AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸಂಚು: ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣಗೆ ಬಂಧನ ಭೀತಿ

ಗೋಪಾಲಕೃಷ್ಣ ಈವರೆಗೆ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಕುಳ್ಳ ದೇವರಾಜ್ ಮೊಬೈಲ್​ನಲ್ಲಿರುವ ಮಾಹಿತಿಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ

ಶಾಸಕ ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸಂಚು: ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣಗೆ ಬಂಧನ ಭೀತಿ
ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಗೋಪಾಲಕೃಷ್ಣ
TV9 Web
| Edited By: |

Updated on: Dec 02, 2021 | 7:10 PM

Share

ಬೆಂಗಳೂರು: ಯಲಹಂಕ ಶಾಸಕ ಎಸ್​.ಆರ್​.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣಗೆ ಬಂಧನದ ಭೀತಿ ಎದುರಾಗಿದೆ. ವಿಶ್ವನಾಥ್ ಕೊಟ್ಟ ದೂರಿನ ಅನ್ವಯ ದಾಖಲಾಗಿರುವ ಎಫ್​ಐಆರ್​ನಲ್ಲಿ ಮೊದಲ ಆರೋಪಿಯ ಹೆಸರು ಗೋಪಾಲಕೃಷ್ಣ ಎಂದು ಇದೆ. ವಿಚಾರಣೆಗೆ ಗುರುವಾರ (ಡಿ.2) ಹಾಜರಾಗಬೇಕು ಎಂದು ಪೊಲೀಸರು ನೊಟೀಸ್ ಜಾರಿ ಮಾಡಿದ್ದರು. ಆದರೆ ಗೋಪಾಲಕೃಷ್ಣ ಈವರೆಗೆ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಕುಳ್ಳ ದೇವರಾಜ್ ಮೊಬೈಲ್​ನಲ್ಲಿರುವ ಮಾಹಿತಿಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ದೇವರಾಜ್ ಮತ್ತು ಗೋಪಾಲಕೃಷ್ಣ ಅವರ ಕರೆ ವಿವರಗಳನ್ನು (ಕಾಲ್​ ರೆಕಾರ್ಡ್) ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ಕುಳ್ಳ ದೇವರಾಜ್​ ಮೇಲೆ ದಾಖಲಾಗಿರುವ ಹಿಂದಿನ ಪ್ರಕರಣಗಳ ಬಗ್ಗೆಯೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಏನಿದು ಪ್ರಕರಣ? ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್‌ ಹತ್ಯೆಗೆ ಸಂಚು ರೂಪಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜಾನುಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣವನ್ನು ಉನ್ನತ ಮಟ್ಟದಲ್ಲಿ ತನಿಖೆ ಮಾಡಬೇಕು. ಈ ಬೆಳವಣಿಗೆಗಳು ಸರಿಯಾದದ್ದಲ್ಲ ಎಂದು ವಿಶ್ವನಾಥ್ ಹೇಳಿದ್ದರು. ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪಕ್ಕೆ ಸಂಬಂಧಿಸಿ ರಾಜಾನುಕುಂಟೆ ಠಾಣೆಗೆ ಶಾಸಕ ಲಿಖಿತ ದೂರು ನೀಡಿದ್ದಾರೆ. ವಿಡಿಯೋ ಆಧರಿಸಿ ಕೊಲೆಗೆ ಸಂಚು ಎಂದು ದೂರು ನೀಡಲಾಗಿದೆ. ಕೇಸ್ ದಾಖಲಿಸಿ ತನಿಖೆ ನಡೆಸಲಾಗುವುದು. ಪ್ರಕರಣದ ಬಗ್ಗೆ ಕಾನೂನು ಪ್ರಕಾರ ತನಿಖೆ ನಡೆಸುತ್ತೇವೆ ಎಂದು ಟಿವಿ9ಗೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಕೆ.ವಂಶಿಕೃಷ್ಣ ಹೇಳಿಕೆ ನೀಡಿದ್ದಾರೆ.

ಯಲಹಂಕ ಕ್ಷೇತ್ರದ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಪ್ರಬಲ ನಾಯಕರ ಮುಂದೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇನೆ. ಸಜ್ಜನಿಕೆಯಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ಚುನಾವಣೆಗಳಲ್ಲಿ ಸೋಲು-ಗೆಲವು ಸಹಜವಾಗಿ ಇರುತ್ತದೆ. ಕಳೆದ 2 ಬಾರಿ ನನ್ನ ವಿರುದ್ಧ ಗೋಪಾಲಕೃಷ್ಣ ಸ್ಪರ್ಧಿಸಿದ್ದರು. ಅವರು ನನ್ನ ವಿರುದ್ಧ ಸ್ಪರ್ಧಿಸಿ 3ನೇ ಸ್ಥಾನ ಪಡೆದಿದ್ದರು ಎಂದು ಗೋಪಾಲಕೃಷ್ಣ ಬಗ್ಗೆ ಹೇಳಿದ್ದಾರೆ.

ನನಗೆ ಕ್ಷಮಾಪಣ ಪತ್ರ ಬಂದಿತ್ತು. ಹತ್ಯೆಗೆ ಪ್ಲ್ಯಾನ್ ಮಾಡಿದ್ದ ಬಗ್ಗೆ ಸ್ಕೆಚ್ ಹಾಕಿದ್ದರು. ಇದು ತಪ್ಪೆಂದು ತಿಳಿದು ನಾನು ಕ್ಷಮೆಯಾಚಿಸುತ್ತಿದ್ದೇನೆ ಎಂದು ಕುಳ್ಳ ದೇವರಾಜ್ ನನಗೆ ಕ್ಷಮಾಪಣಾ ಪತ್ರ ಬರೆದಿದ್ದರು. ಕೂಡಲೇ ನಾನು ಗೃಹ ಸಚಿವರಿಗೆ ಕರೆ ಮಾಡಿ ಮಾತಾಡಿದ್ದೆ. ರಾಜಾನುಕುಂಟೆ ಪೊಲೀಸ್ ಠಾಣೆಗೂ ದೂರು ನೀಡಿದ್ದೇನೆ. ಸಿಎಂ ಬೊಮ್ಮಾಯಿ ಜೊತೆಯೂ ನಾನು ಮಾತಾಡಿದ್ದೇನೆ. ಸುಪಾರಿ ಕೊಟ್ಟು ಕೊಲೆಗೆ ಯತ್ನಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

15 ದಿನದ ಹಿಂದೆ ಈ ಬಗ್ಗೆ ವಾಸನೆ ಬರುತ್ತಿತ್ತು. ಕುಳ್ಳ ದೇವರಾಜ್-ಗೋಪಾಲಕೃಷ್ಣ ಆಡಿಯೋ ಬಗ್ಗೆ ಹೇಳಿಕೆ, ಇಡೀ ಸಂಭಾಷಣೆ ನನ್ನ ಮೇಲೆ ದ್ವೇಷ ಕಾರುವಂತೆ ಇದೆ. ಆಂಧ್ರದಿಂದ ಸುಪಾರಿ ಕಿಲ್ಲರ್ಸ್‌ ಕರೆಸುವುದಾಗಿ ಚರ್ಚಿಸಿದ್ದಾರೆ. ಕಡಬಗೆರೆ ಶ್ರೀನಿವಾಸ್ ನನ್ನ ಜೊತೆಗೆ ಇದ್ದವರು. ಅವರನ್ನು ಎಪಿಎಂಸಿ ಅಧ್ಯಕ್ಷನಾಗಿ ಮಾಡಿದ್ದು ನಾನೇ. ಕಡಬಗೆರೆ ಶ್ರೀನಿವಾಸ್ ಮೇಲೆ ಶೂಟೌಟ್ ಆಗಿತ್ತು. ನನ್ನ ಏರಿಯಾದಲ್ಲಿ ಶೂಟೌಟ್ ನಡೆದಿತ್ತು. ಈ ಬಗ್ಗೆ ತನಿಖೆ ಮಾಡುವಂತೆ ನಾನು ಕೂಡ ಒತ್ತಾಯಿಸಿದ್ದೆ. ಆದರೆ ಈವರೆಗೆ ಇದರ ಹಿಂದೆ ಯಾರಿದ್ದಾರೆಂದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಶಾಸಕ ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸಂಚು ಆರೋಪ; ಪೊಲೀಸರ ವಿಚಾರಣೆ ಬಳಿಕ ವಿಶ್ವನಾಥ್ ಹೇಳಿದ್ದು ಹೀಗೆ ಇದನ್ನೂ ಓದಿ: ಬಿಜೆಪಿ ಶಾಸಕ ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪ ಪ್ರಕರಣ: ಗೋಪಾಲಕೃಷ್ಣ, ಮತ್ತಿತರರ ವಿರುದ್ಧ ಎಫ್‌ಐಆರ್ ದಾಖಲು

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು