AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ: ಮುದ್ದೇನಹಳ್ಳಿ ಪಂಚಾಯಿತಿ ಗ್ರಂಥಾಲಯದಲ್ಲಿ ವಿವಾದಾತ್ಮಕ ಗೋಡೆ ಬರಹ

ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಸಾಲುಗಳನ್ನು ಬದಲಾಯಿಸಿ ವಿವಾದಕ್ಕೀಡಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಪಂಚಾಯಿತಿ ಗ್ರಂಥಾಲಯದಲ್ಲಿ ಹಿಂದೂ ವಿರೋಧಿ ಬರಹ ಪ್ರಕಟವಾಗಿದ್ದಕ್ಕೆ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ವಿವಾದಾತ್ಮಕ ಬರಹ ಪ್ರಕಟವಾಗಿದೆ. ಆ ಕುರಿತು ವಿವರ ಇಲ್ಲಿದೆ.

ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ: ಮುದ್ದೇನಹಳ್ಳಿ ಪಂಚಾಯಿತಿ ಗ್ರಂಥಾಲಯದಲ್ಲಿ ವಿವಾದಾತ್ಮಕ ಗೋಡೆ ಬರಹ
ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ: ಮುದ್ದೇನಹಳ್ಳಿ ಪಂಚಾಯಿತಿ ಗ್ರಂಥಾಲಯದಲ್ಲಿ ವಿವಾದಾತ್ಮಕ ಗೋಡೆ ಬರಹ
Vinay Kashappanavar
| Edited By: |

Updated on: Apr 15, 2024 | 1:08 PM

Share

ಬೆಂಗಳೂರು, ಏಪ್ರಿಲ್ 15: ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಸಾಲುಗಳನ್ನು ಬದಲಾಯಿಸಿದ್ದ ವಿಚಾರ ರಾಜ್ಯದಾದ್ಯಂತ ವಿವಾದಕ್ಕೀಡಾಗಿತ್ತು. ಇದೀಗ ಗ್ರಂಥಾಲಯಗಳಲ್ಲಿ ಹಿಂದೂ ಧರ್ಮಕ್ಕೆ ಅವಮಾನ ಮಾಡಿರುವ ಬಗ್ಗೆ ವರದಿಯಾಗಿದೆ. ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ (Library), ‘ಒಂದು ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ. ಒಂದು ಗ್ರಂಥಾಲಯ ಕಟ್ಟಿಸಿದರೆ ಲಕ್ಷಾಂತರ ವಿದ್ವಾಂಸರು ಹುಟ್ಟಿಕೊಳ್ಳುತ್ತಾರೆ’ ಎಂಬ ಗೋಡೆಬರಹ ಪ್ರಕಟಿಸಲಾಗಿದೆ. ಇದೀಗ ಗೋಡೆಬರಹಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿದೆ.

ಗ್ರಂಥಾಲಯದ ಪ್ರವೇಶ ದ್ವಾರದ ಗೋಡೆ ಮೇಲೆ ಬರಹ ಪ್ರಕಟಿಸಲಾಗಿದೆ. ಈ ಗ್ರಂಥಾಲಯ ರಾಜ್ಯ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ಹಿಂದೂ ಸಂಘಟನೆಗಳಿಂದ ವಿರೋಧ

ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದ ಗೋಡೆ ಬರಹಕ್ಕೆ ಸಾಮಾಜಿಕ ಜಾಲತಣದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹಿಂದೂಪರ ಸಂಘಟನೆಗಳು ಗೋಡೆಬರಹಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮಂದಿರದ ಬದಲಾಗಿ ಮಸೀದಿ ಎಂದು ಯಾಕೆ ಬಳಕೆ ಮಾಡಲ್ಲ ಎಂದು ಪ್ರಶ್ನಿಸಿವೆ.

ಇದೇ ಮೊದಲಲ್ಲ

ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ‘ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ’ ಎಂಬ ಬರಹಕ್ಕೆ ಬದಲಾಗಿ, ‘ಜ್ಞಾನ ದೇಗುಲವಿದು, ದೈರ್ಯವಾಗಿ ಪ್ರಶ್ನಿಸಿ’ ಎಂದು ಬರೆಸಿದ್ದು ಇತ್ತೀಚೆಗೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ವಿಧಾನಸಭೆಯ ಚಳಿಗಾಲದ ಅಧಿವೇಶನದ ಸಂದರ್ಭದಲ್ಲೇ ಈ ವಿಚಾರ ವಿವಾದಕ್ಕೀಡಾಗಿ ನಂತರ ಸರ್ಕಾರ ಮೊದಲಿನಂತೆಯೇ ಗೋಡೆ ಬರಹ ಪ್ರಕಟಿಸಲು ಆದೇಶ ನೀಡಿತ್ತು.

ಇದನ್ನೂ ಓದಿ: ವಿಜಯಪುರ: ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹ ಬದಲಾವಣೆ! ಚರ್ಚೆಗೆ ಗ್ರಾಸವಾಯ್ತು ಸರ್ಕಾರದ ನಡೆ

ಅದಕ್ಕೂ ಮುನ್ನ, ರಾಜ್ಯದ ಎಲ್ಲ ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿತ್ತು. ನಂತರ ವಿವಾದಕ್ಕೀಡಾಗುತ್ತಿದ್ದಂತೆಯೇ ನಿರ್ಬಂಧ ಆದೇಶವನ್ನು ವಾಪಸ್ ಪಡೆದಿತ್ತು.

ಶಿಕ್ಷಣ ಸಂಸ್ಥೆಗಳ ವಿಚಾರದಲ್ಲಿ ವಿವಾದಾತ್ಮಕ ನಿರ್ಧಾರಗಳನ್ನು ಕೈಗೊಂಡು ಆದೇಶ ಹೊರಡಿಸಿ ನಂತರ ಯೂಟರ್ನ್​ ತೆಗೆದುಕೊಂಡಿದ್ದ ರಾಜ್ಯ ಸರ್ಕಾರ ಇದೀಗ ಗ್ರಂಥಾಲಯ ಗೋಡೆಬರಹದ ವಿಚಾರದಲ್ಲಿಯೂ ಸಂಕಷ್ಟಕ್ಕೀಡಾಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?