ಕೊಪ್ಪಳದಲ್ಲಿ ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಕಾನ್ಸ್​ಟೇಬಲ್ ಮೇಲೆ ಪುಂಡರಿಂದ ಹಲ್ಲೆ: ರೌಡಿಶೀಟರ್ ಸೇರಿ ಮೂವರು ವಶಕ್ಕೆ

ಗಂಗಾವತಿ ಹೊರವಲಯದಲ್ಲಿ ಪುಂಡರು ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು. ಅದನ್ನು ತಡೆಯಲು ಮುಂದಾದ ಗಂಗಾವತಿ ಗ್ರಾಮಾಂತರ ಠಾಣೆ ಕಾನ್ಸ್​ಟೇಬಲ್ ಬಸವರಾಜುಗೆ ಥಳಿಸಿರುವಂತಹ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ಬಳಿ ನಡೆದಿದೆ. ಸ್ಥಳೀಯರ ಸಹಕಾರದಿಂದ ಪುಂಡರನ್ನು ವಶಕ್ಕೆ ಪಡೆಯಲಾಗಿದೆ.

ಕೊಪ್ಪಳದಲ್ಲಿ ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಕಾನ್ಸ್​ಟೇಬಲ್ ಮೇಲೆ ಪುಂಡರಿಂದ ಹಲ್ಲೆ: ರೌಡಿಶೀಟರ್ ಸೇರಿ ಮೂವರು ವಶಕ್ಕೆ
ಕೊಪ್ಪಳದಲ್ಲಿ ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಕಾನ್ಸ್​ಟೇಬಲ್ ಮೇಲೆ ಪುಂಡರಿಂದ ಹಲ್ಲೆ: ರೌಡಿಶೀಟರ್ ಸೇರಿ ಮೂವರು ವಶಕ್ಕೆ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 09, 2024 | 7:58 PM

ಕೊಪ್ಪಳ, ಅಕ್ಟೋಬರ್​ 09: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಕಾನ್ಸ್​ಟೇಬಲ್ (Constable) ಮೇಲೆ ಪುಂಡರಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸದ್ಯ ಸ್ಥಳೀಯರ ಸಹಕಾರದಿಂದ ಪೊಲೀಸರು ಹಲ್ಲೆ ಮಾಡಿದ ರೌಡಿಶೀಟರ್​ ಅರ್ಬಾಜ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಗಂಗಾವತಿ ಹೊರವಲಯದಲ್ಲಿ ಪುಂಡರು ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು. ಅದನ್ನು ತಡೆಯಲು ಮುಂದಾದ ಗಂಗಾವತಿ ಗ್ರಾಮಾಂತರ ಠಾಣೆ ಕಾನ್ಸ್​ಟೇಬಲ್ ಬಸವರಾಜುಗೆ ಥಳಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಮತ್ತೊಬ್ಬ ಕಾನ್ಸ್​ಟೇಬಲ್ ಮೇಲೂ ಹಲ್ಲೆಗೆ ಪ್ರಯತ್ನ ಮಾಡಲಾಗಿದೆ. ಸದ್ಯ ಕಾನ್ಸ್​ಟೇಬಲ್ ಬಸವರಾಜುವನ್ನು​ ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಬಿಡಿಎಗೆ ನಕಲಿ ದಾಖಲೆ ಸಲ್ಲಿಸಿ 70 ಕೋಟಿ ರೂ ಪರಿಹಾರಕ್ಕೆ ಪ್ಲ್ಯಾನ್: ಐವರು ಆರೋಪಿಗಳ ಬಂಧನ

ವಶಕ್ಕೆ ಪಡೆದವರನ್ನು ಗಂಗಾವತಿ ಗ್ರಾಮೀಣ ಠಾಣೆಗೆ ಪೊಲೀಸರು ಕರೆತಂದಿದ್ದಾರೆ. ರೌಡಿಶೀಟರ್ ಅರ್ಬಾಜ್ ಈ ಹಿಂದೆ ಕೂಡ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ. ಸದ್ಯ ಪೊಲೀಸರ ಮೇಲೆಯೇ ಹಲ್ಲೆ ಯತ್ನಿಸಿದ ಪುಂಡರ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಸಿಮೆಂಟ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಯುವಕನ ಕೈ ಕಟ್: ಆಸ್ಪತ್ರೆಗೆ ದಾಖಲು

ಕೊಡಗು: ಜಿಲ್ಲೆ ಮಡಿಕೇರಿ ನಗರದ ಟಿ.ಜಾನ್​ ಲೇಔಟ್‌ನಲ್ಲಿ ಸಿಮೆಂಟ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಯುವಕನ ಕೈ ಕಟ್ ಆಗಿರುವಂತಹ ಘಟನೆ ನಡೆದಿದೆ. ಮಡಿಕೇರಿಯ ಕನ್ನಂಡ ಬಾಣೆ ನಿವಾಸಿ ಹರೀಶ್ ಕೈ ಕಟ್​ ಆಗಿದೆ.​

ಮನೆ ಕಟ್ಟಲು ಸಿಮೆಂಟ್ ಮಿಕ್ಸಿಂಗ್ ಮಾಡುತ್ತಿದ್ದ ವೇಳೆ ಅಚಾನಕ್​ ಆಗಿ ಮಿಷನ್‌‌ಗೆ ಕೈ ಸಿಲುಕಿಕೊಂಡಿದೆ. ಯುವಕನನ್ನ ರಕ್ಷಿಸಿದ ಮಡಿಕೇರಿ ಅಗ್ನಿಶಾಮಕ ಸಿಬ್ಬಂದಿ ಆಸ್ಪತ್ರೆಗೆ ಸೇರಿಸಿದ್ದಾರೆ.

ಟಿಪ್ಪರ್ ಲಾರಿಗೆ ವಿದ್ಯುತ್​ ತಂತಿ ತಗುಲಿ ಚಾಲಕ ಸ್ಥಳದಲ್ಲೇ ಸಾವು

ಕೋಲಾರ: ಟಿಪ್ಪರ್ ಲಾರಿಗೆ 11 ಕೆವಿ ವಿದ್ಯುತ್​ ತಂತಿ ತಗುಲಿ ಟಿಪ್ಪರ್ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಅತ್ತಹಳ್ಳಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ಲವ್ವಿಡವ್ವಿ ಇಟ್ಟುಕೊಂಡಿದ್ದ ಮಹಿಳೆಯಿಂದಲೇ ಕೊಲೆಯಾದ ಯುವಕ: ಪ್ರಕರಣ ಬೇಧಿಸಿದ್ದೇ ರೋಚಕ

ಶ್ರೀನಿವಾಸಪುರ ತಾಲ್ಲೂಕು ಯಗವಪಾಪಶೆಟ್ಟಿಹಳ್ಳಿ ಗ್ರಾಮದ ಶಿವಣ್ಣ (36) ಮೃತ ಚಾಲಕ. ಅತ್ತಹಳ್ಳಿ ಗ್ರಾಮದಲ್ಲಿ ಟಿಪ್ಪರ್​ನಲ್ಲಿದ್ದ ಜೆಲ್ಲಿಕಲ್ಲು ಸುರಿಯುವ ವೇಳೆ ಘಟನೆ ಸಂಭವಿಸಿದೆ. 11 ಕೆವಿ ವಿದ್ಯುತ್ ತಗುಲಿದ ಪರಿಣಾಮ ಲಾರಿಯ ಟಯರ್​ಗಳು ಬರ್ಸ್ಟ್​ ಆಗಿದೆ. ನಂಗಲಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್