ಮಾಲೂರು ವಿಧಾನಸಭಾ ಕ್ಷೇತ್ರದ ಫಲಿತಾಂಶಕ್ಕೆ ತಕರಾರು: ಮರು ಎಣಿಕೆಗೆ ತಯಾರಿ, ಹಾಲಿ ಶಾಸಕರಿಗೆ ಶುರುವಾಯ್ತು ಟೆನ್ಷನ್

| Updated By: ಗಂಗಾಧರ​ ಬ. ಸಾಬೋಜಿ

Updated on: Aug 11, 2024 | 5:26 PM

ಮಾಲೂರು ವಿಧಾನಸಭಾ ಕ್ಷೇತ್ರದ ಚುನಾವಣೆ ಫಲಿತಾಂಶದ ವಿಚಾರವಾಗಿ ಮರು ಮತ ಎಣಿಕೆ ಕೋರಿ ಪರಾಜಿತ ಅಭ್ಯರ್ಥಿ ಮಂಜುನಾಥ್‌ ಗೌಡ ಕೋರ್ಟ್‌ ಮೆಟ್ಟಿಲೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಕೇಳಿರುವ ದಾಖಲೆ ಸಲ್ಲಿಸಲು ಮರು ಎಣಿಕೆಗೆ ತಯಾರಿ ಮಾಡಲಾಗಿದ್ದು, ಆಗಸ್ಟ್‌ 13ರಂದು ಇವಿಎಂ ಉಗ್ರಾಣದ ಬಾಗಿಲು ತೆರೆಯಲು ಕೋಲಾರ ಜಿಲ್ಲಾಡಳಿತ ಸಿದ್ಧತೆ ಮಾಡಿದೆ.

ಮಾಲೂರು ವಿಧಾನಸಭಾ ಕ್ಷೇತ್ರದ ಫಲಿತಾಂಶಕ್ಕೆ ತಕರಾರು: ಮರು ಎಣಿಕೆಗೆ ತಯಾರಿ, ಹಾಲಿ ಶಾಸಕರಿಗೆ ಶುರುವಾಯ್ತು ಟೆನ್ಷನ್
ಪ್ರಾತಿನಿಧಿಕ ಚಿತ್ರ
Follow us on

ಕೋಲಾರ, ಆಗಸ್ಟ್​ 11: ಮಾಲೂರು ವಿಧಾನಸಭಾ ಕ್ಷೇತ್ರದ (malur assembly elections) ಚುನಾವಣೆ ಫಲಿತಾಂಶದ ತಕರಾರು ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್‌ (High Court) ಕೇಳಿರುವ ದಾಖಲೆ ಸಲ್ಲಿಸಲು ಆಗಸ್ಟ್‌ 13ರಂದು ಇವಿಎಂ ಉಗ್ರಾಣದ ಬಾಗಿಲು ತೆರೆಯಲು ಕೋಲಾರ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಕೋಲಾರ ಜಿಲ್ಲಾಧಿಕಾರಿ ಕಚೇರಿಯ ಸಂಕೀರ್ಣದಲ್ಲಿರುವ ಇವಿಎಂ ಉಗ್ರಾಣ ತೆರೆಯಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಿಂದ ಅನುಮತಿ ನೀಡಲಾಗಿದೆ. ಹೀಗಾಗಿ ಸದ್ಯ ಹಾಲಿ ಶಾಸಕರಿಗೆ ಟೆನ್ಷನ್ ಶುರುವಾಗಿದೆ.

ಮಂಗಳವಾರ ಮಾಲೂರು ಕ್ಷೇತ್ರಕ್ಕೆ ಸಂಬಂಧಿಸಿದ ಭದ್ರತಾ ಕೊಠಡಿ ತೆರೆಯಲು ತಯಾರಿ ಮಾಡಲಾಗಿದ್ದು, ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಸಮ್ಮುಖದಲ್ಲಿ ಎಣಿಕೆ ಮಾಡಲು ಸಿದ್ಧತೆ ಮಾಡಲಾಗಿದೆ. ಕೋಲಾರ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಅಕ್ರಂ ಪಾಷಾ ನೇತೃತ್ವದಲ್ಲಿ ಎಣಿಕೆ ಮಾಡಲಿದೆ.

ಇದನ್ನೂ ಓದಿ: Malur Election Results: ಮಾಲೂರು ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕೆ.ಎಸ್​.ಮಂಜುನಾಥಗೌಡ, ಜಿ.ಇ.ರಾಮೇಗೌಡ ಹಾಗೂ ವಿಜಯ್​ ಕುಮಾರ್​ ನಡುವೆ ಬಿಗ್​ ಫೈಟ್

ಮತ ಎಣಿಕೆ ಸಂದರ್ಭದಲ್ಲಿ ಸಂಗ್ರಹಿಸಿಟ್ಟಿರುವ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲಾಗುವುದು. ಅಂದು ಸ್ಥಳದಲ್ಲಿ ಹಾಜರಿರುವಂತೆ ಬಿಜೆಪಿ, ಕಾಂಗ್ರೆಸ್‌, ಬಿಎಸ್‌ಪಿ, ಸಿಪಿಎಂ, ಆಮ್‌ ಆದ್ಮಿ ಪಾರ್ಟಿ, ಜೆಡಿಎಸ್‌ ಸೇರಿದಂತೆ ಎಲ್ಲರಿಗೂ ಜಿಲ್ಲಾಧಿಕಾರಿ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ ಮಾಜಿ ಶಾಸಕ: ಪತಿಯೇ MLA​ ಆಗಲೆಂದು ದೇವಿಗೆ ಹರಕೆ ಪತ್ರ ಬರೆದ ಮೂಲ ಬಿಜೆಪಿ ನಾಯಕನ ಪತ್ನಿ

2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಕೆ.ವೈ.ನಂಜೇಗೌಡ 50,955 ಮತ ಹಾಗೂ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಕೆಎಸ್​ ಮಂಜುನಾಥ್‌ ಗೌಡ 50,707 ಮತ ಗಳಿಸಿದ್ದರು. ಕಾಂಗ್ರೆಸ್ ಪಕ್ಷದಿಂದ ನಂಜೇಗೌಡ ಕೇವಲ 248 ಮತಗಳಿಂದ ಗೆದ್ದಿದ್ದರು. ಮರು ಮತ ಎಣಿಕೆ ಕೋರಿ ಪರಾಜಿತ ಅಭ್ಯರ್ಥಿ ಮಂಜುನಾಥ್‌ ಗೌಡ ಕೋರ್ಟ್‌ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ಈಗ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.