AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬದ ದಿನದಂದೇ ಡಿಕೆಶಿ ಕಣ್ಣೀರು ಹಾಕಿದ್ಯಾಕೆ..?

ಕಾಂಗ್ರೆಸ್​ನ ಟ್ರಬಲ್ ಶೂಟರ್ ಕನಕಪುರದ ಬಂಡೇ ಎಂದೇ ಖ್ಯಾತಿಯಾಗಿರುವ ಮಾಜಿ ಸಚವಿ ಡಿಕೆ ಶಿವಕುಮಾರ್ ಗಣೇಶ ಹಬ್ಬದ ದಿನದಂದೇ ಕಣ್ಣೀರು ಹಾಕಿದ್ದಾರೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಡಿಕೆಶಿಯನ್ನು ವಿಚಾರಣೆ ನಡೆಸುತ್ತಿದೆ. ಗಣೇಶ ಹಬ್ಬದಂದೂ ಇಡಿ ವಿಚಾರಣೆಗೆ ನಡೆಸುತ್ತಿದೆ. ಇಂದು ನಮ್ಮ ತಂದೆಗೆ, ಹಿರಿಯರಿಗೆ ಪೂಜೆ ಮಾಡಬೇಕಿತ್ತು. ಆದ್ರೆ ಎಡೆ ಇಡುವುದಕ್ಕೂ ನಮ್ಮನ್ನು ಬಿಟ್ಟಿಲ್ಲ. ನನ್ನ ಕೆಲ ಸ್ನೇಹಿತರು ಹೇಳುತ್ತಿದ್ದಾರೆ ಉಪ್ಪು ತಿಂದವನು ನೀರು ಕುಡಿಬೇಕು ಅಂತ ಹೇಳಿದ್ದಾರೆ. ಕಾಂಗ್ರೆಸ್​ ಪಕ್ಷಕ್ಕಾಗಿ, ನನ್ನ ನಂಬಿದ […]

ಗಣೇಶ ಹಬ್ಬದ ದಿನದಂದೇ ಡಿಕೆಶಿ ಕಣ್ಣೀರು ಹಾಕಿದ್ಯಾಕೆ..?
ಸಾಧು ಶ್ರೀನಾಥ್​
|

Updated on:Sep 06, 2019 | 4:21 PM

Share

ಕಾಂಗ್ರೆಸ್​ನ ಟ್ರಬಲ್ ಶೂಟರ್ ಕನಕಪುರದ ಬಂಡೇ ಎಂದೇ ಖ್ಯಾತಿಯಾಗಿರುವ ಮಾಜಿ ಸಚವಿ ಡಿಕೆ ಶಿವಕುಮಾರ್ ಗಣೇಶ ಹಬ್ಬದ ದಿನದಂದೇ ಕಣ್ಣೀರು ಹಾಕಿದ್ದಾರೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಡಿಕೆಶಿಯನ್ನು ವಿಚಾರಣೆ ನಡೆಸುತ್ತಿದೆ.

ಗಣೇಶ ಹಬ್ಬದಂದೂ ಇಡಿ ವಿಚಾರಣೆಗೆ ನಡೆಸುತ್ತಿದೆ. ಇಂದು ನಮ್ಮ ತಂದೆಗೆ, ಹಿರಿಯರಿಗೆ ಪೂಜೆ ಮಾಡಬೇಕಿತ್ತು. ಆದ್ರೆ ಎಡೆ ಇಡುವುದಕ್ಕೂ ನಮ್ಮನ್ನು ಬಿಟ್ಟಿಲ್ಲ. ನನ್ನ ಕೆಲ ಸ್ನೇಹಿತರು ಹೇಳುತ್ತಿದ್ದಾರೆ ಉಪ್ಪು ತಿಂದವನು ನೀರು ಕುಡಿಬೇಕು ಅಂತ ಹೇಳಿದ್ದಾರೆ. ಕಾಂಗ್ರೆಸ್​ ಪಕ್ಷಕ್ಕಾಗಿ, ನನ್ನ ನಂಬಿದ ಜನರಿಗಾಗಿ ನಾನು ಹೋರಾಟ ಮಾಡಿಕೊಂಡು ಬಂದಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮಾಧ್ಯಮದು ಮುಂದೆ ಮಾತನಾಡುವ ವೇಳೆ ಡಿಕೆಶಿ ಕಣ್ಣೀರು ಹಾಕಿದ್ದಾರೆ.

ದೆಹಲಿಯ ಡಿಕೆ ಶಿವಕುಮಾರ್ ಮನೆಯಲ್ಲಿ ಐಟಿ ದಾಳಿ ವೇಳೆ ದಾಖಲೆಯಿಲ್ಲದ ಹಣ ಪತ್ತೆಯಾಗಿತ್ತು. ಈ ಸಂಬಂಧ ಇಡಿ ಹಣದ ಮೂಲ ತಿಳಿಸುವಂತೆ ಸಮನ್ಸ್​ ನೀಡಿತ್ತು. ಇಡಿ ಸಮನ್ಸ್​ ವಿರುದ್ಧ ಡಿಕೆಶಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಹೈಕೋರ್ಟ್​ನಲ್ಲಿ ಹಿನ್ನಡೆಯಾದ ಬಳಿಕ ಡಿಕೆಶಿ ಜಾರಿ ನಿರ್ದೇಶನಾಯಲ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

Published On - 2:51 pm, Tue, 3 September 19

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು