ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕಾಂಗ್ರೆಸ್​ ಕಾರ್ಯಕರ್ತ ಹೃದಯಾಘಾತದಿಂದ ಸಾವು

ಬೆಂಗಳೂರಿನ ಪ್ರೆಸ್ ಕ್ಲಬ್​ ಇಂದು ದಾರುಣ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ವಿರೋಧಿಸಿ ಸುದ್ದಿಗೋಷ್ಠಿ ನಡಸುತ್ತಿದ್ದ ಕಾಂಗ್ರೆಸ್​ ಕಾರ್ಯಕರ್ತ ಹೃದಯಾಘಾತದಿಂದ ಮೃತಪಟ್ಟಿರುವಂತಹ ಘಟನೆ ನಡೆದಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕಾಂಗ್ರೆಸ್​ ಕಾರ್ಯಕರ್ತ ಹೃದಯಾಘಾತದಿಂದ ಸಾವು
ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕಾಂಗ್ರೆಸ್​ ಕಾರ್ಯಕರ್ತ ಹೃದಯಾಘಾತದಿಂದ ಸಾವು
Follow us
|

Updated on:Aug 19, 2024 | 3:34 PM

ಬೆಂಗಳೂರು, ಆಗಸ್ಟ್​ 19: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಯುತ್ತಿರುವ ವೇಳೆ ಹೃದಯಾಘಾತದಿಂದ ಕಾಂಗ್ರೆಸ್​​ ಕಾರ್ಯಕರ್ತ ಸಾವನ್ನಪ್ಪಿರುವಂತಹ (death) ಘಟನೆ ನಗರದ ಪ್ರೆಸ್ ಕ್ಲಬ್​​ನಲ್ಲಿ ನಡೆದಿದೆ. ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ. ರಾಜ್ಯಪಾಲರ ಪ್ರಾಸಿಕ್ಯೂಷನ್ ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಸಂಘದಿಂದ ಸುದ್ದಿಗೋಷ್ಠಿ ನಡೆಯುತ್ತಿರುವಾಗ ಘಟನೆ ನಡೆದಿದೆ.

ಹೃದಯಾಘಾತವಾದ ಬಳಿಕ ಕೂಡಲೇ ಹತ್ತಿರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಪ್ರಾಸಿಕ್ಯೂಷನ್​ ವಿರೋಧಿಸಿ ಹೋರಾಟ: ಸತ್ಯಾಗ್ರಹ ನಿರತವಾಗಿರುವಾಗಲೇ ಕಾರ್ಯಕರ್ಯ ಅಸ್ವಸ್ಥ

ನಿನ್ನೆ ಯಾದಗಿರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ವಿಚಾರ ವಿರೋಧಿಸಿ  ನಗರದ ಸುಭಾಷ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕದ ಸಿದ್ದರಾಮಯ್ಯ ಅಭಿಮಾನಿ ಬ್ರಿಗೇಡ್ ರಾಜ್ಯಾಧ್ಯಕ್ಷ  ರಾಜಕುಮಾರ್ ಗಣೇಶ್​ ಎಂಬುವವರು ಸತ್ಯಾಗ್ರಹ ನಿರತವಾಗಿರುವಾಗಲೇ ಅಸ್ವಸ್ಥರಾಗಿದ್ದ ಘಟನೆ ನಡೆದಿತ್ತು.

ಇದನ್ನೂ ಓದಿ: ನಲಪಾಡ್ ಯೂತ್ ಕಾಂಗ್ರೆಸ್ ಹೆಸರೇಳಿಕೊಂಡು ವಿದ್ಯಾರ್ಥಿ ಕಿಡ್ನಾಪ್ ಮಾಡಿ ಕಿರುಕುಳ; 9 ಜನರ ವಿರುದ್ಧ FIR

ನಸುಕಿನ ಜಾವದಿಂದಲೇ ರಾಜಕುಮಾರ್ ಏಕಾಂಗಿ ಹೋರಾಟ ನಡೆಸಿದ್ದರು.​ ಹಾಗಾಗಿ ನಿತ್ರಾಣಗೊಂಡು ಅಸ್ವಸ್ಥಗೊಂಡಿದ್ದರು. ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಪೊಲೀಸ್ ವಾಹನ ಡಿಕ್ಕಿ: ಬೈಕ್​ ಸವಾರನ ಕಾಲು ಮುರಿತ

ದೇವನಹಳ್ಳಿ: ಹೆದ್ದಾರಿಯಲ್ಲಿ ಬೈಕ್​​ಗೆ ಪೊಲೀಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಸವಾರನ ಕಾಲು ಮುರಿದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಮುದಗುರ್ಕಿ ಗ್ರಾಮದ ಬಳಿ ನಡೆದಿದೆ. ಬಿಹಾರ ಮೂಲದ ಅಂಜಲಿ ( 17 ) ಮತ್ತು ಸನ್ನಿದೇವಲ್ ( 22 ) ಗಾಯಗೊಂಡ ಬೈಕ್ ಸವಾರರು.

ಇದನ್ನೂ ಓದಿ: ಬೆಂಗಳೂರು: ಲಿಫ್ಟ್‌ ಕೇಳಿದ ಯುವತಿ ಮೇಲೆ ಎರಗಿ ಅತ್ಯಾಚಾರ ಎಸಗಿದ್ದ ಕಾಮುಕ ಅರೆಸ್ಟ್, ಸಿಸಿಟಿವಿ ಆಧರಿಸಿ ಆರೋಪಿ ಬಂಧನ

ಯೂಟರ್ನ್ ಮಾಡುವ ವೇಳೆ ಬೈಕ್​​ಗೆ ಪೊಲೀಸ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತ ಕಂಡು ಪೊಲೀಸ್ ಜೀಪ್ ಸಿಬ್ಬಂದಿಗೆ ಸಾರ್ವಜನಿಕರಿಂದ ತರಾಟೆ ತೆಗೆದುಕೊಳ್ಳಲಾಗಿದೆ. ಗಾಯಾಳುಗಳಿಗೆ ಬೆಂಗಳೂರಿನ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:08 pm, Mon, 19 August 24