ಯಡಿಯೂರಪ್ಪನವರನ್ನು ಕೆಣಕಲು ಹೋದ್ರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮ: ಬಿಜೆಪಿ ಎಚ್ಚರಿಕೆ!

ಯಡಿಯೂರಪ್ಪನವರ ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ? ಪ್ರಕರಣ ದಾಖಲಾಗಿ 3 ತಿಂಗಳಾದ ಮೇಲೆ ದಿಢೀರ್ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ? ಕಾಂಗ್ರೆಸ್ಸಿನ ದೆಹಲಿ ನಾಯಕರ ನೀಚ ದ್ವೇಷ ರಾಜಕಾರಣಕ್ಕೆ ಕಟ್ಟುಬಿದ್ದು ಯಡಿಯೂರಪ್ಪನವರನ್ನು ಕೆಣಕಲು ಹೋದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮವಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

ಯಡಿಯೂರಪ್ಪನವರನ್ನು ಕೆಣಕಲು ಹೋದ್ರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮ: ಬಿಜೆಪಿ ಎಚ್ಚರಿಕೆ!
ಯಡಿಯೂರಪ್ಪನವರನ್ನು ಕೆಣಕಲು ಹೋದ್ರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮ: ಬಿಜೆಪಿ ಎಚ್ಚರಿಕೆ!
Follow us
|

Updated on: Jun 13, 2024 | 9:10 PM

ಬೆಂಗಳೂರು, ಜೂನ್​ 13: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ (BS Yediyurappa) ಪೊಕ್ಸೋ ಪ್ರಕರಣದಲ್ಲಿ (POCSO Case) ಬಂಧನದ ಭೀತಿ ಎದುರಾಗಿದೆ. ಪೊಲೀಸರು ಸಲ್ಲಿಸಿದ್ದ ಅರ್ಜಿ ಮನ್ನಿಸಿದ ಕೋರ್ಟ್ ಯಡಿಯೂರಪ್ಪಗೆ ಬಂಧನದ ವಾರೆಂಟ್ ಜಾರಿಗೊಳಿಸಿ ಗುರುವಾರ ಆದೇಶ ಹೊರಿಡಿಸಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಇತ್ತೀಚೆಗೆ ವಿಶೇಷ ಅಭಿಯೋಜಕರನ್ನು ನೇಮಿಸಿತ್ತು. ಪ್ರಕರಣ ದಾಖಲಾಗಿ 3 ತಿಂಗಳಾದ ಮೇಲೆ ದಿಢೀರ್​ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ? ಇದು ಸರ್ಕಾರದ ನೀಚ ದ್ವೇಷ ರಾಜಕಾರಣ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಬಿಜೆಪಿ, ಮಾನಸಿಕ ಅಸ್ವಸ್ಥೆ ಸ್ವತಃ ತನ್ನ ಮಕ್ಕಳು ಹಾಗೂ ಗಂಡನ ವಿರುದ್ಧವೇ ದೂರು ನೀಡಿರುವುದೂ ಸೇರಿದಂತೆ 53 ಜನರ ವಿರುದ್ಧದ ದೂರುಗಳಲ್ಲಿ ಯಡಿಯೂರಪ್ಪನವರ ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ? ಪ್ರಕರಣ ದಾಖಲಾಗಿ 3 ತಿಂಗಳಾದ ಮೇಲೆ ದಿಢೀರ್ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ? ಕಾಂಗ್ರೆಸ್ಸಿನ ದೆಹಲಿ ನಾಯಕರ ನೀಚ ದ್ವೇಷ ರಾಜಕಾರಣಕ್ಕೆ ಕಟ್ಟುಬಿದ್ದು ಯಡಿಯೂರಪ್ಪನವರನ್ನು ಕೆಣಕಲು ಹೋದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮವಾಗುವುದರಲ್ಲಿ ಸಂಶಯವೇ ಇಲ್ಲ ಎಂದು ವಾಗ್ದಾಳಿ ಮಾಡಿದೆ.

ಬಿಜೆಪಿ ಟ್ವೀಟ್ 

ಲೋಕಸಭಾ ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್​ ನಾಯಕರು ಬಿಜೆಪಿ ವಿರುದ್ಧ ಒಂದಿಲ್ಲೊಂದು ಷಡ್ಯಂತ್ರ ರೂಪಿಸುವಲ್ಲಿ ತಲ್ಲೀನರಾಗಿದ್ದಾರೆ. ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ್ದ ರಾಹುಲ್​ ಗಾಂಧಿ ಅವರನ್ನು ಕೋರ್ಟ್ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಮಾನಸಿಕ ಅಸ್ವಸ್ಥೆ ನೀಡಿದ್ದ ದೂರನ್ನು ಆಧರಿಸಿ ರೈತ ನಾಯಕ ಬಿಎಸ್​ ಯಡಿಯೂರಪ್ಪರನ್ನು ಬಂಧಿಸಲು ಹವಣಿಸುತ್ತಿದೆ ಎಂದು ಕಿಡಿಕಾರಿದೆ.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್​: ಇದು ಹಗೆತನ ರಾಜಕೀಯವಲ್ಲವೇ? ಸಿಎಂಗೆ ಬಿಜೆಪಿ ನಾಯಕರ ಪ್ರಶ್ನೆ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ತಲೆದಂಡ ಹಾಗೂ ಸ್ವತಃ ಸರ್ಕಾರದ ಮೇಲೆ ಆರೋಪ ಬಂದಿರುವ ಬೆನ್ನಲ್ಲೇ ಭ್ರಷ್ಟಾಚಾರ ಪ್ರಕರಣದ ದಿಕ್ಕು ತಪ್ಪಿಸುವ ಉದ್ದೇಶದಿಂದ ಯಡಿಯೂರಪ್ಪನವರ ಮೇಲೆ ಅಪಪ್ರಚಾರದ ಷಡ್ಯಂತರ ರೂಪಿಸಿದ್ದಾರೆ.

ಇದನ್ನೂ ಓದಿ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್

ಈ ಹಿಂದೆ ಸ್ವತಃ ಗೃಹ ಸಚಿವ ಡಾ. ಜಿ ಪರಮೇಶ್ವರ್​ ಅವರೇ ಮಾನಸಿಕ ಅಸ್ವಸ್ಥೆ ದುರುದ್ದೇಶಪೂರಿತವಾಗಿ ದೂರು ನೀಡಿದ್ದಾಳೆಂದು ಹೇಳಿಕೆ ನೀಡಿ ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುದು ಜಗಜ್ಜಾಹೀರಾಗಿತ್ತು. 3 ತಿಂಗಳ ನಂತರ ಈ ಪ್ರಕರಣಕ್ಕೆ ಮರುಜೀವ ತುಂಬಲು ಹೊರಟಿರುವುದು ವಿಪರ್ಯಾಸ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ