AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್​​​ನ ರಾಜೇಗೌಡ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡ ಅವರಿಗೆ ಸೋಲಾಗಿದೆ. 2023 ರಲ್ಲಿ ಸೋಲು ಕಂಡಿದ್ದ ಬಿಜೆಪಿಯ ಜೀವರಾಜ್ ಅವರು ಎರಡುವರೆ ವರ್ಷಗಳ ಕಾಲ ಕಾನೂನು ಹೋರಾಟದ ಬಳಿಕ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್​​ನ ರಾಜೇಗೌಡ ಸಹ ಕಾನೂನು ಹೋರಾಟಕ್ಕಿಳಿದಿದ್ದಾರೆ.

ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್​​​ನ ರಾಜೇಗೌಡ
Td Rajegowda
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: |

Updated on: May 08, 2026 | 8:41 PM

Share

ನವದೆಹಲಿ.ಚಿಕ್ಕಮಗಳೂರು, (ಮೇ 08): ಶೃಂಗೇರಿ ವಿಧಾನಸಭೆ (sringeri assembly constituency) ಕ್ಷೇತ್ರದ ಅಂಚೆ ಮತಗಳ ವಿವಾದಕ್ಕೆ ಸಂಬಂಧಿಸಿದಂತೆ ಮರು ಎಣಿಕೆಯಲ್ಲಿ ಸೋತ ಕಾಂಗ್ರೆಸ್ ಟಿಡಿ ರಾಜೇಗೌಡ ( TD Rajegowda) ಅವರು ಸುಪ್ರೀಂಕೋರ್ಟ್​ (supreme court)  ಮೆಟ್ಟಿಕೇರಿದ್ದಾರೆ. 2023 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನ ರಾಜೇಗೌಡ ಅವರು ಗೆಲುವು ಸಾಧಿಸಿದ್ದರು. ಆದ್ರೆ, ಅಂಚೆ ಮತಗಳ ಮೇಲೆ ಅನುಮಾನ ವ್ಯಕ್ತಪಡಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜೀವರಾಜ್ ಅವರು ಕಾನೂನೂ ಹೋರಾಟ ಮಾಡಿದ್ದು, ಅಂತಿಮವಾಗಿ ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರು ಎಣಿಕೆ ವೇಳೆ ಜೀವರಾಜ್ ಗೆಲುವು ಸಾಧಿಸಿದ್ದಾರೆ. ಇದೀಗ ರಾಜೇಗೌಡ ಸಹ ಮರು ಎಣಿಕೆಗೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ತ್ವರಿತ ವಿಚಾರಣೆಗೆ ಕೋರಿಕೆಯನ್ನು ಪರಿಗಣಿಸುವುದಾಗಿ ಹೇಳಿದೆ.

  • ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ವಿವಾದ
  • ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕ ಟಿ.ಡಿ ರಾಜೇಗೌಡ
  • ಮರು ಎಣಿಕೆಗೆ ಆದೇಶ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ
  • ಮೇ 11 ರಂದು ಪ್ರಕರಣವನ್ನು ತುರ್ತಾಗಿ ಪಟ್ಟಿ ಮಾಡುವಂತೆ ವಕೀಲ ದೇವದತ್ ಕಾಮತ್ ಮೂಲಕ ಅರ್ಜಿ

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತ ಎಣಿಕೆಯಲ್ಲಿ ಅನ್ಯಾಯ ಆಗಿದೆ ಎಂದು ಬಿಜೆಪಿಯ ಡಿಎನ್‌ ಜೀವರಾಜ್ ಅವರು ಹೈಕೋರ್ಟ್​​ ಮೆಟ್ಟಿಲೇರಿದ್ದು, ಸುಮಾರು ಎರಡುವರೆ ವರ್ಷಗಳ ಸತತ ವಿಚಾರಣೆ ಬಳಿಕ ಅಂತಿಮವಾಗಿ ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆಗೆ ಆದೇಶಿಸಿತ್ತು. ಬಳಿಕ ಕೋರ್ಟ್ ಆದೇಶದಂತೆ ಜಿಲ್ಲಾ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಅಂಚೆ ಮತಗಳ ಮರು ಎಣಿಕೆ ಮಾಡಲಾಗಿದ್ದು, ಇದರಲ್ಲಿ ಬಿಜೆಪಿಯ ಜೀವರಾಜ್ ಅವರು ಗೆಲುವು ಸಾಧಿಸಿದ್ದು, ನಿನ್ನೆ (ಮೇ 07) ಪ್ರಮಾಣ ವಚನ ಸ್ವೀಕರಿಸಿದರು.  ಇದರ ಬೆನ್ನಲ್ಲೇ ಇದೀಗ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್​​​ನ ರಾಜೇಗೌಡ ಸಹ ಸುಪ್ರೀಂಕೋರ್ಟ್​​ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ: ಶೃಂಗೇರಿ ಕ್ಷೇತ್ರದ ಅಂಚೆ‌ ಮತ ಎಣಿಕೆ ವಿವಾದ: ಜೋರಾದ ಅಣೆ ಪ್ರಮಾಣ ರಾಜಕೀಯ

ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ. ಮರುಎಣಿಕೆ ಪ್ರಕ್ರಿಯೆಯನ್ನು ಆದೇಶಿಸುವಲ್ಲಿ ಹೈಕೋರ್ಟ್ ತಪ್ಪು ಮಾಡಿದೆ ಎಂದು ರಾಜೇಗೌಡ ಪರ ವಕೀಲ ವಕೀಲ ದೇವದತ್ ಕಾಮತ್ ವಾದ ಮಂಡಿಸಿದ್ದಾರೆ. ಈ ವಾದ ಆಲಿಸಿದ ಸುಪ್ರೀಂಕೋರ್ಟ್, ನಾವು ಇಂತಹ ವಿಷಯಗಳಲ್ಲಿ ತಡೆಯಾಜ್ಞೆ ನೀಡುತ್ತೇವೆ. ಆದರೆ ನಿಮ್ಮ ವಿಷಯವನ್ನು ನಾವು ಪರಿಶೀಲಿಸುತ್ತೇವೆ ಎಂದು ತಿಳಿಸಿದೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್​​​ನ ಟಿಡಿ ರಾಜೇಗೌಡ ಅವರು ಬಿಜೆಪಿಯ ಜೀವರಾಜ್ ಅವರನ್ನು 201 ಮತಗಳ ಅಲ್ಪ ಅಂತರದಿಂದ ಸೋಲಿಸಿದ್ದರು. ಆದ್ರೆ, ಕಾನೂನು ಹೋರಾಟ ನಡೆಸಿ ಮರು ಮತ ಎಣಿಕೆಯಲ್ಲಿ ಬಿಜೆಪಿ ಜೀವರಾಜ್ ಗೆಲುವು ಸಾಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ