ಕೋಲಾರ: ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಮತ್ತೊಬ್ಬ ಆರೋಪಿ ಅರೆಸ್ಟ್ ಆಗಿದ್ದಾನೆ. ಪ್ರಕರಣದ ಮತ್ತೊಬ್ಬ ಆರೋಪಿಯಾಗಿರುವ ರೋಹಿತ್ನನ್ನ ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಗ್ರಾಮಾಂತರ ಠಾಣೆಯ ಪೊಲೀಸರಿಂದ ರೋಹಿತ್ ಬಂಧನವಾಗಿದೆ. ಪ್ರಕರಣದ A1 ಆರೋಪಿಯಾಗಿದ್ದ ಕವಿರಾಜ್ ಬಂಧನದ ವೇಳೆ ರೋಹಿತ್ ಹೊಸೂರಿನಿಂದ ತಪ್ಪಿಸಿಕೊಂಡಿದ್ದ.
ನ.26ರಂದು ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣವಾಗಿತ್ತು. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 6 ಆರೋಪಿಗಳನ್ನು ಬಂಧಿಸಿದ್ದಾರೆ.
ನ್ಯೂ ಮೈಕೋ ಲೇಔಟ್ ರಾಜಕಾಲುವೆಯಲ್ಲಿ.. ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ
Published On - 9:22 pm, Sun, 24 January 21