AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಹೆಚ್ಚಳ ಖಂಡಿಸಿ ಗದಗದಲ್ಲಿ ಕೈ ಕಾರ್ಯಕರ್ತರ ಟ್ರ್ಯಾಕ್ಟರ್ ಮೆರವಣಿಗೆ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ಪ್ರತಿದಿನ ಒಂದಲ್ಲ ಒಂದು ಕಡೆ ಪ್ರತಿಭಟನೆ ನಡೆಯುತ್ತಿದೆ. ಇಂದು (ಫೆ25) ಗದಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಟ್ರ್ಯಾಕ್ಟರ್ ಮೆರವಣಿಗೆ ನಡೆಸಿದರು. ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಸ್ವತಃ ತಾವೇ ಟ್ರ್ಯಾಕ್ಟರ್ ಚಾಲನೆ ಮಾಡಿದರು.

ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಹೆಚ್ಚಳ ಖಂಡಿಸಿ ಗದಗದಲ್ಲಿ ಕೈ ಕಾರ್ಯಕರ್ತರ ಟ್ರ್ಯಾಕ್ಟರ್ ಮೆರವಣಿಗೆ
ಕಾಂಗ್ರೆಸ್ ಕಾರ್ಯಕರ್ತರಿಂದ ಟ್ರ್ಯಾಕ್ಟರ್ ಮೆರವಣಿಗೆ
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 25, 2021 | 7:38 PM

Share

ಗದಗ: ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯುವಂತೆ ಆಗ್ರಹಿಸಿ ಮತ್ತು ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಟ್ರ್ಯಾಕ್ಟರ್ ಜಾಥಾ ನಡೆಸಿದರು. ಡಿಸಿ ಕಚೇರಿ ಆವರಣಕ್ಕೆ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಟ್ರ್ಯಾಕ್ಟರ್ ನುಗ್ಗಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ಪ್ರತಿ ದಿನ ಒಂದಲ್ಲ ಒಂದು ಕಡೆ ಪ್ರತಿಭಟನೆ ನಡೆಯುತ್ತಿದೆ. ಇಂದು (ಫೆಬ್ರವರಿ 25) ಗದಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಟ್ರ್ಯಾಕ್ಟರ್ ಮೆರವಣಿಗೆ ನಡೆಸಿದರು. ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಸ್ವತಃ ತಾವೇ ಟ್ರ್ಯಾಕ್ಟರ್ ಚಾಲನೆ ಮಾಡಿದರು. ಜಿಲ್ಲಾಧಿಕಾರಿ ಸುಂದರೇಶ್ ಬಾಬು ಪ್ರತಿಭಟನಾ ನಿರತರ ಮನವಿಯನ್ನು ಆಲಿಸಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ ಸಚಿವ ಹೆಚ್.ಕೆ.ಪಾಟೀಲ್ ಇದು ರೈತರಿಗೆ ಮಾಡಿದ ಅವಮಾನವೆಂದು ಸಿಟ್ಟಾದರು.

ಕೃಷಿ ತಿದ್ದುಪಡಿ ಕಾಯ್ದೆ ವಿರುದ್ಧ ಆಕ್ರೋಶ

ಸಿಪಿಎಂ ಕಾರ್ಯಕರ್ತರಿಂದ ಧರಣಿ ರಾಯಚೂರಿನಲ್ಲೂ ಇಂದು ತೈಲ ಬೆಲೆ ಏರಿಕೆಗೆ ವಿರೋಧವನ್ನು ವ್ಯಕ್ತಪಡಿಸಿ ನೂರಾರು ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗು ಗೃಹ ಸಚಿವ ಅಮಿತ್ ಶಾ ಪ್ರತಿಕೃತಿ ದಹನಕ್ಕೆ ಯತ್ನಿಸಿದರು. ಆದರೆ ಪ್ರತಿಕೃತಿ ದಹನಕ್ಕೆ ಪೊಲೀಸರು ತಡೆ ಹಿಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ನಡೆದ ಧರಣಿಯಲ್ಲಿ ನಿರಂತರ ಬೆಲೆಯೇರಿಕೆಯಿಂದ ಬಡವರ ಜೀವನ ಕಷ್ಟವಾಗಿದೆ ಎಂದು ಸಿಪಿಎಂ ಕಾರ್ಯಕರ್ತರು ಆರೋಪಿಸಿದರು.

ತೈಲ ಬೆಲೆ ಏರಿಕೆಯನ್ನು ಖಂಡಿಸಿ ಸಿಪಿಎಂ ಕಾರ್ಯಕರ್ತರಿಂದ ಧರಣಿ

ನಾಳೆ ಲಾರಿ ಮುಷ್ಕರ ಡೀಸೆಲ್ ಬೆಲೆಯನ್ನು ಇಳಿಸಬೇಕೆಂದು ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಲಾರಿ ಮುಷ್ಕರ ನಡೆಯುತ್ತದೆ. ನಾಳೆ ಬೆಳಗ್ಗೆಯಿಂದ ಸಂಜೆವರೆಗೂ ಲಾರಿಗಳು ರಸ್ತೆಗಳಿಗೆ ಇಳಿಯುವುದಿಲ್ಲೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ. ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ನಾಳೆ ಒಂದು ದಿನ ಸಾಂಕೇತಿಕ ಮುಷ್ಕರ ನಡೆಯಲಿದೆ. ಬೇಡಿಕೆ ಈಡೇರದೆ ಇದ್ದರೆ ಮಾರ್ಚ್​ 15ರಿಂದ ರಾಜ್ಯಾದ್ಯಂತ ಲಾರಿಗಳ ಓಡಾಟವನ್ನು ಸ್ಥಗಿತಗೊಳಿಸಲಾಗುವುದು ಎಂದು ಷಣ್ಮುಗಪ್ಪ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ

ನಾಳೆ ಕರ್ನಾಟಕದಲ್ಲೂ ರಸ್ತೆಗಿಳಿಯಲ್ಲ ಲಾರಿಗಳು; ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಘೋಷಣೆ

Petrol Diesel Price | ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್​, ಡೀಸೆಲ್ ದರ!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ