ಬಿಬಿಎಂಪಿ ಚುನಾವಣೆಗೆ ತಯಾರಿ ಶುರು ಮಾಡಿದ ಕಾಂಗ್ರೆಸ್: ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ

3 ರಿಂದ 4 ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಚರ್ಚೆ ಆಗಿದೆ. ಮಳೆಗಾಲ ಮುಗಿಯುತ್ತಿದ್ದಂತೆ ಪಾಲಿಕೆ ಚುನಾವಣೆ ಮಾಡುತ್ತೇವೆ ಎಂದು ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದರು. ಅದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಚುನಾವಣೆಗೆ ತಯಾರಿ ಶುರು ಮಾಡಿದೆ. ಚುನಾವಣಾ ತಯಾರಿ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ ಮಾಡಲಾಗಿದೆ.

ಬಿಬಿಎಂಪಿ ಚುನಾವಣೆಗೆ ತಯಾರಿ ಶುರು ಮಾಡಿದ ಕಾಂಗ್ರೆಸ್: ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ
ಬಿಬಿಎಂಪಿ ಚುನಾವಣೆಗೆ ತಯಾರಿ ಶುರು ಮಾಡಿದ ಕಾಂಗ್ರೆಸ್: ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 15, 2024 | 2:56 PM

ಬೆಂಗಳೂರು, ಜೂನ್​​ 15: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆಗೆ ಕಾಂಗ್ರೆಸ್ ತಯಾರಿ ಶುರು ಮಾಡಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ (Congress) ಅಧ್ಯಕ್ಷರು ಮತ್ತು ಸದಸ್ಯರ ಜೊತೆ ಸಭೆ ಮಾಡಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹಿನ್ನಡೆಯಾದ ಬಗ್ಗೆ ಸಭೆಯಲ್ಲಿ ಪರಾಮರ್ಶೆ ಮಾಡಲಾಗಿದ್ದು, ಜೊತೆಗೆ ಬಿಬಿಎಂಪಿ ಚುನಾವಣಾ ತಯಾರಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಆ ಮೂಲಕ ಬಿಬಿಎಂಪಿ ಎಲೆಕ್ಷನ್‌ಗೆ ಕಾಂಗ್ರೆಸ್​ ಭರ್ಜರಿ ತಯಾರಿ ನಡೆಸಿದೆ.

ಬಿಬಿಎಂಪಿ ಚುನಾವಣೆ ಬಗ್ಗೆ ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದು, ಈ ವರ್ಷ ಬಿಬಿಎಂಪಿ ಚುನಾವಣೆ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಇನ್ನು ತಡ ಮಾಡುವಂತಿಲ್ಲ, ಇದೇ ಸೆಪ್ಟಂಬರ್‌ಗೆ ಬಿಬಿಎಂಪಿ ಚುನಾವಣೆ ನಡೆದು ನಾಲ್ಕು ವರ್ಷವಾಗಲಿದೆ. ಹೀಗಾಗಿ 3 ರಿಂದ 4 ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಚರ್ಚೆ ಆಗಿದೆ. ಮಳೆಗಾಲ ಮುಗಿಯುತ್ತಿದ್ದಂತೆ ಪಾಲಿಕೆ ಚುನಾವಣೆ ಮಾಡುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ನಡೆಸಲು ಮುಂದಾದ ಸರ್ಕಾರ: 5 ಭಾಗಗಳಾಗಿ ವಿಂಗಡಿಸಲು ತೀರ್ಮಾನ

ಸಭೆಯಲ್ಲಿ ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಕೋರಿದ್ದರು. ಅಲ್ಲದೆ, ಬಹು ಮುನ್ಸಿಪಲ್ ಕಾರ್ಪೊರೇಶನ್‌ಗಳ ರಚನೆಯ ಬಗ್ಗೆಯೂ ಚರ್ಚಿಸಲಾಗಿತ್ತು.

ಇನ್ನು ಬಿಬಿಎಂಪಿ ಚುನಾವಣೆ ನಡೆಸಲು ಈಗಾಗಲೇ ಕೋರ್ಟ್ ನಿರ್ದೇಶನ ನೀಡಿದೆ. 225 ವಾರ್ಡ್​ಗಳಲ್ಲಿ ಚುನಾವಣೆ ನಡೆಯಲಿದೆ. ಕಾನೂನು ತೊಡಕು ಹಾಗೂ ಮೀಸಲಾತಿ ಬಗೆ ಹರಿಸಿ ಚುನಾವಣೆ ಮಾಡಲಿದ್ದೇವೆ. ಅನುದಾನ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ.

ಇದನ್ನೂ ಓದಿ: BBMP ವಿಭಜನೆ ಮಾಡಿ ಗ್ರೇಟರ್‌ ಬೆಂಗಳೂರು ನಿರ್ಮಾಣಕ್ಕೆ ಮುಂದಾದ ಸರ್ಕಾರ; ಬೆಂಗಳೂರಿನ ಸುತ್ತಲಿನ ಪ್ರದೇಶ ಬಿಬಿಎಂಪಿ ವ್ಯಾಪ್ತಿಗೆ

ಲೋಕಸಭಾ ಚುನಾವಣೆ ಫಲಿತಾಂಶದ ಸೋಲಿನ ಚರ್ಚೆ ಆಗಿಲ್ಲ. ಈ‌ ಬಗ್ಗೆ ಯಾರು‌ ಮಾತನಾಡಲಿಲ್ಲ. ಕೇವಲ ಬಿಬಿಎಂಪಿ ಚುನಾವಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಅಷ್ಟೇ ಎಂದು ರಾಮಲಿಂಗಾರೆಡ್ಡಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ