಲಾದಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಶೂನ್ಯ ಬಡ್ಡಿ ದರದಲ್ಲಿ ಪೆಟ್ರೋಲ್‌ಗೆ ಲೋನ್ ಕೊಡುತ್ತೇವೆ ಬನ್ನಿ ಎಂದು ವಿನೂತನವಾಗಿ ಧರಣಿ ನಡೆಸುತ್ತಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಅಣಕು ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.

ಶೂನ್ಯ ಬಡ್ಡಿ ದರದಲ್ಲಿ ಪೆಟ್ರೋಲ್‌ಗೆ ಲೋನ್ ಕೊಡುತ್ತೇವೆ ಬನ್ನಿ, ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ನಿಂದ ವಿನೂತನ ಧರಣಿ
ಚಿತ್ರದುರ್ಗದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ
TV9 Web
| Edited By: |

Updated on: Sep 08, 2021 | 12:19 PM

Share

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಹಲವು ಕಡೆ ಧರಣಿ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳಿಗೆ ಧಿಕಾರ ಕೂಗಿ ಆಕ್ರೋಶ ಹೊರ ಹಾಕಲಾಗುತ್ತಿದೆ. ಅಗತ್ಯವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕ ರಾಜಭವನ ಚಲೋ ಕೈಗೊಂಡಿದ್ದಾರೆ. ಮೌರ್ಯ ಸರ್ಕಲ್‌ನಿಂದ ರಾಜಭವನದವರೆಗೆ ಮೆರವಣಿಗೆ ನಡೆಸುತ್ತಿದ್ದಾರೆ.

ಈ ಱಲಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ. ಜಾಥದ ಮೂಲಕ ತೆರಳಿ ರಾಜಭವನಕ್ಕೆ ಮುತ್ತಿಗೆ ಹಾಕಲು ಕೈ ನಾಯಕರು ಸಿದ್ಧರಾಗಿದ್ದಾರೆ.

ಮೈಸೂರಿನಲ್ಲಿ ರಸ್ತೆಯಲ್ಲಿ ಟೀ ಮಾಡಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಲೆ ಏರಿಕೆ ವಿರುದ್ಧ ಮಹಿಳಾ ಕಾಂಗ್ರೆಸ್‌ನಿಂದ ವಿನೂತನ ಪ್ರತಿಭಟನೆ‌ ನಡೆಯುತ್ತಿದೆ. ಮೈಸೂರು ಡಿಸಿ ಕಚೇರಿ ಬಳಿ ಒಲೆಯಲ್ಲಿ ಟೀ ಮಾಡಿ ಅಣಕು ಪ್ರದರ್ಶನ ಮಾಡಲಾಗುತ್ತಿದೆ. ತಲೆ ಮೇಲೆ ಕಲ್ಲು ಹೊತ್ತು ಮಹಿಳಾ ಕಾರ್ಯಕರ್ತರು ಬಿಜೆಪಿ ಸರ್ಕಾರ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ದಿನ ನಿತ್ಯದ ವಸ್ತುಗಳ ಬೆಲೆ ಏರಿಸಿ ಮಧ್ಯಮ ವರ್ಗದವರ ಮೇಲೆ ಬರೆ ಎಳೆಯಲಾಗುತ್ತಿದೆ. ಕೂಡಲೇ ಎಲ್ಪಿಜಿ ಬೆಲೆ ಇಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ.

ಮತ್ತೊಂದೆಡೆ ಮೈಸೂರಿನ ದೇವರಾಜ ಮೊಹಲ್ಲಾದಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಶೂನ್ಯ ಬಡ್ಡಿ ದರದಲ್ಲಿ ಪೆಟ್ರೋಲ್‌ಗೆ ಲೋನ್ ಕೊಡುತ್ತೇವೆ ಬನ್ನಿ ಎಂದು ವಿನೂತನವಾಗಿ ಧರಣಿ ನಡೆಸುತ್ತಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಅಣಕು ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.

ಇನ್ನು ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಖಂಡಿಸಿ ಚಿತ್ರದುರ್ಗದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಮಹಿಳಾ ಕಾರ್ಯಕರ್ತರು ಒನಕೆ ಓಬವ್ವ ವೃತ್ತದಲ್ಲಿ ಕಟ್ಟಿಗೆ ಒಲೆ ಹಚ್ಚಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಇದನ್ನೂ ಓದಿ: Petrol Price Today: ಸ್ಥಿರತೆಯತ್ತ ಮುಖ ಮಾಡಿದ ಪೆಟ್ರೋಲ್, ಡೀಸೆಲ್ ದರ; ಪ್ರಮುಖ ನಗರಗಳಲ್ಲಿ ದರ ವಿವರ ಪರಿಶೀಲಿಸಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ