ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್ನಂತೆ: ಟ್ವಿಟರ್ನಲ್ಲಿ ಕಾಂಗ್ರೆಸ್ ಆರೋಪ
ಮಸ್ಕಿಯ ಮತದಾರರಿಗೆ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಹಣ ಹಂಚಿಕೆ ಮಾಡುವ ವಿಡಿಯೋವನ್ನು ಟ್ಯಾಗ್ ಮಾಡಿ ಆರೋಪಿಸಿದ ರಾಜ್ಯ ಕಾಂಗ್ರೆಸ್, ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದೆ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದೆ.
ಬೆಂಗಳೂರು: ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್ನಂತೆ ಎಂದು ಟ್ವೀಟ್ ಮಾಡಿದ ರಾಜ್ಯ ಕಾಂಗ್ರೆಸ್, ಹಣದಿಂದ ಶಾಸಕರು ಮತ್ತು ಮತಗಳನ್ನು ಖರೀದಿ ಮಾಡುತ್ತದೆ ಎಂದು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದೆ.
ಮಸ್ಕಿಯ ಮತದಾರರಿಗೆ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಹಣ ಹಂಚಿಕೆ ಮಾಡುವ ವಿಡಿಯೋವನ್ನು ಟ್ಯಾಗ್ ಮಾಡಿ ಆರೋಪಿಸಿದ ರಾಜ್ಯ ಕಾಂಗ್ರೆಸ್, ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದೆ. ಬಿಜೆಪಿ ಹಣ ಹಂಚುವ ದೃಶ್ಯ ಇಡೀ ಜಗತ್ತಿಗೆ ಗೊತ್ತಾದರೂ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಕಣ್ಣಿಗೆ ಕಾಣಲಿಲ್ಲವೇ? ಕಂಡರೂ ಜಾಣ ಕುರುಡರಾದರೆ? ಎಂದು ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.
ಇದನ್ನೂ ಓದಿ
ಬಸವಕಲ್ಯಾಣ ಉಪಚುನಾವಣೆ: ಪಕ್ಷದ ಪರ ಪ್ರಚಾರಕ್ಕೆ ಮುಂದಾದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಮುಖ್ಯಮಂತ್ರಿ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ದರ ಕಡಿಮೆ ಆಗುವ ಸಾಧ್ಯತೆಯಿದೆ: ಕೇಂದ್ರ ಸಚಿವ ಸದಾನಂದ ಗೌಡ
ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್ನಂತೆ! ಹಣದಿಂದ ಶಾಸಕರನ್ನೂ ಖರೀದಿಸುತ್ತದೆ, ಮತಗಳನ್ನೂ ಖರೀದಿಸುತ್ತದೆ.
ಮಸ್ಕಿ ಕ್ಷೇತ್ರದ ಮತದಾರರಿಗೆ ನಂದೀಶ್ ರೆಡ್ಡಿ ಹಣ ಹಂಚಿದ ವಿಡಿಯೋ ಇದು.
ಚುನಾವಣೆಯಲ್ಲಿ @BJP4Karnataka ಹಣದ ಹೊಳೆ ಹರಿಸಿದ್ದು ಜಗತ್ತಿಗೆ ತಿಳಿದರೂ @ceo_karnataka ಕಣ್ಣಿಗೆ ಕಾಣಲಿಲ್ಲವೇ? ಕಂಡರೂ ಜಾಣ ಕುರುಡೇ? pic.twitter.com/HUZgnCQHuX
— Karnataka Congress (@INCKarnataka) April 13, 2021
(Congress tweeted against BJP and tag the Money sharing video)
Published On - 12:55 pm, Tue, 13 April 21