ಟ್ಯಾಂಕರ್ ಪಲ್ಟಿ, ಕರ್ತವ್ಯ ಮರೆತು ಅಡುಗೆ ಎಣ್ಣೆ ತುಂಬಿಕೊಳ್ಳಲು ಮುಗಿಬಿದ್ದ ಸಿಬ್ಬಂದಿ

|

Updated on: Nov 17, 2019 | 4:26 PM

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಅಡುಗೆ ಎಣ್ಣೆ ತುಂಬಿದ ಟ್ಯಾಂಕರ್ ಪಲ್ಟಿಯಾಗಿದೆ. ಟ್ಯಾಂಕರ್​ನಿಂದ ಬೀಳುತ್ತಿದ್ದ ಅಡುಗೆ ಎಣ್ಣೆಯನ್ನು ತುಂಬಿಸಿಕೊಳ್ಳಲು ಜನರು ಮುಗಿಬಿದ್ದ ಪ್ರಸಂಗ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗೊಂದಿ ಕ್ರಾಸ್‌ ಬಳಿ ನಡೆದಿದೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಆ್ಯಂಬುಲೆನ್ಸ್‌ ಸಿಬ್ಬಂದಿ ತಮ್ಮ ಕರ್ತವ್ಯ ಮರೆತು ಗಾಯಾಳುಗಳನ್ನು ಆ್ಯಂಬುಲೆನ್ಸ್‌ನಲ್ಲಿ ಕೂರಿಸಿ ಜನರ ಜೊತೆ ಅಡುಗೆ ಎಣ್ಣೆ ತುಂಬಿಸಿಕೊಳ್ಳಲು ಮುಂದಾಗಿದ್ದಾರೆ. ತಮ್ಮ ವಾಹನದಲ್ಲಿದ್ದ ವಸ್ತುಗಳಲ್ಲಿ ಎಣ್ಣೆ ತುಂಬಿಸಿಕೊಂಡು ನಂತರ ತಾಲೂಕು ಸರಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಿದ್ದಾರೆ. ಇನ್ನು ಜನರು […]

ಟ್ಯಾಂಕರ್ ಪಲ್ಟಿ, ಕರ್ತವ್ಯ ಮರೆತು ಅಡುಗೆ ಎಣ್ಣೆ ತುಂಬಿಕೊಳ್ಳಲು ಮುಗಿಬಿದ್ದ ಸಿಬ್ಬಂದಿ
Follow us on

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಅಡುಗೆ ಎಣ್ಣೆ ತುಂಬಿದ ಟ್ಯಾಂಕರ್ ಪಲ್ಟಿಯಾಗಿದೆ. ಟ್ಯಾಂಕರ್​ನಿಂದ ಬೀಳುತ್ತಿದ್ದ ಅಡುಗೆ ಎಣ್ಣೆಯನ್ನು ತುಂಬಿಸಿಕೊಳ್ಳಲು ಜನರು ಮುಗಿಬಿದ್ದ ಪ್ರಸಂಗ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗೊಂದಿ ಕ್ರಾಸ್‌ ಬಳಿ ನಡೆದಿದೆ.

ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಆ್ಯಂಬುಲೆನ್ಸ್‌ ಸಿಬ್ಬಂದಿ ತಮ್ಮ ಕರ್ತವ್ಯ ಮರೆತು ಗಾಯಾಳುಗಳನ್ನು ಆ್ಯಂಬುಲೆನ್ಸ್‌ನಲ್ಲಿ ಕೂರಿಸಿ ಜನರ ಜೊತೆ ಅಡುಗೆ ಎಣ್ಣೆ ತುಂಬಿಸಿಕೊಳ್ಳಲು ಮುಂದಾಗಿದ್ದಾರೆ. ತಮ್ಮ ವಾಹನದಲ್ಲಿದ್ದ ವಸ್ತುಗಳಲ್ಲಿ ಎಣ್ಣೆ ತುಂಬಿಸಿಕೊಂಡು ನಂತರ ತಾಲೂಕು ಸರಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಿದ್ದಾರೆ. ಇನ್ನು ಜನರು ಟ್ಯಾಂಕರ್‌ನಿಂದ ಬೀಳುತ್ತಿದ್ದ ಎಣ್ಣೆ ತುಂಬಿಸಿಕೊಳ್ಳಲು ಬಿಂದಿಗೆ, ಡಬ್ಬಿ, ಕ್ಯಾನ್​ಗಳ ಜೊತೆ ಮುಗಿಬಿದ್ದಿದ್ದಾರೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

 

Published On - 3:39 pm, Sun, 17 November 19