AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತ ವ್ಯಕ್ತಿಗೆ ಹಂಚಿಕೆಯಾಗಿದ್ದ ಸೈಟ್​​ನಲ್ಲಿ​ ಮನೆ ನಿರ್ಮಾಣ: ಸಿಎಂ ವಿರುದ್ಧ ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ‌

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಮೂಡ ಆರೋಪದ ಬಳಿಕ‌ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಮತ್ತೊಂದು ಗಂಭೀರ ಆರೋಪ‌ ಮಾಡಿದ್ದಾರೆ. ಡಿಸಿಎಂ ಆಗಿದ್ದಾಗ ಸಿದ್ದರಾಮಯ್ಯನವರು ಒಂದು ಮನೆ ಕಟ್ಟಿದ್ದರು. ಯಾರ ಜಾಗದಲ್ಲಿ ನೀವು ಮನೆ ಕಟ್ಟಿದ್ದೀರಾ, ಆ ದಾಖಲೆ ಬೇಕಾ ಎಂದು ಪ್ರಶ್ನಿಸಿದ್ದಾರೆ.

ದಲಿತ ವ್ಯಕ್ತಿಗೆ ಹಂಚಿಕೆಯಾಗಿದ್ದ ಸೈಟ್​​ನಲ್ಲಿ​ ಮನೆ ನಿರ್ಮಾಣ: ಸಿಎಂ ವಿರುದ್ಧ ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ‌
ದಲಿತ ವ್ಯಕ್ತಿಗೆ ಹಂಚಿಕೆಯಾಗಿದ್ದ ಸೈಟ್​​ನಲ್ಲಿ​ ಮನೆ ನಿರ್ಮಾಣ: ಸಿಎಂ ವಿರುದ್ಧ ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ‌
Sunil MH
| Edited By: |

Updated on:Sep 14, 2024 | 3:41 PM

Share

ಬೆಂಗಳೂರು, ಸೆಪ್ಟೆಂಬರ್​​ 14: ನಾನು ತಪ್ಪು ಮಾಡಿಲ್ಲ, ಮುಂದೆಯೂ ಮಾಡಲ್ಲ, ನನಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಮುಡಾ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ನಿನ್ನೆ ರಾಮನಗರದಲ್ಲಿ ಆಡಿರುವ ಮಾತು. ಪ್ರಕರಣದ ವಿಚಾರಣೆ ಮುಗಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಈ ಮಧ್ಯೆ ಮೂಡ ಆರೋಪದ ಬಳಿಕ‌ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸಿಎಂ ಆಗಿದ್ದಾಗ ಸಿದ್ದರಾಮಯ್ಯನವರು ಒಂದು ಮನೆ ಕಟ್ಟಿದ್ದರು. ಯಾರ ಜಾಗದಲ್ಲಿ ನೀವು ಮನೆ ಕಟ್ಟಿದ್ದೀರಾ, ಆ ದಾಖಲೆ ಬೇಕಾ? ದಲಿತ ಸಿಎ ಸೈಟ್​ನಲ್ಲಿ ಅಕ್ರಮವಾಗಿ ಮನೆ ಕಟ್ಟಿದವರು ಯಾರು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ಹೊಸ ಅಸ್ತ್ರ ಪ್ರಯೋಗಿಸಲು ಮುಂದಾದ ಬಿಜೆಪಿ, ಕೋರ್ಟ್​ನಲ್ಲಿ ದಾವೆ

15 ಸೈಟ್ ತಗೊಂಡಿರುವುದಲ್ಲದೇ, ಇಂತದೇ ಹಗರಣದ ಸರಣಿಯೇ ಇದೆ‌ ಮೈಸೂರಿನಲ್ಲಿ. ವಿಕಲಚೇತನ ದಲಿತ ವ್ಯಕ್ತಿ 24 ಸಾವಿರ ರೂ. ನೀಡಿ ಸೈಟ್​ ಪಡೆಯುತ್ತಾರೆ. ಸಾಕಮ್ಮ ಎಂಬುವರ ಹೆಸರಿನಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿ 10 ಸಾವಿರ ರೂ. ಸ್ಕೈಯರ್ ಫೀಟ್ ಜಾಗ ಅಕ್ರಮವಾಗಿ ಪಡೆಯುತ್ತಾರೆ. ಆಮೇಲೆ ಸೈಟ್ ತಗೊಂಡವನು ಯಾರೋ ಮನೆ ಕಟ್ಟಿದ್ದಾರೆಂದು ನೋಡುವುದಕ್ಕೆ ಬರ್ತಾರೆ. ಈ ಬಗ್ಗೆ ನನ್ನ ಬಳಿ ಈಗಲೂ ದಾಖಲೆ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನನ್ನದು ತೆರದ ಪುಸ್ತಕ ಅಂತಾ ಸಿದ್ದರಾಮಯ್ಯ ಯಾವಾಗಲೂ ಹೇಳುತ್ತಾರೆ. ಅದನ್ನ ತೆಗೆಯಿರಿ ಯಾರಿಗೆ ನೀವು ಸೇಲ್ ಮಾಡಿದ್ದೀರಿ? ಇನ್ನೂ ಯಾರ ಕೈಯಲ್ಲಿದೆ ಸೈಟ್, ಹೆಸರಿಗೆ ಮಾರಾಟ ತೋರಿಸಿಕೊಂಡಿದ್ದಾರೆ. ಅದನ್ನು ತೆಗೆದರೆ ಮತ್ತೊಂದು ರಾಮಾಯಣ ಶುರುವಾಗುತ್ತೆ ಎಂದು ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಹಾಲಿನ ದರ ಏರಿಕೆ ಬಗ್ಗೆ ಕಿಡಿ

ಹಾಲಿನ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ವಿಚಾರವಾಗಿ ಮಾತನಾಡಿದ್ದು, ಯಾರ ಬಳಿಯೋ ಕಿತ್ತುಕೊಂಡು ಯಾರಿಗೊ ದಾನ ಮಾಡಿದ ರೀತಿ ಇದೆ. ಗ್ರಾಹಕರ ಮೇಲೆ ಹೊರೆಹಾಕಿ ರೈತರಿಗೆ ಪ್ರೋತ್ಸಾಹಧನ ಕೊಡುತ್ತೇವೆ ಅಂತಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಘಟನೆ, 10 ನಿಮಿಷದಲ್ಲಿ ಕಲ್ಲು, ಪೆಟ್ರೋಲ್ ಬಾಂಬ್ ಎಲ್ಲಿಂದ ಬಂದವು; ಕುಮಾರಸ್ವಾಮಿ ಪ್ರಶ್ನೆ

ಹಾಲು ಉತ್ಪಾದಕರ ಸಂಘದ ಜಿಲ್ಲೆಗಳಲ್ಲಿ ಒಂದುವರೆ ಎರಡು ರೂಪಾಯಿ ಯಾಕೆ ಕಡಿಮೆ ಮಾಡಿದ್ದಿರಾ. ಎಲ್ಲೆಲ್ಲಿ ಕಡಿಮೆ ಮಾಡಿದ್ದಿರಲ್ಲಾ ಅಲ್ಲಿ ಬೆಲೆ ಏರಿಕೆ ಮಾಡಿದ್ದಿರಲ್ಲಾ. ಆ ದುಡ್ಡನ್ನ ರೈತರಿಗೆ ಕೊಡುತ್ತೇವೆ ಅಂತ ಹೇಳ್ತಿದ್ದಿರಲ್ಲಾ ಹಾಗಾದ್ರೆ ಯಾವ ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಹಾಲಿನ ಪ್ರೊತ್ಸಾಹ ದರ ಕಡಿಮೆ ಮಾಡಿದ್ದಿರಾ. ದಾಖಲೆ‌ ಇಲ್ವಾ, ಪಟ್ಟಿ ಇಲ್ವಾ. ರೈತರಿಗೆ ಕೊಡುತ್ತೇವೆ ಅಂತ ಸುಳ್ಳು ಹೇಳಿ, ಒಂದು ಕಡೆ ರೈತರಿಗೂ ಇಲ್ಲಾ ಗ್ರಾಹಕರಿಗೂ ಇಲ್ಲಾ. ದುಡ್ಡು ಮಾತ್ರ ಸರ್ಕಾರ ವಸೂಲಿ ಮಾಡುತ್ತಿದೆ. ಇದು ನಿಮ್ಮ ಹವ್ಯಾಸ ಎಂದು ವಾಗ್ದಾಳಿ ಮಾಡಿದ್ದಾರೆ.

ನಾನು ಕೇಂದ್ರ ಸಚಿವನಾಗಿದ್ದಕ್ಕೆ ಇವರಿಗೆ ಸಹಿಸಿಕೊಳ್ಳಲು ಆಗ್ತಿಲ್ಲ

ನಾನು ಕೇಂದ್ರ ಸಚಿವನಾಗಿದ್ದಕ್ಕೆ ಇವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ನಾನು ರಾಜ್ಯಕ್ಕೆ ಬಂದ್ರೆ ಇವರು ಸಹಿಸಲ್ಲ, ಇದು ನನ್ನ ಪರಿಸ್ಥಿತಿ. ನನ್ನ ಮುಖ ನೋಡಿದಾಗಲೆಲ್ಲ ಮುಗಿದೆ ಹೋದ ಅಂತಿದ್ದರು. ಆದರೆ ನಾನು ಕೇಂದ್ರ ಮಂತ್ರಿ ಆಗಿದ್ದಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ನೋವಿಗೆ ಎಲ್ಲಿ ಔಷಧಿ ಕೊಡಲಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:07 pm, Sat, 14 September 24

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ