ಬೆಂಗಳೂರು: ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ

|

Updated on: Jan 16, 2021 | 9:39 PM

ಕೋರ್​ ಕಮಿಟಿ ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್​ ಜೋಶಿ, ಡಿ.ವಿ.ಸದಾನಂದಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬೊಮ್ಮಾಯಿ ಸೇರಿ ಅನೇಕರು ಭಾಗಿಯಾಗಿದ್ದಾರೆ.

ಬೆಂಗಳೂರು: ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ
ಯಡಯೂರಪ್ಪ, ಅಮಿತ್​ ಶಾ, ಸದಾನಂದ ಗೌಡ
Follow us on

ಬೆಂಗಳೂರು: ನಗರದ ವಿಂಡ್ಸರ್ ಮ್ಯಾನರ್ ಹೋಟೆಲ್​ನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭಗೊಂಡಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.

ಕೋರ್​ ಕಮಿಟಿ ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್​ ಜೋಶಿ, ಡಿ.ವಿ.ಸದಾನಂದಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬೊಮ್ಮಾಯಿ, ಸಚಿವರಾದ ಜಗದೀಶ್ ಶೆಟ್ಟರ್, ಆರ್.ಅಶೋಕ್, ಅರವಿಂದ ಲಿಂಬಾವಳಿ, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಅಕಾರ್ಯದರ್ಶಿ ಸಿ.ಟಿ.ರವಿ ಭಾಗಿಯಾಗಿದ್ದಾರೆ.

ಇನ್ನು, ಹೋಟೆಲ್​ನಲ್ಲಿರುವ ಅಮಿತ್​​ ಶಾ ಅವರನ್ನು ಭೇಟಿ ಆಗಲು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ತೆರಳಿದ್ದರು. ಆದರೆ, ಅವರ ಭೇಟಿ ಸಾಧ್ಯವಾಗದ ಕಾರಣ ಹೋಟೆಲ್​ನಿಂದ ಹೊರ ನಡೆದಿದ್ದಾರೆ.

ಕರ್ನಾಟಕ ಸಿಎಂ ಜೊತೆ ಕೇಂದ್ರ ಸರ್ಕಾರ ಯಾವತ್ತೂ ಇದ್ದೇ ಇರುತ್ತದೆ -BSY ಕಾರ್ಯವೈಖರಿಗೆ ಅಮಿತ್ ಶಾ ಪ್ರಶಂಸೆ