ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ದಾಟಲು ಕಾಲು ಸೇತುವೆಗಳ ನಿರ್ಮಾಣ: ಸತೀಶ್ ಜಾರಕಿಹೊಳಿ

ಕರ್ನಾಟಕ ಸರ್ಕಾರವು ಮುಂದಿನ ತಿಂಗಳುಗಳಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ 24 ಕಾಲು ಸೇತುವೆಗಳ ನಿರ್ಮಾಣ ಮಾಡಲು ಯೋಜಿಸುತ್ತಿದೆ. ಬೆಂಗಳೂರು ನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಇವುಗಳನ್ನು ನಿರ್ಮಿಸಲಾಗುವುದು ಎಂದು ಬೆಳಗಾವಿ ಅಧಿವೇಶನದಲ್ಲಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ದಾಟಲು ಕಾಲು ಸೇತುವೆಗಳ ನಿರ್ಮಾಣ: ಸತೀಶ್ ಜಾರಕಿಹೊಳಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ದಾಟಲು ಕಾಲು ಸೇತುವೆಗಳ ನಿರ್ಮಾಣಕ್ಕೆ ಮುಂದಾದ ರಾಜ್ಯ ಸರ್ಕಾರ
Follow us
TV9 Web
| Updated By: Rakesh Nayak Manchi

Updated on: Dec 10, 2023 | 4:34 PM

ಬೆಂಗಳೂರು, ಡಿ.10: ಕರ್ನಾಟಕ ಸರ್ಕಾರವು ಮುಂದಿನ ತಿಂಗಳಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru-Mysuru Expressway) 24 ಕಾಲು ಸೇತುವೆಗಳನ್ನು ನಿರ್ಮಿಸಲು ಯೋಜಿಸುತ್ತಿದೆ ಎಂದು ವರದಿಯಾಗಿದೆ. ಹೆದ್ದಾರಿ ದಾಟಲು ಆಗುತ್ತಿರುವ ಸಮಸ್ಯೆಗಳ ಬಗ್ಗೆ ಎಕ್ಸ್‌ಪ್ರೆಸ್‌ವೇ ಸುತ್ತಮುತ್ತಲಿನ ಗ್ರಾಮಸ್ಥರಿಂದ ದೂರುಗಳು ಬಂದಿರುವ ಹಿನ್ನೆಲೆ ಕಾಲು ಸೇತುವೆಗಳ ನಿರ್ಮಾಣ ಯೋಜನೆಯನ್ನು ಪ್ರಸ್ತಾಪಿಸಲು ಸರ್ಕಾರ ಈಗಾಗಲೇ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನು (NHAI) ಕೇಳಿದೆ.

ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಎಕ್ಸ್‌ಪ್ರೆಸ್‌ವೇಗೆ ಅಡ್ಡಲಾಗಿ ಒಟ್ಟು 24 ಕಾಲು ಸೇತುವೆಗಳು ಬರಲಿವೆ. ಇವುಗಳು ಗ್ರಾಮಸ್ಥರಿಗೆ ಎಕ್ಸ್‌ಪ್ರೆಸ್‌ವೇ ದಾಟಲು ಸಹಾಯ ಮಾಡಲಿವೆ. ಬೆಂಗಳೂರು ನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಇವುಗಳನ್ನು ನಿರ್ಮಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಯಡವಟ್ಟು, ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್ ರಸ್ತೆಗಳಲ್ಲಿನ ಅಪಘಾತಗಳು ಹೆಚ್ಚಳ

ಈ ಹಿಂದೆ ಹೆದ್ದಾರಿಯ ಎರಡೂ ಬದಿಯಲ್ಲಿ ನಿರ್ಮಿಸಿರುವ ಕಂಬಗಳ ಮೇಲಿನ ಬ್ರೇಸಿಂಗ್‌ಗಳನ್ನು ಕಳ್ಳತನ ಮಾಡಲಾಗುತ್ತಿದೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದರು. ಅಲ್ಲದೆ, ಪ್ರಕರಣಗಳ ಬಗ್ಗೆ ದೂರು ನೀಡಲು ನನಗೆ ದುಃಖವಾಗಿದೆ. ಇವೆಲ್ಲವನ್ನೂ ನಿಮ್ಮ ಸ್ವಂತ ಹಣದಿಂದ ಸ್ಥಾಪಿಸಲಾಗಿದ್ದು, ಅವುಗಳನ್ನು ನಿಮ್ಮ ಹಣದಿಂದಲೇ ಮರು-ಸ್ಥಾಪಿಸಲಾಗುವುದು. ದಯವಿಟ್ಟು ಅಂತಹ ಯಾವುದೇ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಡಿ ಎಂದು ಮನವಿ ಮಾಡಿದ್ದರು.

ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ 119 ಕಿಮೀ ಎಕ್ಸ್‌ಪ್ರೆಸ್‌ವೇಯನ್ನು 8,408 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಈ ಯೋಜನೆಯು 11 ಮೇಲ್ಸೇತುವೆಗಳು, 64 ಅಂಡರ್‌ಪಾಸ್‌ಗಳು, ಐದು ಬೈಪಾಸ್‌ಗಳು, 42 ಸಣ್ಣ ಸೇತುವೆಗಳನ್ನು ಒಳಗೊಂಡಿದೆ. ಎಕ್ಸ್‌ಪ್ರೆಸ್‌ವೇ ಆರು ಲೇನ್‌ಗಳನ್ನು ಹೊಂದಿದ್ದು, ಎರಡೂ ಬದಿಗಳಲ್ಲಿ ಹೆಚ್ಚುವರಿ ದ್ವಿಪಥದ ಸೇವಾ ರಸ್ತೆಗಳನ್ನು ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ