AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸವಾರರೇ ಎಚ್ಚರ ಎಚ್ಚರ: ಶಿರಾಡಿಘಾಟ್​ನಲ್ಲಿ ಮತ್ತೆ ಭೂಕುಸಿತದ ಭೀತಿ

ಹಾಸನ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಮುಂದುವರೆದಿದೆ. ಸುರಿಯುತ್ತಿರುವ ಜೋರು ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗುತ್ತಿವೆ. ಪದೇ ಪದೇ ಗುಡ್ಡ ಕುಸಿತದಿಂದ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿಗುತ್ತಿದೆ. ಇದೀಗ ಮಳೆಯಿಂದಾಗಿ ಮತ್ತೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತದ ಭೀತಿ ಎದುರಾಗಿದೆ.

ವಾಹನ ಸವಾರರೇ ಎಚ್ಚರ ಎಚ್ಚರ: ಶಿರಾಡಿಘಾಟ್​ನಲ್ಲಿ ಮತ್ತೆ ಭೂಕುಸಿತದ ಭೀತಿ
ವಾಹನ ಸವಾರರೇ ಎಚ್ಚರ ಎಚ್ಚರ ಶಿರಾಡಿಘಾಟ್​ನಲ್ಲಿ ಮತ್ತೆ ಭೂಕುಸಿತದ ಭೀತಿ
ಮಂಜುನಾಥ ಕೆಬಿ
| Edited By: |

Updated on:Aug 30, 2024 | 4:20 PM

Share

ಹಾಸನ, ಆಗಸ್ಟ್​​ 30: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 4 ದಿನಗಳಿಂದ ಧಾರಾಕಾರ ಮಳೆ ಮುಂದುವರೆದಿದೆ. ಹೀಗಾಗಿ ನಿರಂತರ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ (Shiradi Ghat) ರಸ್ತೆಯಲ್ಲಿ ಮತ್ತೆ ಭೂಕುಸಿತ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಮಣ್ಣು ಕುಸಿಯುತ್ತಿರುವ ಕಡೆ ಸೂಚನಾ ಫಲಕ ಅಳವಡಿಸುವ ಮೂಲಕ ತಾಲೂಕು ಆಡಳಿತ, ಹೆದ್ದಾರಿ ಪ್ರಾಧಿಕಾರದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಭೂಕುಸಿತ ಭೀತಿ ಹಿನ್ನಲೆ ಪ್ರತಿನಿತ್ಯ ಆತಂಕದಲ್ಲೇ ವಾಹನ ಸವಾರರು ಸಂಚಾರ ಮಾಡುವಂತಾಗಿದೆ. ಜುಲೈ ತಿಂಗಳಲ್ಲಿ ಧಾರಾಕಾರ ಮಳೆಯಿಂದ ದೊಡ್ಡತಪ್ಲು ಬಳಿ ಗುಡ್ಡ ಕುಸಿದು ರಸ್ತೆ ಸಂಚಾರ ಬಂದ್ ಆಗಿತ್ತು. ಈಗ ಮತ್ತೆ ಮಳೆಯಾಗುತ್ತಿರುವುದರಿಂದ ಭೂಕುಸಿತದ ಭೀತಿ ಎದುರಾಗಿದೆ.

ಇದನ್ನೂ ಓದಿ: ಸಕಲೇಶಪುರ ಬಳಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತ

ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಜೋರು ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗುತ್ತಿವೆ. ಪದೇ ಪದೆ ಗುಡ್ಡ ಕುಸಿತದಿಂದ ರಸ್ತೆ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಬೆಂಗಳೂರು ಹಾಗೂ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರೈಲ್ವೆ ಮಾರ್ಗದಲ್ಲಿ ಮಾತ್ರ ಪದೇ ಪದೆ ಗುಡ್ಡ ಕುಸಿತವಾಗುತ್ತಿರುವುದರಿಂದ ರೈಲು ಸಂಚಾರಕ್ಕೆ ತಡೆಯಾಗುತ್ತಿದೆ.

ಆಗಸ್ಟ್ 10ರಂದು ಸಕಲೇಶಪುರ ತಾಲ್ಲೂಕಿನ ಬಾಳ್ಳೂಪೇಟೆ ಸಮೀಪದ ದೊಡ್ಡನಾಗರಬಳಿ ಗುಡ್ಡ ಕುಸಿದು ನಾಲ್ಕು ದಿನ ರೈಲು ಸಂಚಾರಕ್ಕೆ ತಡೆಯಾಗಿತ್ತು. ಹಳಿ ಮೇಲೆ ಬಿದ್ದಿದ್ದ ಭಾರಿ ಪ್ರಮಾಣದ ಮಣ್ಣು ಹಾಗೂ ದೊಡ್ಡ ದೊಡ್ಡ ಬಂಡೆಕಲ್ಲುಗಳನ್ನ ತೆರವು ಮಾಡಿ ಬಳಿಕ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿತ್ತು.

ಆದರೆ ಅದೇ ದಿನದಂದು ಮಧ್ಯಾಹ್ನದ ವೇಳೆಗೆ ಮತ್ತೆ ಅದೇ ಸ್ಥಳದಲ್ಲಿ ಹಳಿ ಮೇಲೆ ಮಣ್ಣು ಕುಸಿದು ಮತ್ತೆ ರೈಲು ಸಂಚಾರಕ್ಕೆ ತಡೆಯಾಗಿತ್ತು. ಬೆಂಗಳೂರಿನಿಂದ ಮಂಗಳೂರಿಗೆ ಸಾವಿರಾರು ಜನರನ್ನು ಹೊತ್ತ ಬೆಂಗಳೂರು ಕಾರವಾರ ಎಕ್ಸಪ್ರೆಸ್ ಸಕಲೇಶಫುರ ತಾಲ್ಲೂಕಿನ ಬಾಳ್ಳುಪೇಟೆ ಸಮೀಪವೇ ಸಿಲುಕಿ ಪ್ರಯಾಣಿಕರು ಪರದಾಡಿದ್ದರು.

ಇದನ್ನೂ ಓದಿ: ಸಕಲೇಶಪುರ ಭೂಕುಸಿತ: ಬೆಂಗಳೂರು-ಮಂಗಳೂರು, ಮುರುಡೇಶ್ವರ ರೈಲು ಸಂಚಾರ ಮತ್ತೆ ಸ್ಥಗಿತ

ಏಕಾಏಕಿ ಮಣ್ಣು ಕುಸಿದ ಮಾಹಿತಿ ತಿಳಿದು ಮಂಗಳೂರಿನತ್ತ ಹೊರಟಿದ್ದ ರೈಲನ್ನ ಬಾಳ್ಳುಪೇಟೆ ಸಮೀಪವೇ ನಿಲ್ಲಿಸಲಾಗುತ್ತು. ಆದರೆ ಮಧ್ಯಾಹ್ನದ ಸಮಯವಾದ್ದರಿಂದ ಅಲ್ಲಿ ಊಟ, ಕುಡಿಯುವ ನೀರು ಸಿಗದೆ ಪ್ರಯಾಣಿಕರು ಪರದಾಡಿದ್ದರು. ಬಾಳ್ಳುಪೇಟೆಯಲ್ಲಿ ರೈಲು ನಿಲ್ದಾಣ ಮಾಡಲಾಗಿತ್ತು. ಆದರೆ ಇಲ್ಲಿಗೆ ಬರಲು ರಸ್ತೆಯನ್ನೇ ಸಮರ್ಪಕವಾಗಿ ಮಾಡಿಲ್ಲ ಹಾಗಾಗಿ ಯಾವುದೇ ವಾಹನ ಇಲ್ಲಿಗೆ ಬರಲು ಆಗೋದಿಲ್ಲ, ಕುಡಿಯಲು ನೀರಿಲ್ಲ, ಊಟ ತಿಂಡಿ ಸಿಕ್ತಿಲ್ಲ ಎಂದು ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:19 pm, Fri, 30 August 24

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ