AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC BMTC Strike: ನೌಕರರ ಮೇಲೆ ನಿಮಗೇಕೆ ಅಷ್ಟು ದ್ವೇಷ? ಅವರೇನು ಪಾಕಿಸ್ತಾನದವರೇ; ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ರಾಜ್ಯ ಬಿಜೆಪಿ ಸರ್ಕಾರಕ್ಕೆ ನೌಕರರ ಹಿತವೂ ಬೇಕಿಲ್ಲ. ಜನರ ಸುರಕ್ಷತೆಯೂ ಬೇಕಿಲ್ಲ. ದುಪ್ಪಟ್ಟು ದರ ಸುಲಿಗೆಗೆ ನಿಯಂತ್ರಣ ಹೇರಿದ್ದೀರಾ? ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಕ್ರಮ ಕೈಗೊಂಡಿದ್ದೀರಾ? ಎಂದು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

KSRTC BMTC Strike: ನೌಕರರ ಮೇಲೆ ನಿಮಗೇಕೆ ಅಷ್ಟು ದ್ವೇಷ? ಅವರೇನು ಪಾಕಿಸ್ತಾನದವರೇ; ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ
ಸರ್ಕಾರಿ ಬಸ್ (ಸಂಗ್ರಹ ಚಿತ್ರ)
shruti hegde
|

Updated on:Apr 07, 2021 | 5:27 PM

Share

ಬೆಂಗಳೂರು: ಕೊರೊನಾ ಸಮಯದಲ್ಲಿ ಪ್ರತಿಭಟನೆ ಮಾಡುವುದು ಸರಿಯಲ್ಲ. ಸಾರಿಗೆ ನೌಕರರು ನಾಳಿನ ಮುಷ್ಕರವನ್ನು ಕೈಬಿಡಬೇಕು. ಪ್ರತಿಭಟನೆ ಮಾಡಿದರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತೇವೆ. ಬೇರೆ ರಾಜ್ಯಗಳಲ್ಲಿ ಕೊರೊನಾ ನೆಪವೊಡ್ಡಿ ಸಂಬಳ ಕಡಿತ ಮಾಡಲಾಗಿದೆ. ಆದರೆ ನಾವು ಸಾರಿಗೆ ನೌಕರರ ಸಂಬಳವನ್ನು ಕಡಿತ ಮಾಡಿಲ್ಲ. ಸೌರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಸಾರಿಗೆ ಸಿಬ್ಬಂದಿ ನೌಕರರು ಹಠಮಾರಿತನದಿಂದ ಹೊರಬರಬೇಕು ಎಂದು ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲಕ್ಷ್ಮಣ ಸವದಿ ಅವರನ್ನು ತರಾಟೆಗೆ ತೆಗೆದುಕೊಂಡಿರುವ ರಾಜ್ಯ ಕಾಂಗ್ರೆಸ್ ಘಟಕ ‘ನೌಕರರಿಗೆ ಖಾಸಗಿ ಬಸ್‌ಗಳ ಬೆದರಿಕೆ ಹಾಕುತ್ತಿರುವ ನೀವು, ಸಾರ್ವಜನಿಕರ ಹಿತವನ್ನು ಯೋಚಿಸಿದ್ದೀರಾ’ ಎಂದು ಟ್ವೀಟ್ ಮೂಲಕ ಪ್ರಶ್ನಿಸಿದೆ.

ರಾಜ್ಯ ಬಿಜೆಪಿ ಸರ್ಕಾರಕ್ಕೆ ನೌಕರರ ಹಿತವೂ ಬೇಕಿಲ್ಲ. ಜನರ ಸುರಕ್ಷತೆಯೂ ಬೇಕಿಲ್ಲ ದುಪ್ಪಟ್ಟು ದರ ಸುಲಿಗೆಗೆ ನಿಯಂತ್ರಣ ಹೇರಿದ್ದೀರಾ? ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಕ್ರಮ ಕೈಗೊಂಡಿದ್ದೀರಾ? ಎಂದು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರದ ಕ್ರಮ ಮನುಷ್ಯತ್ವವಿಲ್ಲದ ಸರ್ವಾಧಿಕಾರಿ ನಡೆ. ಸಾರಿಗೆ ನೌಕರರ ವೇತನ ತಡೆ ಹಿಡಿಯಲಾಗಿದೆ. ಮುಖ್ಯಮಂತ್ರಿ ಬಿ.ಎಸ್​ಯಡಿಯೂರಪ್ಪನವರೇ ನೌಕರರ ಮೇಲೆ ನಿಮಗೇಕೆ ಅಷ್ಟು ದ್ವೇಷ? ಸಾರಿಗೆ ನೌಕರರು ಪಾಕಿಸ್ತಾನದವರೇ ಎಂದು ಕಾಂಗ್ರೆಸ್ ಟ್ವೀಟ್‌ನಲ್ಲಿ ಪ್ರಶ್ನೆ ಮಾಡಿದೆ.

ರಾಜ್ಯ ಸರ್ಕಾರ ಮೊಂಡುತನ ಬಿಟ್ಟು ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಬೇಕು. ಜೊತೆಗೆ ಪ್ರಯಾಣಿಕರ, ನೌಕರರ ಹಿತ ಕಾಯುವ ಕೆಲಸ ಮಾಡಬೇಕು ಎಂದು ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಘಟಕ ಆಗ್ರಹಿಸಿದೆ.

ಕರ್ನಾಟಕ ರಾಜ್ಯದಲ್ಲಿ ಬೆಳಿಗ್ಗೆಯಿಂದಲೇ ಸಾರಿಗೆ ನೌಕರರ ಮುಷ್ಕರ ಬಿಸಿ ತಟ್ಟಿದೆ. ಪ್ರಯಾಣಿಕರು ನಿಂತಲ್ಲೇ ನಿಲ್ಲುವ ಸಂದಿಗ್ಧ ಸ್ಥಿತಿ. ಇನ್ನು ಕೆಲವರು ಕಾಲ್ನಡಿಗೆಯಲ್ಲಿಯೇ ಮನೆ ಸೇರುವ ಪರಿಸ್ಥಿತಿ ಎದುರಾಗಿದೆ. ಏತನ್ಮಧ್ಯೆ ಸಾರಿಗೆ ಬಸ್​ಗಳು ಇಲ್ಲಿದಿದ್ದರೂ, ಪರ್ಯಾಯವಾಗಿ ಖಾಸಗಿ ಬಸ್​ಗಳ ವ್ಯವಸ್ಥೆ ಮಾಡಲಾಗಿತ್ತು. ಕೆಲವು ಜಿಲ್ಲೆಗಳಲ್ಲಿ ಖಾಸಗಿ ಬಸ್​ ಸಂಚರಿಸಿದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಬಸ್​ ಸಂಚಾರವಾಗಿಲ್ಲ. ಬಸ್​ಸ್ಟ್ಯಾಂಡ್​ನಲ್ಲಿಯೇ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: Bus Strike: ಸಾರಿಗೆ ಸಿಬ್ಬಂದಿ ನೌಕರರು ಹಠಮಾರಿತನದಿಂದ ಹೊರಬರಬೇಕು: ಸಚಿವ ಲಕ್ಷ್ಮಣ ಸವದಿ

Bus Strike: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗಿಂತ ಸಂಬಳಕ್ಕೆ ಸಾಕಷ್ಟು ಹಣ ಖರ್ಚಾಗುತ್ತಿದೆ: ಕಂದಾಯ ಸಚಿವ ಆರ್.ಅಶೋಕ್

Published On - 5:08 pm, Wed, 7 April 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!