ಪೊಲೀಸರು ಕ್ವಾರಂಟೈನ್ನಲ್ಲಿದ್ದರೆ ಅದು On Duty ಆಗುತ್ತದೆ -DGP ಪ್ರವೀಣ್ ಸೂದ್
ಬೆಂಗಳೂರು: ಇನ್ಮುಂದೆ ಪೊಲೀಸರು ಕ್ವಾರಂಟೈನ್ನಲ್ಲಿದ್ದರೆ ಅದನ್ನ ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕೆಂದು ಡಿಜಿಪಿ ಪ್ರವೀಣ್ ಸೂದ್ ಆದೇಶ ನೀಡಿದ್ದಾರೆ. ಈ ಮೂಲಕ ರಾಜ್ಯ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ರಾಜ್ಯದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದೆ. ಪ್ರತಿನಿತ್ಯ ಸಾರ್ವಜನಿಕರ ಜೊತೆ ಪೊಲೀಸರು ನೇರ ಸಂಪರ್ಕದಲ್ಲಿದ್ದಾರೆ. ಈ ವೇಳೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ ಇತ್ತೀಚೆಗೆ ಪೊಲೀಸರಲ್ಲೂ ಕೊರೊನಾ ಸೋಂಕು ಕಂಡು ಬರುತ್ತಿದೆ. ಸೋಂಕಿತರ ಜೊತೆ ಸಂಪರ್ಕ ಹೊಂದಿ ಹಲವಾರು ಪೊಲೀಸರು ಕ್ವಾರಂಟೈನ್ ಆಗುತ್ತಿದ್ದಾರೆ. ಕರ್ತವ್ಯ […]
ಬೆಂಗಳೂರು: ಇನ್ಮುಂದೆ ಪೊಲೀಸರು ಕ್ವಾರಂಟೈನ್ನಲ್ಲಿದ್ದರೆ ಅದನ್ನ ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕೆಂದು ಡಿಜಿಪಿ ಪ್ರವೀಣ್ ಸೂದ್ ಆದೇಶ ನೀಡಿದ್ದಾರೆ. ಈ ಮೂಲಕ ರಾಜ್ಯ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.
ರಾಜ್ಯದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದೆ. ಪ್ರತಿನಿತ್ಯ ಸಾರ್ವಜನಿಕರ ಜೊತೆ ಪೊಲೀಸರು ನೇರ ಸಂಪರ್ಕದಲ್ಲಿದ್ದಾರೆ. ಈ ವೇಳೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ ಇತ್ತೀಚೆಗೆ ಪೊಲೀಸರಲ್ಲೂ ಕೊರೊನಾ ಸೋಂಕು ಕಂಡು ಬರುತ್ತಿದೆ. ಸೋಂಕಿತರ ಜೊತೆ ಸಂಪರ್ಕ ಹೊಂದಿ ಹಲವಾರು ಪೊಲೀಸರು ಕ್ವಾರಂಟೈನ್ ಆಗುತ್ತಿದ್ದಾರೆ.
ಕರ್ತವ್ಯ ನಿರ್ವಹಣೆ ಸಮಯದಲ್ಲಿ ಪೊಲೀಸರು ಸೋಂಕಿತರ ಜೊತೆ ಸಂಪರ್ಕಕ್ಕೆ ಬಂದಿರುತ್ತಾರೆ. ಅದ್ರಿಂದ ಪೊಲೀಸರು ಹೋಂ ಕ್ವಾರಂಟೈನ್ ಅಥವಾ ಸಾಂಸ್ಥಿಕ ಕ್ವಾರಂಟೈನ್ ಆಗುತ್ತಾರೆ. ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು.
ಕೊರೊನಾ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದವರು ಹಾಗೂ ತರಬೇತಿ ನಿಮಿತ್ತ ಹೊರರಾಜ್ಯದಿಂದ ಪ್ರಯಾಣ ಬೆಳೆಸಿದ ಸಿಬ್ಬಂದಿಗೂ ಇದ ಅನ್ವಯವಾಗಲಿದೆ.
Published On - 11:24 am, Tue, 9 June 20