ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 11, 2022 | 12:36 PM

ಪೆಟ್ರೋಲ್, ಡೀಸೆಲ್ ಮತ್ತು ಎಲ್​ಪಿಜಿ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದರು.

ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಬೆಂಗಳೂರಿನಲ್ಲಿ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Follow us on

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಎಲ್​ಪಿಜಿ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದಾರೆ. ಬೆಲೆ ಏರಿಕೆ ವಿರೋಧಿಸಿ ವಿಭಿನ್ನ ರೀತಿಯ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ಕಾರ್ಯಕರ್ತರು, ಮೋದಿ ಮುಖವಾಡ ಧರಿಸಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗಿದೆ, ವಾಹನ ಮಾರುತ್ತೇವೆ ಎಂದು ಭಿತ್ತಿಪತ್ರ ಪ್ರದರ್ಶಿಸಿದರು. ದೇಶ ಮಾರುತ್ತಿರುವ ಮೋದಿ ಎಂಬ ಭಿತ್ತಿಪತ್ರವೂ ಪ್ರತಿಭಟನಾ ಸ್ಥಳದಲ್ಲಿತ್ತು.

ಕರ್ನಾಟಕದ ಘನತೆಗೆ ಬಿಜೆಪಿ ಕಪ್ಪುಚುಕ್ಕೆ: ಖಾದರ್

ಮಂಗಳೂರು: ಕರ್ನಾಟಕದ ಘನತೆಗೆ ಬಿಜೆಪಿ ಆಡಳಿತವು ಕಪ್ಪುಚುಕ್ಕೆಯಾಗಿದೆ. ರಾಜ್ಯದ ಶೇ.95ರಷ್ಟು ಜನ ಬಿಜೆಪಿ ಸರ್ಕಾರ ತಿರಸ್ಕರಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಯು.ಟಿ.ಖಾದರ್ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ದಿವಾಳಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಮೌನವಾಗಿದ್ದಾರೆ. ರಾಜ್ಯವನ್ನು ಗೂಂಡಾಗಳ ಕೈಯಲ್ಲಿ ಕೊಟ್ಟಿದ್ದಾರೆ. ಕರ್ನಾಟಕ ರಾಜ್ಯವನ್ನು ಗೂಂಡಾಗಳು ಆಳುತ್ತಿದ್ದಾರೆ. ಸಂಘರ್ಷಗಳಿಗೆ ಕಡಿವಾಣ ಹಾಕುವ ಜವಾಬ್ದಾರಿ ಯಾರದ್ದು? ಸಂಘರ್ಷಗಳ ಬಗ್ಗೆ ಸಿಎಂ ಬೊಮ್ಮಾಯಿ ಮಾತನಾಡಬೇಕು. ಕೋಮುವಾದಿಗಳ ವಿವಾದವನ್ನ ಸರ್ಕಾರ ಮಟ್ಟಹಾಕಬೇಕು. ಕೋಮುವಾದಿ ಶಕ್ತಿಗಳಿಂದ ಸಮಸ್ಯೆ ಸೃಷ್ಟಿಸಲು ಪ್ರಯತ್ನ ನಡೆಯುತ್ತಿದೆ. ಕೋಮುವಾದಿಗಳ ಅಜೆಂಡಾ ಸಫಲವಾಗಲು ಬಿಡಬಾರದು ಎಂದು ಅವರು ಒತ್ತಾಯಿಸಿದರು. ಧಾರವಾಡದ ನಾಲ್ವರು ಯುವಕರು ನಡೆಸಿದ ಕ್ರೂರ ಕೃತ್ಯವನ್ನು ಸಮಾಜ ಖಂಡಿಸಿದೆ ಎಂದರು.

ಇದನ್ನೂ ಓದಿ: ವಿಮಾನ ಇಳಿಯುತ್ತಿದ್ದಂತೆ ಇಂಧನ ಬೆಲೆ ಏರಿಕೆ ಬಗ್ಗೆ ಸ್ಮೃತಿ ಇರಾನಿಯಲ್ಲಿ ಪ್ರಶ್ನೆ ಕೇಳಿದ ಕಾಂಗ್ರೆಸ್ ನಾಯಕಿ; ಹೇಗಿತ್ತು ಪ್ರತಿಕ್ರಿಯೆ?

ಇದನ್ನೂ ಓದಿ: ನುಗ್ಗಿಕೇರಿ ಧರ್ಮ ವ್ಯಾಪಾರ ಗಲಾಟೆ ವಿಚಾರ; ಯುವ ಕಾಂಗ್ರೆಸ್‌ನಿಂದ ನಬಿಸಾಬ್‌ಗೆ 25 ಸಾವಿರ ರೂ. ನೆರವು