ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಹೆಚ್ಚಳ ಖಂಡಿಸಿ ಗದಗದಲ್ಲಿ ಕೈ ಕಾರ್ಯಕರ್ತರ ಟ್ರ್ಯಾಕ್ಟರ್ ಮೆರವಣಿಗೆ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 25, 2021 | 7:38 PM

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ಪ್ರತಿದಿನ ಒಂದಲ್ಲ ಒಂದು ಕಡೆ ಪ್ರತಿಭಟನೆ ನಡೆಯುತ್ತಿದೆ. ಇಂದು (ಫೆ25) ಗದಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಟ್ರ್ಯಾಕ್ಟರ್ ಮೆರವಣಿಗೆ ನಡೆಸಿದರು. ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಸ್ವತಃ ತಾವೇ ಟ್ರ್ಯಾಕ್ಟರ್ ಚಾಲನೆ ಮಾಡಿದರು.

ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಹೆಚ್ಚಳ ಖಂಡಿಸಿ ಗದಗದಲ್ಲಿ ಕೈ ಕಾರ್ಯಕರ್ತರ ಟ್ರ್ಯಾಕ್ಟರ್ ಮೆರವಣಿಗೆ
ಕಾಂಗ್ರೆಸ್ ಕಾರ್ಯಕರ್ತರಿಂದ ಟ್ರ್ಯಾಕ್ಟರ್ ಮೆರವಣಿಗೆ
Follow us on

ಗದಗ: ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯುವಂತೆ ಆಗ್ರಹಿಸಿ ಮತ್ತು ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಟ್ರ್ಯಾಕ್ಟರ್ ಜಾಥಾ ನಡೆಸಿದರು. ಡಿಸಿ ಕಚೇರಿ ಆವರಣಕ್ಕೆ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಟ್ರ್ಯಾಕ್ಟರ್ ನುಗ್ಗಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ಪ್ರತಿ ದಿನ ಒಂದಲ್ಲ ಒಂದು ಕಡೆ ಪ್ರತಿಭಟನೆ ನಡೆಯುತ್ತಿದೆ. ಇಂದು (ಫೆಬ್ರವರಿ 25) ಗದಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಟ್ರ್ಯಾಕ್ಟರ್ ಮೆರವಣಿಗೆ ನಡೆಸಿದರು. ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಸ್ವತಃ ತಾವೇ ಟ್ರ್ಯಾಕ್ಟರ್ ಚಾಲನೆ ಮಾಡಿದರು. ಜಿಲ್ಲಾಧಿಕಾರಿ ಸುಂದರೇಶ್ ಬಾಬು ಪ್ರತಿಭಟನಾ ನಿರತರ ಮನವಿಯನ್ನು ಆಲಿಸಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ ಸಚಿವ ಹೆಚ್.ಕೆ.ಪಾಟೀಲ್ ಇದು ರೈತರಿಗೆ ಮಾಡಿದ ಅವಮಾನವೆಂದು ಸಿಟ್ಟಾದರು.

ಕೃಷಿ ತಿದ್ದುಪಡಿ ಕಾಯ್ದೆ ವಿರುದ್ಧ ಆಕ್ರೋಶ

ಸಿಪಿಎಂ ಕಾರ್ಯಕರ್ತರಿಂದ ಧರಣಿ
ರಾಯಚೂರಿನಲ್ಲೂ ಇಂದು ತೈಲ ಬೆಲೆ ಏರಿಕೆಗೆ ವಿರೋಧವನ್ನು ವ್ಯಕ್ತಪಡಿಸಿ ನೂರಾರು ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗು ಗೃಹ ಸಚಿವ ಅಮಿತ್ ಶಾ ಪ್ರತಿಕೃತಿ ದಹನಕ್ಕೆ ಯತ್ನಿಸಿದರು. ಆದರೆ ಪ್ರತಿಕೃತಿ ದಹನಕ್ಕೆ ಪೊಲೀಸರು ತಡೆ ಹಿಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ನಡೆದ ಧರಣಿಯಲ್ಲಿ ನಿರಂತರ ಬೆಲೆಯೇರಿಕೆಯಿಂದ ಬಡವರ ಜೀವನ ಕಷ್ಟವಾಗಿದೆ ಎಂದು ಸಿಪಿಎಂ ಕಾರ್ಯಕರ್ತರು ಆರೋಪಿಸಿದರು.

ತೈಲ ಬೆಲೆ ಏರಿಕೆಯನ್ನು ಖಂಡಿಸಿ ಸಿಪಿಎಂ ಕಾರ್ಯಕರ್ತರಿಂದ ಧರಣಿ

ನಾಳೆ ಲಾರಿ ಮುಷ್ಕರ
ಡೀಸೆಲ್ ಬೆಲೆಯನ್ನು ಇಳಿಸಬೇಕೆಂದು ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಲಾರಿ ಮುಷ್ಕರ ನಡೆಯುತ್ತದೆ. ನಾಳೆ ಬೆಳಗ್ಗೆಯಿಂದ ಸಂಜೆವರೆಗೂ ಲಾರಿಗಳು ರಸ್ತೆಗಳಿಗೆ ಇಳಿಯುವುದಿಲ್ಲೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ. ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ನಾಳೆ ಒಂದು ದಿನ ಸಾಂಕೇತಿಕ ಮುಷ್ಕರ ನಡೆಯಲಿದೆ. ಬೇಡಿಕೆ ಈಡೇರದೆ ಇದ್ದರೆ ಮಾರ್ಚ್​ 15ರಿಂದ ರಾಜ್ಯಾದ್ಯಂತ ಲಾರಿಗಳ ಓಡಾಟವನ್ನು ಸ್ಥಗಿತಗೊಳಿಸಲಾಗುವುದು ಎಂದು ಷಣ್ಮುಗಪ್ಪ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ

ನಾಳೆ ಕರ್ನಾಟಕದಲ್ಲೂ ರಸ್ತೆಗಿಳಿಯಲ್ಲ ಲಾರಿಗಳು; ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಘೋಷಣೆ

Petrol Diesel Price | ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್​, ಡೀಸೆಲ್ ದರ!