ವಿಧಾನಸೌಧದಲ್ಲಿ ರಾಜ್ಯಸಭಾ ಗೆಲುವಿನ ಸಂಭ್ರಮದ ವೇಳೆ ಮೊಳಗಿದ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ!

pakistan zindabad solgan in vidhansouda : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಕಾಂಗ್ರೆಸ್​ನ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಆದ್ರೆ, ಈ ಗೆಲುವಿನ ಸಂಭ್ರಮದಲ್ಲಿ ದೇಶ ವಿರೋಧಿ ಘೋಷಣೆ ಮೊಳಗಿದೆ. ಕಾಂಗ್ರೆಸ್​ನ ನಾಸೀರ್‌ ಹುಸೇನ್‌ ಅವರ ಬೆಂಬಲಿಗ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ.

Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Feb 27, 2024 | 8:24 PM

ಬೆಂಗಳೂರು (ಫೆಬ್ರವರಿ, 27): ರಾಜ್ಯಸಭಾ ಚುನಾವಣೆ ಫಲಿತಾಂಶ(Rajyasabha Election)ಘೋಷಣೆಯಾದ ಬೆನ್ನಲ್ಲೇ ವಿಧಾನಸೌಧದ ಆವರಣದಲ್ಲಿಯೇ ದೇಶದ್ರೋಹದ ಘೋಷಣೆ ಮೊಳಗಿದೆ. ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಅವರ ಬೆಂಬಲಿಗರ ಪೈಕಿ ಒಬ್ಬರು ಪಾಕಿಸ್ತಾನ್‌ ಜಿಂದಾಬಾದ್‌ ಎನ್ನುವ ಘೋಷಣೆ ಕೂಗಿದ್ದಾರೆ. ನಾಸೀರ್‌ ಹುಸೇನ್‌ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ಪಾಕಿಸ್ತಾನ್‌ ಜಿಂದಾಬಾದ್‌, ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾನೆ. ಇದೇ ವೇಳೆ ಪಕ್ಕದಲ್ಲಿದ್ದ ಕೆಲವರು ಆತನ ಬಾಯಿಮುಚ್ಚಿಸಿದ್ದಾರೆ. ಇದೀಗ ಪಾಕಿಸ್ತಾನ್ ಜಿಂದಾಬಾದ್​ ಎಂದು ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ.

ನಾಸೀರ್ ಹುಸೇನ್‌ ಅವರು ರಾಜ್ಯಸಭೆಗೆ ಆಯ್ಕೆಯಾಗಿರುವುದರಿಂದ ಅವರ ಅಭಿಮಾನಿಗಳು ವಿಧಾನಸೌಧದ ಲಾಂಜ್ ಬಳಿ ಸಂಭ್ರಮಾಚರಣೆ ಮಾಡಿದರು. ನಾಸೀರ್ ಹುಸೇನ್ ಅವರಿಗೆ ಹೂವಿನ ಹಾರ ಹಾಕಿ ಶುಭಾಶಯಗಳನ್ನು ತಿಳಿಸುತ್ತಿದ್ದರು. ಈ ವೇಳೆ ನಾಸೀರ್ ಹುಸೇನ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದಾಗ ಅವರ ಹಿಂದೆ ನಿಂತಿದ್ದ​ ಬೆಂಬಲಿನೋರ್ವ ಜಿಂದಾಬಾದ್ ಜಿಂದಾಬಾದ್ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಎರಡು ಬಾರಿ ಘೋಷಣೆ ಕೂಗಿದ್ದಾರೆ. ವಿಡಿಯೋದಲ್ಲಿ ಅದು ಅಸ್ಪಷ್ಟವಾಗಿ ಕೇಳುಸುತ್ತಿದೆ.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಮತದಾನದ ವೇಳೆ ಬಸವರಾಜ ರಾಯರೆಡ್ಡಿಗೆ ಗೊಂದಲ; ಯಾರಿಗೆ ಹಾಕಿದರು ವೋಟ್?

ಕಾಂಗ್ರೆಸ್ ಕಾರ್ಯಕರ್ತನೋರ್ವ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ನೂತನ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನು ವರದಿಗಾರರೊಬ್ಬರು ಪ್ರಶ್ನಿಸಿದರು. ಇದಕ್ಕೆ ಕೆಂಡಾಮಂಡಲರಾದ ನಾಸೀರ್ ಹುಸೇನ್ , ಪ್ರಶ್ನೆ ಮಾಡಿದ ವರದಿಗಾರನ ಮುಖಕ್ಕೆ ತಿವಿಯಲು ಮುಂದಾಗಿದ್ದಾರೆ.

ದೂರು ನೀಡಲು ಬಿಜೆಪಿ ತೀರ್ಮಾನ

ಪಾಕ್​ ಪರ ಘೋಷಣೆ ಕೂಗಿದವರ ವಿರುದ್ಧ ದೂರು ನೀಡಲು ಬಿಜೆಪಿ ಮುಂದಾಗಿದೆ. ಎಂಎಲ್​ಸಿ ಎನ್​.ರವಿಕುಮಾರ್​ ನೇತೃತ್ವದಲ್ಲಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಲು ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಇದು ರಾಜಕೀಯ ಸ್ವರೂಪ ಪಡೆದುಕೊಳ್ಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.

ಇನ್ನು ಈ ಬಗ್ಗೆ ಟಿವಿ9ಗೆ ವಿಧಾನಪರಿಷತ್​ನ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಪ್ರತಿಕ್ರಿಯಿಸಿ, ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರನ್ನು ತಕ್ಷಣ ಬಂಧಿಸಬೇಕು. ನಾಳೆ ಸದನದಲ್ಲಿ ಪಾಕಿಸ್ತಾನ ಪರ ಘೋಷಣೆ ವಿಚಾರ ಪ್ರಸ್ತಾಪಿಸುತ್ತೇವೆ. ಘೋಷಣೆ ಕೂಗಿದವನ ಬಂಧನಕ್ಕೆ ಆಗ್ರಹಿಸುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:57 pm, Tue, 27 February 24

‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ