AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ ಇದೆ ಠಾಣೆಗೆ ಬರಲು ಆಗಲ್ಲ, ಮಠಕ್ಕೆ ಬಂದರೆ ಹೇಳಿಕೆ ನೀಡುವೆ: ಪೊಲೀಸರಿಗೆ ಚಂದ್ರಶೇಖರ್​ ಸ್ವಾಮೀಜಿ ಪತ್ರ

ಚಂದ್ರಶೇಖರ ಸ್ವಾಮೀಜಿ ಅವರು ಮುಸ್ಲಿಮರ ಮತದಾನ ಹಕ್ಕು ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಎಫ್ಐಆರ್ ದಾಖಲಾಗಿದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಪೊಲೀಸ್ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಸ್ವಾಮೀಜಿ ಪತ್ರ ಬರೆದಿದ್ದಾರೆ. ಡಿಕೆ ಶ್ರೀ ಸುರೇಶ್ ಅವರು ಸ್ವಾಮೀಜಿ ವಿರುದ್ಧ ದೂರು ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಸ್ವಾಮೀಜಿ ತಮ್ಮ ಹೇಳಿಕೆಗೆ ಕ್ಷಮೆ ಕೇಳಿದ್ದಾರೆ.

ಕ್ಯಾನ್ಸರ್​ ಇದೆ ಠಾಣೆಗೆ ಬರಲು ಆಗಲ್ಲ, ಮಠಕ್ಕೆ ಬಂದರೆ ಹೇಳಿಕೆ ನೀಡುವೆ: ಪೊಲೀಸರಿಗೆ ಚಂದ್ರಶೇಖರ್​ ಸ್ವಾಮೀಜಿ ಪತ್ರ
ಚಂದ್ರಶೇಖರ ಸ್ವಾಮೀಜಿ
TV9 Web
| Edited By: |

Updated on: Dec 02, 2024 | 3:03 PM

Share

ಬೆಂಗಳೂರು, ಡಿಸೆಂಬರ್​​ 02: ಮುಸ್ಲಿಮರ ಮತದಾನದ ಹಕ್ಕಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ (Vokkaliga Math) ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ (Chandrashekar Swamiji) ಅವರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್​ ನೀಡಿದ್ದರು. ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಉಪ‌ ನಿರೀಕ್ಷಕರಿಗೆ ಚಂದ್ರಶೇಖರನಾಥ ಸ್ವಾಮೀಜಿ ಪತ್ರ ಬರೆದಿದ್ದು, ಇಂದು (ಡಿಸೆಂಬರ್​ 02) ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಸ್ವಾಮೀಜಿ ಪತ್ರದಲ್ಲಿ ಏನಿದೆ?

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ವೈದ್ಯರು ಹತ್ತು ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಗುಣಮುಖರಾದಲ್ಲಿ ಡಿಸೆಂಬರ್​ 18 ರಂದು ವಿಚಾರಣೆಗೆ ಹಾಜರಾಗುತ್ತೇವೆ. ಅಥವಾ ತನಿಖಾಧಿಕಾರಿಗಳೇ ಮಠಕ್ಕೆ ಬಂದು ಹೇಳಿಕೆ ಪಡೆಯಲು ಅಭ್ಯಂತರ ಇಲ್ಲ. ಈಗಾಗಲೇ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಲಾಗಿದೆ. ಸಮಾಜದ ಸ್ವಾಸ್ಥ್ಯದ ದೃಷ್ಟಿಯಿಂದ ಪ್ರಕರಣ ಬೆಳೆಸದೆ ಇಲ್ಲಿಗೆ ಮುಕ್ತಾಯಗೊಳಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಪತ್ರ ಬರೆದಿದ್ದಾರೆ.

ಪ್ರಕರಣದ ದಾಖಲಿಸಿರುವ ವಿಚಾರವಾಗಿ ಚಂದ್ರಶೇಖರ್​ ಸ್ವಾಮೀಜಿ ಮಾತನಾಡಿ, ಕ್ಷಮೆ ಕೇಳಿದ ಮೇಲೂ ನನ್ನ ವಿರುದ್ಧ ಕೇಸ್​ ದಾಖಲಿಸಿದ್ದಾರೆ. ನನಗೆ ಹುಷಾರಿಲ್ಲ, ಎಲ್ಲಿಗೂ ಹೋಗುವುದಕ್ಕೆ ಆಗುತ್ತಿಲ್ಲ. ಹೀಗಾಗಿ ನಾನು ಇಂದು ವಿಚಾರಣೆಗೆ ಹೋಗುವುದಕ್ಕೆ ಆಗಲ್ಲ. ಮಠದವರೆಗೂ ಬಂದು ಪೊಲೀಸರು ನೋಟಿಸ್​ ನೀಡಿದ್ದರು. ಪೊಲೀಸರು ಮಠಕ್ಕೆ ಬಂದರೆ ಹೇಳಿಕೆ ಕೋಡುತ್ತೇನೆ ಎಂದರು.

ಇದನ್ನೂ ಓದಿ: ಚಂದ್ರಶೇಖರನಾಥ ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದ ಡಿಸಿಎಂ ಡಿಕೆ ಶಿವಕುಮಾರ್

ಎಂತೆಂಥ ವಿಷಯಗಳಲ್ಲಿ ಏನೂ ಮಾಡಲ್ಲ, ನನ್ನ ವಿಚಾರಕ್ಕೆ ಕೇಸ್ ಮಾಡಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಅವರನ್ನು ಕರಿಯ ಎಂದವರ ವಿರುದ್ಧ ಕ್ರಮ‌ ಕೈಗೊಳ್ಳಲಿಲ್ಲ. ವಿಧಾನಸೌಧದಲ್ಲಿ ಪಾಕ್​ ಜಿಂದಾಬಾದ್ ಎಂದವರನ್ನು ಏನೂ ಮಾಡಿಲ್ಲ. ನಾನು ಕ್ಷಮೆ ಕೇಳಿದರೂ ಕೂಡ ಈ ರೀತಿ ಕೇಸ್ ದಾಖಲಿಸಿದ್ದಾರೆ. ಈ ವಯಸ್ಸಿನಲ್ಲಿ ನನಗೆ ಕೇಸ್ ಅಂತಿದ್ದಾರೆ, ಮಠಕ್ಕೆ ಬಂದರೆ ಉತ್ತರ ಕೊಡುತ್ತೇನೆ ಎಂದು ಕೆಂಗೇರಿ ಮಠದಲ್ಲಿ ಹೇಳಿದರು.

ಸ್ವಾಮೀಜಿ ವಿರುದ್ಧದ ದೂರು ಹಿಂಪಡೆಯಬೇಕು: ಡಿಕೆ ಸುರೇಶ್​

ಸ್ವಾಮೀಜಿ ವಿರುದ್ಧದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಈಗಾಗಲೇ ‌ಸ್ವಾಮೀಜಿಗಳು ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಭಾರತದ ಸಂವಿಧಾನ ಎಲ್ಲರಿಗೂ ಒಂದೇ ಎಂಬುದನ್ನು ಪರಮ ಪೂಜ್ಯ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ. ಸ್ವಾಮೀಜಿಗಳು ಸಾಂದರ್ಭಿಕವಾಗಿ ಆ ಮಾತು ಆಡಿದ್ದಾಗಿ ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ, ಸರ್ಕಾರ ದೂರನ್ನು ದಾಖಲು ಮಾಡಿದೆ. ಸ್ವಾಮೀಜಿ ವಿರುದ್ಧದ ದೂರು ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್