ಇನ್ನು 2-3 ದಿನಗಳಲ್ಲಿ ರೈತರ ಖಾತೆಗಳಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯ 770 ಕೋಟಿ ಹಣ ಪಾವತಿ: ಸಹಕಾರ ಸಚಿವ ಎಸ್ ಟಿ ಸೋಮಶೇಖರ್
ಬಾಕಿ 770 ಕೋಟಿ ರೂಪಾಯಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಡುಗಡೆ ಮಾಡಲು ಆದೇಶ ನೀಡಿದ್ದು, ಇನ್ನು 2-3 ದಿನಗಳಲ್ಲಿ ರೈತರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 4-5 ತಿಂಗಳ ಹಿಂದೆ ಖರೀದಿ ಮಾಡಲಾಗಿದ್ದ ರಾಗಿ, ಭತ್ತ ಹಾಗೂ ಗೋಧಿಗೆ ಬಾಕಿ ಹಣವು ಸುಮಾರು 770 ಕೋಟಿ ರೂಪಾಯಿಯಷ್ಟಿದ್ದು, ಇದನ್ನು ಇನ್ನು 2-3 ದಿನಗಳಲ್ಲಿ ಪಾವತಿಸುವುದಾಗಿ ಸಹಕಾರ ಸಚಿವ ಹಾಗೂ ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರೂ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಸಚಿವ ಸಂಪುಟ ಉಪ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್, ನಾಲ್ಕೈದು ತಿಂಗಳ ಹಿಂದೆಯೇ ರಾಗಿ, ಭತ್ತ ಹಾಗೂ ಗೋಧಿಯನ್ನು ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಖರೀದಿ ಮಾಡಲಾಗಿತ್ತು. ಆದರೆ, ಬೆಂಬಲ ಬೆಲೆ ಹಣ ಬಿಡುಗಡೆಯಾಗದೆ ಸಮಸ್ಯೆಯಾಗುತ್ತಿದೆ. ಕೂಡಲೇ ಬಾಕಿ ಹಣವನ್ನು ಪಾವತಿಸುವಂತೆ ಒತ್ತಡಗಳು ಬರುತ್ತಿದ್ದವು. ಇದೀಗ ಬಾಕಿ 770 ಕೋಟಿ ರೂಪಾಯಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಡುಗಡೆ ಮಾಡಲು ಆದೇಶ ನೀಡಿದ್ದು, ಇನ್ನು 2-3 ದಿನಗಳಲ್ಲಿ ರೈತರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ನಗರ, ಗ್ರಾಮಾಂತರಕ್ಕೆ ಲಸಿಕೆ ಪೂರೈಕೆಯಲ್ಲಿ ವ್ಯತ್ಯಾಸವೇಕೆ? ಕರ್ನಾಟಕ ಹೈಕೋರ್ಟ್ ಪ್ರಶ್ನೆ ರಾಜ್ಯದಲ್ಲಿ ಕೊವಿಡ್ ಲಸಿಕೆ ಕೊರತೆ ವಿಚಾರವಾಗಿ ಜುಲೈ, ಆಗಸ್ಟ್ ತಿಂಗಳಿಗೆ ಬೇಕಿರುವ ಲಸಿಕೆ ಎಷ್ಟು? 2ನೇ ಡೋಸ್ ಒದಗಿಸಲು ಯೋಜನೆ ರೂಪಿಸಲಾಗಿದೆಯೇ? ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆಯೇ? ನಗರ, ಗ್ರಾಮಾಂತರಕ್ಕೆ ಲಸಿಕೆ ಪೂರೈಕೆಯಲ್ಲಿ ವ್ಯತ್ಯಾಸವೇಕೆ? ಎಂದು ಪ್ರಶ್ನಿಸಿರುವ ಕರ್ನಾಟಕ ಹೈಕೋರ್ಟ್, ಈ ಬಗ್ಗೆ ಸರ್ಕಾರಕ್ಕೆ ಸೂಚಿಸಿದೆ. ಇಷ್ಟೇ ಅಲ್ಲದೇ ಕೊವಿಡ್ ವಿರುದ್ಧ ಸೆಣೆಸುತ್ತಿರುವವವರ ಕುಟುಂಬಗಳಿಗೂ ಆದ್ಯತೆಯ ಮೇರೆಗೆ ಕೊವಿಡ್ ಲಸಿಕೆ ವಿತರಿಸಲು ಹೈಕೋರ್ಟ್ ಸೂಚನೆ ನೀಡಿದೆ.
ಇದನ್ನೂ ಓದಿ:
ಕೊವಿಡ್ ಲಸಿಕೆ ಪಡೆಯಲು ಸುಲಭ ಮಾರ್ಗ ಸೃಷ್ಟಿಸಿದ ಕುಂದಾಪುರದ ಯುವಕ; ಹೊಸ ಆ್ಯಪ್ ಕಂಡುಹಿಡಿಯುವಲ್ಲಿ ಯಶಸ್ವಿ
ಕೊವಿಡ್ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ಪರಿಹಾರ; ಹೊರಬಿತ್ತು ಅಧಿಕೃತ ಆದೇಶ
(Cooperative Minister ST Somashekar says 770 crore payment of minimum support price scheme for farmers accounts in 2 to 3 days)