AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಗೀತೆಗೆ ಸಂಗೀತ ಸಂಯೋಜನೆ ವಿವಾದ: ಮೈಸೂರು ಅನಂತಸ್ವಾಮಿ ಅವರ ಧಾಟಿ ಅಳವಡಿಕೆಗೆ ಆಕ್ಷೇಪ

ಕರ್ನಾಟಕದ ನಾಡಗೀತೆಗೆ ಸಂಗೀತ ಸಂಯೋಜನೆ ಕುರಿತಾಗಿ ಇಂದು ಹೈಕೋರ್ಟ್​​ನಲ್ಲಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಯಿತು. ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿಯೇ ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್‌ಗಳಲ್ಲಿ ಹಾಡಬೇಕು ಎಂಬುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2022ರ ಸೆಪ್ಟೆಂಬರ್‌ 25ರಂದು ಹೊರಡಿಸಿದ ಆದೇಶವನ್ನು ರಿಟ್ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

ನಾಡಗೀತೆಗೆ ಸಂಗೀತ ಸಂಯೋಜನೆ ವಿವಾದ: ಮೈಸೂರು ಅನಂತಸ್ವಾಮಿ ಅವರ ಧಾಟಿ ಅಳವಡಿಕೆಗೆ ಆಕ್ಷೇಪ
ಹೈಕೋರ್ಟ್
Ramesha M
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 17, 2023 | 10:24 PM

Share

ಬೆಂಗಳೂರು, ಆಗಸ್ಟ್​ 17: ಕರ್ನಾಟಕದ ನಾಡಗೀತೆಗೆ (karnataka anthem) ಸಂಗೀತ ಸಂಯೋಜನೆ ಕುರಿತಂತೆ ಎದ್ದಿರುವ ವಿವಾದಕ್ಕೆ‌ ಸಂಬಂಧಿಸಿದಂತೆ ಇಂದು ಹೈಕೋರ್ಟ್​​ನಲ್ಲಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಯಿತು. ಸರ್ಕಾರ ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ಧಾಟಿ ಅಳವಡಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ರವರಿದ್ದ ಏಕಸದಸ್ಯ ಪೀಠದಲ್ಲಿ ನಡೆಯಿತು. ಗಾಯಕಿ ಬಿ.ಕೆ.ಸುಮಿತ್ರಾ ಖುದ್ದು ಹಾಜರಾಗಿ ಧಾಟಿಯ ಬಗ್ಗೆ ವಿವರಣೆ ನೀಡಿದರು.

ಕವಿ ಬಿ.ಆರ್.ಲಕ್ಷ್ಮಣ ರಾವ್‌, ಗಾಯಕ ವೈ.ಕೆ.ಮುದ್ದುಕೃಷ್ಣ, ಮೃತ್ಯುಂಜಯ ದೊಡ್ಡವಾಡ ಕೂಡಾ ಹೈಕೋರ್ಟ್ ನಲ್ಲಿ ನಾಡಗೀತೆ ಹಾಡಿ ವಿವರಣೆ ನೀಡಿದರು. ನಾಡಗೀತೆಯ ಜಯಭಾರತ ಜನನಿಯ ತನುಜಾತೆ ಹಾಡಿಗಿರುವ ಭಿನ್ನ ಧಾಟಿಗಳ ವ್ಯತ್ಯಾಸಗಳನ್ನು ಹಾಡಿ ತೋರಿಸಿದರು. ಕೋರ್ಟ್ ಹಾಲ್ 7 ರಲ್ಲಿ ಕೆಲಕಾಲ ಸಂಗೀತ ಕಛೇರಿ ನಡೆದಂತೆ ಭಾಸವಾಯಿತು.

ಇದನ್ನೂ ಓದಿ: ನಾಡಗೀತೆಗೆ ಸಂಗೀತ ಸಂಯೋಜನೆ ವಿವಾದ: ಹಾಡಿನ ಮೂಲಕ ಹೈಕೋರ್ಟ್​ಗೆ ವಿವರಣೆ ನೀಡಿದ ಕಿಕ್ಕೇರಿ ಕೃಷ್ಣಮೂರ್ತಿ

ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿಯೇ ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್‌ಗಳಲ್ಲಿ ಹಾಡಬೇಕು ಎಂಬುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2022ರ ಸೆಪ್ಟೆಂಬರ್‌ 25ರಂದು ಹೊರಡಿಸಿದ ಆದೇಶವನ್ನು ರಿಟ್ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಮಧ್ಯಂತರ ಅರ್ಜಿದಾರರ ಪರ ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ವಾದ ಮಂಡಿಸಿ, ರಾಜ್ಯ ಸರ್ಕಾರ ಈಗಾಗಲೇ ತನ್ನೆಲ್ಲಾ ಅಧಿಕೃತ ಕಾರ್ಯಕ್ರಮಗಳಲ್ಲಿ ಮೈಸೂರು ಅನಂತಸ್ವಾಮಿಯವರ ಧಾಟಿಯಲ್ಲೇ ಹಾಡುವುದು ಸೂಕ್ತ ಎಂಬುದನ್ನು ತೀರ್ಮಾನಿಸಿ ಆದೇಶ ಹೊರಡಿಸಿದೆ.

ಹೀಗಾಗಿ ಸರ್ಕಾರದ ಕ್ರಮ ಸರಿಯಾಗಿದೆ ಎಂದು ವಾದಿಸಿದರು. ನಿಮ್ಮ ವಾದಕ್ಕೆ ಕಾನೂನಿನ ಮಾನ್ಯತೆ ಇರುವ ಬಗ್ಗೆ ಪುಷ್ಟೀಕರಿಸುವ ದಾಖಲೆ ಹಾಜರುಪಡಿಸುವಂತೆ ಕೋರ್ಟ್ ವಾದಿ, ಪ್ರತಿವಾದಿಗಳಿಗೆ ಸೂಚಿಸಿದೆ. ಗಾಯಕಿ ಬಿ.ಕೆ.ಸುಮಿತ್ರಾ ಖುದ್ದು ಹಾಜರಾಗಿ ಮೈಸೂರು ಅನಂತಸ್ವಾಮಿ ಮತ್ತು ಸಿ.ಅಶ್ವತ್ಥ್‌ ಅವರ ಧಾಟಿಗಳ ಕುರಿತಾದ ವ್ಯತ್ಯಾಸವನ್ನು ವಿವರಿಸಿದರು.

ಇದನ್ನೂ ಓದಿ: ಲಘು ಯುದ್ಧ ವಿಮಾನದ ಮಾಹಿತಿ ಕದ್ದವನಿಗಿಲ್ಲ ರಿಲೀಫ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಕಿಕ್ಕೇರಿ ಕೃಷ್ಣಮೂರ್ತಿ ಪರವಾಗಿ ಹಾಜರಾಗಿದ್ದ ಪ್ರಣಯ ಕವಿ ಎಂದೇ ಹೆಸರಾದ ಬಿ.ಆರ್.ಲಕ್ಷ್ಮಣ ರಾವ್‌, ಅಶ್ವತ್ಥ್‌ ಅವರ ಧಾಟಿಯು ವೃಂದಗಾನಕ್ಕೆ ಹೇಳಿ ಮಾಡಿಸಿದಂತಿದ್ದು, ಅವರ ಧಾಟಿಯನ್ನೇ ಮುಂದುವರಿಸುವುದು ಸೂಕ್ತ ಎಂದು ತಿಳಿಸಿದರು. ಎಲ್ಲರ ಅಭಿಪ್ರಾಯ ಆಲಿಸಿದ ನ್ಯಾಯಪೀಠ, ಅನಂತಸ್ವಾಮಿ ಮತ್ತು ಅಶ್ವತ್ಥ್‌ ಇಬ್ಬರೂ ಸಂಗೀತ ಲೋಕದ ದಿಗ್ಗಜರೆಂದು ಶ್ಲಾಘಿಸಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ