ಗುತ್ತಿಗೆದಾರರ 20 ಸಾವಿರ ಕೋಟಿ ರೂ. ಬಾಕಿ, 30 ದಿನದಲ್ಲಿ ಬಗೆಹರಿಸದಿದ್ದರೆ ರಾಜ್ಯಾದ್ಯಂತ ಧರಣಿ: ಕೆಂಪಣ್ಣ ಎಚ್ಚರಿಕೆ

| Updated By: ವಿವೇಕ ಬಿರಾದಾರ

Updated on: Oct 14, 2023 | 2:35 PM

ಹಳೇ ಸಮಸ್ಯೆಗಳ ಜೊತೆ ಹೊಸ ಸಮಸ್ಯೆ ಸಹ ಸೇರ್ಪಡೆಯಾಗಿದೆ. ತನಿಖೆ ಹೆಸರಲ್ಲಿ ರಾಜ್ಯ ಸರ್ಕಾರ ಬಾಕಿ ಹಣ ತಡೆಹಿಡಿದಿದೆ. ಕೆಲವು ಇಲಾಖೆಗಳಲ್ಲಿ ಶೇಕಡಾ 7ರಷ್ಟು ಹಣ ಬಿಡುಗಡೆ ಮಾಡಿದ್ದಾರೆ. ಒಂದು ತಿಂಗಳಲ್ಲಿ ಶೇ.50ರಷ್ಟು ಬಾಕಿ ಮೊತ್ತ ಬಿಡುಗಡೆ ಮಾಡಬೇಕು ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆಗ್ರಹಿಸಿದರು.

ಗುತ್ತಿಗೆದಾರರ 20 ಸಾವಿರ ಕೋಟಿ ರೂ. ಬಾಕಿ, 30 ದಿನದಲ್ಲಿ ಬಗೆಹರಿಸದಿದ್ದರೆ ರಾಜ್ಯಾದ್ಯಂತ ಧರಣಿ: ಕೆಂಪಣ್ಣ ಎಚ್ಚರಿಕೆ
ಕೆಂಪಣ್ಣ
Follow us on

ಬೆಂಗಳೂರು ಅ.13: ಬಾಕಿ ಇವರು ಬಿಲ್​ ಬಿಡುಗಡೆಗೆ 40 ಪರ್ಸೆಂಟೇಜ್​ ಕಮೀಷನ್​ ಕೇಳುತ್ತಿದ್ದಾರೆ ಎಂದು ಕಳೆದ ಬಿಜೆಪಿ ಸರ್ಕಾರದ ಮೇಲೆ ರಾಜ್ಯ ಗುತ್ತಿಗೆದಾರರ (Contractors Association) ಸಂಘವು ಆರೋಪ ಮಾಡಿತ್ತು. ಇದು ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ವಿಚಾರವಾಗಿ ಗುತ್ತಿಗೆದಾರರು ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆದಿದ್ದರು. ನಂತರ ಕಾಂಗ್ರೆಸ್​ ಆಡಳಿತಕ್ಕೆ ಬಂದಿದ್ದು, ಬಾಕಿ ಇರುವ ಬಿಲ್​ ಅನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ (Siddaramaiah) ಹಲವು ಬಾರಿ ಮನವಿ ಸಲ್ಲಿಸಿದ್ದರು. ಮನವಿಗೆ ಸರ್ಕಾರ ಕಿವಿಗೊಡದ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಸಂಘವು ಸಿಡಿದೆದ್ದಿದೆ. ಇಂದು (ಅ.13) ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಸುದ್ದಿಗೋಷ್ಠಿ ನಡೆಸಿ, ಬಾಕಿ ಬಿಲ್​ ನೀಡುವಂತೆ 30 ದಿನ ಗಡುವು ನೀಡಿದ್ದಾರೆ.

ಬಾಕಿ ಬಿಲ್​ ಪಾವತಿಸುವಂತೆ ನಾಲ್ಕು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ. ಅದರೆ ಇದುವರೆಗೆ ಪಾವತಿ ಮಾಡಿಲ್ಲ. ರಾಜ್ಯ ಸರ್ಕಾರದಿಂದ ಇನ್ನೂ 20 ಸಾವಿರ ಕೋಟಿ ರೂ. ಬಾಕಿ ಬರಬೇಕಿದೆ. ಜಲಸಂಪನ್ಮೂಲ, ಸಣ್ಣ ನೀರಾವರಿ, ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಹಲವು ಇಲಾಖೆಗಳಿಂದ ಬಾಕಿ ಬರಬೇಕು. ಇಂದಿನಿಂದ ಸರ್ಕಾರಕ್ಕೆ 30 ದಿನ ಗಡವು ನೀಡುವುತ್ತೇವೆ. ಕರೆದು ಮಾತನಾಡಿ ಬಗೆ ಹರಿಸಬೇಕು. ಇಲ್ಲವಾದರೆ ಹೋರಾಟ ಅನಿವಾರ್ಯ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸರ್ಕಾರ ಎಚ್ಚರಿಕೆ ನೀಡಿದರು.

ಹಳೇ ಸಮಸ್ಯೆಗಳ ಜೊತೆ ಹೊಸ ಸಮಸ್ಯೆ ಸಹ ಸೇರ್ಪಡೆಯಾಗಿದೆ. ತನಿಖೆ ಹೆಸರಲ್ಲಿ ರಾಜ್ಯ ಸರ್ಕಾರ ಬಾಕಿ ಹಣ ತಡೆಹಿಡಿದಿದೆ. ಕೆಲವು ಇಲಾಖೆಗಳಲ್ಲಿ ಶೇಕಡಾ 7ರಷ್ಟು ಹಣ ಬಿಡುಗಡೆ ಮಾಡಿದ್ದಾರೆ. ಒಂದು ತಿಂಗಳಲ್ಲಿ ಶೇ.50ರಷ್ಟು ಬಾಕಿ ಮೊತ್ತ ಬಿಡುಗಡೆ ಮಾಡಬೇಕು. ತಮಗೆ ಬೇಕಾದ ಕೆಲ ಗುತ್ತಿಗೆದಾರರಿಗೆ ಮಾತ್ರ ಹಣ ಬಿಡುಗಡೆ ಮಾಡುತ್ತಿದ್ದಾರೆ. ಈ ಬಗ್ಗೆ ಕೇಳಿದರೇ ಗೊತ್ತಿಲ್ಲ ಅಂತಾ ಇಂಜಿನಿಯರ್​​​ಗಳು ಹೇಳುತ್ತಿದ್ದಾರೆ. ಗುತ್ತಿಗೆದಾರರ ಬಾಕಿ ಬಿಲ್​ ಪಾವತಿ ಮಾಡದಿದ್ದರೇ ಪ್ರತಿಭಟನೆ ಮಾಡುತ್ತೇವೆ. ಈ ಬಗ್ಗೆ ಸಿಎಂ ಅವರಿಗೆ ಪತ್ರ ಬರೆಯುತ್ತೇವೆ, ಪ್ರಧಾನ ಮಂತ್ರಿಗೂ ಪತ್ರ ಬರೆಯುತ್ತೇವೆ ಎಂದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ಪರ ವಹಿಸಿದ ಸಣ್ಣ, ಮಧ್ಯಮ ಗುತ್ತಿಗೆದಾರರು! ಡಿಸಿಎಂ ಬಗ್ಗೆ ಹೇಳಿದ್ದೇನು?

ಕೆಲ ಗುತ್ತಿಗೆದಾರರಿಗೆ ಶಿಫಾರಸು ಪತ್ರ ತಂದರೆ ಕಮಿಷನ್ ಪಡೆದು ರಾತ್ರೋರಾತ್ರಿ ಚೆಕ್ ನೀಡುತ್ತಿದ್ದಾರೆ. ಕೆಲ ಗುತ್ತಿಗೆದಾರರು ಸಾಲ-ಸೋಲ ಮಾಡಿ, ಇನ್ನೂ ಕೆಲವರು ಖಾಸಗಿ ಲೇವಾದೇವಿಗಳ ಬಳಿ ಅಸ್ತಿ ಪತ್ರ ಅಡವಿಟ್ಟು ಕಾಮಗಾರಿ ಮಾಡಿದ್ದಾರೆ. ಅದೆಷ್ಟೋ ಗುತ್ತಿಗೆದಾರರು ಸಾಲಗಾರರ ಕಾಟಕ್ಕೆ ಊರು ಬಿಟ್ಟಿದ್ದಾರೆ. ಸರ್ಕಾರ ಒಂದು ತಿಂಗಳಲ್ಲಿ ಬಾಕಿ ಮೊತ್ತ ಶೇ 50 ರಷ್ಟು ಬಿಡುಗಡೆ ಮಾಡಬೇಕು. ಇಲ್ಲವಾದರೆ ಇಡೀ ರಾಜ್ಯದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

ಅಂಬಿಕಾಪತಿ ಮನೆ‌ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಅಂಬಿಕಾಪತಿ ಅವರು ಬಹಳಷ್ಟು ವರ್ಷಗಳಿಂದ ಕಾಂಟ್ರ್ಯಾಕ್ಟರ್ ಕೆಲಸ ಮಾಡುತ್ತಿಲ್ಲ. 42 ಕೋಟಿ ರೂ. ಪತ್ತೆಯಾಗಿರುವುದು ಗೊತ್ತಾಯ್ತು. ಅವರದ್ದು ಇದೊಂದೇ ವ್ಯಾಪಾರವಲ್ಲ. ಅವರದ್ದು ಕೃಷಿ, ಜಲ್ಲಿ ಕ್ರಷರ್ ಸೇರಿದಂತೆ ಅನೇಕ ವ್ಯಾಪಾರಗಳಿವೆ. ಅವರು ಈಗ ಕಂಟ್ರಾಕ್ಟರ್ ಕೆಲಸವನ್ನೇ ನಿಲ್ಲಿಸಿಬಿಟ್ಟಿದ್ದಾರೆ ಎಂದು ಜಾರಿಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:22 pm, Fri, 13 October 23