ಭರದಿಂದ ಸಾಗಿದ ತುಂಗಭದ್ರಾ ಡ್ಯಾಂ ಗೇಟ್​ ನಿರ್ಮಾಣದ ಕಾರ್ಯ: ಗೇಟಿನ ಅಗಲ-ಉದ್ದ ಎಷ್ಟು? ಇಲ್ಲಿದೆ ವಿವರ

ತುಂಗಭದ್ರಾ ಜಲಾಶಯದ ಗೇಟ್​ ಕೊಚ್ಚಿ ಹೋಗಿ ಕೊಪ್ಪಳ ಜಿಲ್ಲೆಯಲ್ಲಿ ನದಿಪಾತ್ರದ ಜನರಲ್ಲಿ ಕ್ಷಣ ಕ್ಷಣಕ್ಕೂ ಆತಂಕ ಶುರುವಾಗಿದೆ. ಯಾಕಂದ್ರೆ, ತುಂಗಭದ್ರ ನದಿ ಪಾತ್ರದ ಗ್ರಾಮಗಳು ಮುಳುಗೋ ಭೀತಿ ಸೃಷ್ಟಿಯಾಗಿದ್ದು, ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಇದರ ಮಧ್ಯೆ ಇದೀಗ ಸರ್ಕಾರ ಹೊಸ ಗೇಟ್​ ನಿರ್ಮಾಣಕ್ಕೆ ಮುಂದಾಗಿದೆ. ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಹೊಸ ಗೇಟ್ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.

ಭರದಿಂದ ಸಾಗಿದ ತುಂಗಭದ್ರಾ ಡ್ಯಾಂ ಗೇಟ್​ ನಿರ್ಮಾಣದ ಕಾರ್ಯ: ಗೇಟಿನ ಅಗಲ-ಉದ್ದ ಎಷ್ಟು? ಇಲ್ಲಿದೆ ವಿವರ
ಭರದಿಂದ ಸಾಗಿದ ತುಂಗಭದ್ರಾ ಡ್ಯಾಂ ಗೇಟ್​ ನಿರ್ಮಾಣದ ಕಾರ್ಯ, ಗೇಟಿನ ಅಗಲ-ಉದ್ದ ಎಷ್ಟು? ಇಲ್ಲಿದೆ ವಿವರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 12, 2024 | 3:06 PM

ವಿಜಯನಗರ, ಆಗಸ್ಟ್​​ 12: ತುಂಗಭದ್ರಾ ಜಲಾಶಯದ (Tungabhadra Dam) ಕ್ರಸ್ಟ್ ಗೇಟ್​ ಕೊಚ್ಚಿಹೋಗಿದ್ದರಿಂದಾಗಿ ಅಪಾರ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ. ಹೀಗಾಗಿ, ಕಂಪ್ಲಿ ಸೇತುವೆ ಸೇರಿ ಹಲವು ಸೇತುವೆಗಳು ಮುಳುಗಡೆ ಆಗುವ ಆತಂಕ ಎದುರಾಗಿದೆ. ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಯ ಜನರಿಗೆ ಸಂಕಷ್ಟ ಶುರುವಾಗಿದೆ. ಇ ಮಧ್ಯೆ ಹೊಸ ಕ್ರಸ್ಟ್ ಗೇಟ್ (new Gate) ನಿರ್ಮಾಣಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಜಿಲ್ಲೆಯ ಹೊಸಪೇಟೆಯಲ್ಲಿ ಹೊಸ ಗೇಟ್ ಸಿದ್ಧಗೊಳ್ಳುತ್ತಿದೆ. ಆದಷ್ಟು ಬೇಗನೆ ಜಲಾಶಯಕ್ಕೆ ಗೇಟ್ ಅಳವಡಿಸಲು ಸರ್ಕಾರ ಪ್ರಯತ್ನಿಸುತ್ತಿದೆ.

ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಹೊಸ ಗೇಟ್ ನಿರ್ಮಾಣ

ಜಿಲ್ಲೆಯ ಹೊಸಪೇಟೆಯ ಇಂಡಸ್ಟ್ರಿಯಲ್ ಏರಿಯಾದ ನಾರಾಯಣ ಇಂಜಿನಿಯರಿಂಗ್ ವರ್ಕ್ಸ್​​ನಲ್ಲಿ ಗೇಟ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ಕೊಪ್ಪಳ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಗೇಟ್ ತಯಾರಾಗುತ್ತಿದ್ದು, 10ಕ್ಕೂ ಹೆಚ್ಚು ತಾಂತ್ರಿಕ ಸಿಬ್ಬಂದಿಯಿಂದ ಮೂರ್ನಾಲ್ಕು ದಿನಗಳಲ್ಲಿ ಹೊಸ ಗೇಟ್‌ಗಳ ನಿರ್ಮಾಣಕ್ಕೆ ಸಿದ್ಧತೆ ಮಾಡಲಾಗುತ್ತಿದೆ. 19. 230 ಮೀಟರ್ ಉದ್ದ, 1.250 ಮೀಟರ್ ಅಗಲ ಮತ್ತು ದಪ್ಪ ಗಾತ್ರದ ಕಬ್ಬಿಣದ ಗೇಟ್ ನಿರ್ಮಾಣವಾಗಿದ್ದು, 10 ದಿನದೊಳಗೆ ಗೇಟ್ ಕುರಿಸಲು ಪ್ಲ್ಯಾನ್​ ಮಾಡಲಾಗುತ್ತಿದೆ.

ಇದನ್ನೂ ಓದಿ: ತುಂಗಭದ್ರಾ ಜಲಾಶಯ ಖಾಲಿಯಾದ್ರೆ ನಾಲ್ಕು ಜಿಲ್ಲೆ ಜನರಿಗೆ ಸಂಕಷ್ಟ, ಆಂಧ್ರಕ್ಕೂ ಇದೇ ಪಾಲು

ತುಂಗಭದ್ರಾ ಜಲಾಶಯ ಬಳಿ ಸಚಿವ‌ ಶಿವರಾಜ ತಂಗಡಗಿ ಪ್ರತಿಕ್ರಿಯಿಸಿದ್ದು, ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯ ಕೇಂದ್ರದ ಅಧೀನದಲ್ಲಿ ಬೋರ್ಡ್ ಕಂಟ್ರೋಲ್ ಇರೋದು. ಎರಡು ರೀತಿಯಲ್ಲಿ ‌ದುರಸ್ತಿ ಕಾರ್ಯದ ಬಗ್ಗೆ ಚಿಂತನೆ ನಡೆಸಿದ್ದೇವೆ. ಒಂದು ಡ್ಯಾಂ ನೀರನ್ನು ಖಾಲಿ ಮಾಡಿ ಹೊಸ ಗೇಟ್ ಅಳವಡಿಸೋದು, ಇನ್ನೊಂದು ನೀರಿನಲ್ಲೇ ಹೊಸ ಗೇಟ್ ಅಳವಡಿಸುವುದಕ್ಕೆ ಚಿಂತನೆ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ: ತುಂಗಭದ್ರಾ ಡ್ಯಾಂನಲ್ಲಿ 50 ಟಿಎಂಸಿ ನೀರು ಉಳಿಸಿಕೊಳ್ಳಲು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸೂಚನೆ

ನೀರು ಇರುವಾಗಲೇ ದುರಸ್ತಿಗಾಗಿ ಗೇಟ್ ಕೂಡ ರೆಡಿಯಾಗುತ್ತಿದೆ. ಹೊಸಪೇಟೆಯಲ್ಲಿ ಗೇಟ್ ರೆಡಿ ಮಾಡುವ ಕೆಲಸ ಆಗ್ತಿದೆ. ಅನೇಕ ತಜ್ಞರು ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಕೂಡ ಪ್ರತಿನಿತ್ಯ ಮೂರು ಸಲ ಮಾಹಿತಿ ಪಡೆಯುತ್ತಿದ್ದಾರೆ. ಇನ್ನು ಬಿಜೆಪಿ ನಾಯಕರು ಡ್ಯಾಂಗೆ ಭೇಟಿ ನೀಡಿ ಸಲಹೆ ನೀಡಲಿ. ಬಿಜೆಪಿ ನಾಯಕರ ಸಲಹೆಯನ್ನೂ ಸಹ ಸ್ವೀಕಾರ ಮಾಡುತ್ತೇವೆ. ಆದರೆ ಡ್ಯಾಂಗೆ ಬಂದು ರಾಜಕೀಯ ಮಾಡಬಾರದು. ಅವರು ರಾಜಕೀಯ ಮಾತನಾಡಿದ್ರೆ ನಾವು ಮಾತನಾಡುತ್ತೇವೆ. ಡ್ಯಾಂ ದುರಸ್ತಿ ಸೇರಿದಂತೆ ಎಲ್ಲಾ ಕೆಲಸ ಅವರೇ ಮಾಡಬೇಕು. ನಾವು ಪ್ರತಿವರ್ಷ ಬೋರ್ಡ್​​ನವರು ಕೇಳಿದಷ್ಟು ಹಣ ಕೊಡುತ್ತೇವೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ