ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತೇವೆ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ಬಿಜೆಪಿ ಸರ್ಕಾರವನ್ನು 40 ಪರ್ಸೆಂಟ್ ಕಮೀಶನ್ ಸರ್ಕಾರ ಮತ್ತು ಬೇರೆ ಹಲವು ಆರೋಪಗಳನ್ನು ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಳೆದ 6 ತಿಂಗಳಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ ಆರೋಪಗಳನ್ನು ಜಾರಿಗೆ ತಂದು ಭ್ರಷ್ಟ ಸರ್ಕಾರ ಅನಿಸಿಕೊಂಡಿದೆ. ರಾಜ್ಯದಲ್ಲಿ ಭೀಕರ ಬರಗಾಲ ತಲೆದೋರಿದ್ದರೂ ಒಬ್ಬೆಒಬ್ಬೇ ಜಿಲ್ಲಾ ಉಸ್ತುವಾರಿ ಸಚಿವ ತನ್ನ ಜಿಲ್ಲೆಯ ಜನರ ಸ್ಥಿತಿ ಏನಾಗಿದೆ ಅಂತ ನೋಡುವ ಪ್ರಯತ್ನ ಮಾಡಿಲ್ಲ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷನಾದ ನಂತರ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಿದ ಬಿವೈ ವಿಜಯೇಂದ್ರ (BY Vijayendra) ಪಕ್ಷದ ಕಾರ್ಯಕರ್ತರಿಗೆ ಅಭಯ ಮತ್ತು ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ (Congress party) ಎಚ್ಚರಿಕೆ ನೀಡಿದರು. ಪಕ್ಷ ಸಂಘಟನೆಗಾಗಿ ದಶಕಗಳಿಂದ ಬಿಎಸ್ ಯಡಿಯೂರಪ್ಪನವರು (BS Yediyurappa) ನಡೆಸಿದ ಹೋರಾಟವನ್ನು ಹತ್ತಿರದಿಂದ ನೋಡಿರುವ ತನಗೆ ಸಾಮಾನ್ಯ ಕಾರ್ಯಕರ್ತರು ಪಡುವ ಶ್ರಮದ ಬಗ್ಗೆ ಅರಿವಿದೆ. ವೇದಿಕೆಯ ಮೇಲೆ ಕುಳಿತಿರುವ ಎಲ್ಲ ಹಿರಿಯ ನಾಯಕರು ಮತ್ತು ಪಕ್ಷದ ಎಲ್ಲ ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದ ಹಾಗೆ ಕಾರ್ಯ ನಿರ್ವಹಿಸುವುದಾಗಿ ವಿಜಯೇಂದ್ರ ಹೇಳಿದರು. ಬಿಜೆಪಿ ಸರ್ಕಾರವನ್ನು 40 ಪರ್ಸೆಂಟ್ ಕಮೀಶನ್ ಸರ್ಕಾರ ಮತ್ತು ಬೇರೆ ಹಲವು ಆರೋಪಗಳನ್ನು ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಳೆದ 6 ತಿಂಗಳಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ ಆರೋಪಗಳನ್ನು ಜಾರಿಗೆ ತಂದು ಭ್ರಷ್ಟ ಸರ್ಕಾರ ಅನಿಸಿಕೊಂಡಿದೆ. ರಾಜ್ಯದಲ್ಲಿ ಭೀಕರ ಬರಗಾಲ ತಲೆದೋರಿದ್ದರೂ ಒಬ್ಬೆಒಬ್ಬೇ ಜಿಲ್ಲಾ ಉಸ್ತುವಾರಿ ಸಚಿವ ತನ್ನ ಜಿಲ್ಲೆಯ ಜನರ ಸ್ಥಿತಿ ಏನಾಗಿದೆ ಅಂತ ನೋಡುವ ಪ್ರಯತ್ನ ಮಾಡಿಲ್ಲ. ಹಾಗಾಗಿ, ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಈ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಿದೆ ಎಂದು ವಿಜಯೇಂದ್ರ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ