AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 31ರವರೆಗೂ ಹಿಂದಿನ ಮಾರ್ಗಸೂಚಿ ಮುಂದುವರಿಸಿ: ರಾಜ್ಯಗಳಿಗೆ ಕೇಂದ್ರದ ಪತ್ರ

ಬ್ರಿಟನ್ ರೂಪಾಂತರ ಕೊರೊನಾ ಭೀತಿ ಇದೆ. ಹೀಗಾಗಿ ಆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ. ಈ ಬಗ್ಗೆ ಕೇಂದ್ರ ನೀಡಿರುವ ಸೂಚನೆಯನ್ನು ಕಟ್ಟು ನಿಟ್ಟಾಗಿ ಪಾಲಿಸಿ. ಹೊಸ ವರ್ಷಾಚರಣೆ ವೇಳೆ‌ ಗುಂಪುಗೂಡದಂತೆ ನೋಡಿಕೊಳ್ಳಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಜನವರಿ 31ರವರೆಗೂ ಹಿಂದಿನ ಮಾರ್ಗಸೂಚಿ ಮುಂದುವರಿಸಿ: ರಾಜ್ಯಗಳಿಗೆ ಕೇಂದ್ರದ ಪತ್ರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 28, 2020 | 9:38 PM

Share

ಬೆಂಗಳೂರು: ಕೊರೊನಾ ನಿಯಂತ್ರಣ ವಿಚಾರದಲ್ಲಿ ಜನವರಿ 31ರವರೆಗೂ ಈ ಹಿಂದೆ ಕೇಂದ್ರ ಸರ್ಕಾರ ಪ್ರಕಟಿಸಿದ್ದ ಮಾರ್ಗಸೂಚಿಯನ್ನೇ ಮುಂದುವರಿಸಲು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಇಲಾಖೆ ಪತ್ರ ಬರೆದಿದೆ.

ಬ್ರಿಟನ್​ನಲ್ಲಿ ರೂಪಾಂತರಗೊಂಡಿರುವ ಕೊರೊನಾ ವೈರಾಣು ಹರಡುವ ಭೀತಿ ಇದೆ. ಹೀಗಾಗಿ ಆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ. ಈ ಬಗ್ಗೆ ಕೇಂದ್ರ ನೀಡಿರುವ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ. ಹೊಸ ವರ್ಷಾಚರಣೆ ವೇಳೆ‌ ಗುಂಪುಗೂಡದಂತೆ ನೋಡಿಕೊಳ್ಳಿ. ಈ ವೇಳೆ ಹೆಚ್ಚಿನ ಮುನ್ನೆಚ್ಚರಿಕೆ ಅಗತ್ಯವಿದೆ ಎಂದು ಕೇಂದ್ರ ಗೃಹ ಇಲಾಖೆ ಪತ್ರದಲ್ಲಿ ತಿಳಿಸಿದೆ.

ಚಳಿಗಾಲದಲ್ಲಿ ಕೊರೊನಾ ಸೋಂಕು ಹೆಚ್ಚು ಹರಡಲಿದೆ. ಈ ಬಗ್ಗೆ ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರ, ಕೊರೊನಾ ಹೆಚ್ಚು ಹರಡಲು ಚಳಿಗಾಲ ಕಾರಣವಾಗಬಹುದು. ಸುಪ್ರೀಂಕೋರ್ಟ್ ನಿರ್ದೇಶನದಂತೆ ದೈಹಿಕ ಅಂತರಕ್ಕೆ ಒತ್ತು ನೀಡಿ. ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ವಿಧಿಸಬಹುದು. ಇದು ಆಯಾ ರಾಜ್ಯಗಳಿಗೆ ಬಿಟ್ಟಿದ್ದು ಎಂದಿರುವ ಗೃಹ ಇಲಾಖೆ, ಅಗತ್ಯ ಸೇವೆ, ಅಂತಾರಾಜ್ಯ ಸಂಚಾರಕ್ಕೆ ಅಡೆತಡೆ ಇರಬಾರದು ಎಂದು ಸೂಚಿಸಿದೆ.

ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಒಂದಷ್ಟು ಮಾರ್ಗಗಗಳನ್ನು ಸೂಚಿಸಿತ್ತು. ಇದರಡಿಯಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಚಿತ್ರ ಮಂದಿರಗಳಲ್ಲಿ ಶೇ.50 ಆಸನಗಳಿಗೆ ಮಾತ್ರ ವ್ಯವಸ್ಥೆ ಮಾಡುವುದು ಸೇರಿ ಹಲವು ಸೂಚನೆಗಳನ್ನು ಇದು ಒಳಗೊಂಡಿದೆ.

ಕೊರೊನಾ ರೂಪಾಂತರ: ಬ್ರಿಟನ್​ನಿಂದ ಆಗಮಿಸುವವರ ತಪಾಸಣೆಗಾಗಿ ಕೇಂದ್ರದಿಂದ ನಿಯಮಾವಳಿ ಬಿಡುಗಡೆ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು