ಕರ್ನಾಟಕದಲ್ಲಿಂದು ಹೊಸದಾಗಿ 20 ಕೊವಿಡ್ ಕೇಸ್ ದಾಖಲು: ಎರಡು ಸಾವು
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು ಹೊಸದಾಗಿ 22 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಏನೆಲ್ಲಾ ಸಿದ್ಧತೆ ಆಗಿದೆ ಎಂದು ಮಾಹಿತಿ ಪಡೆದಿದ್ದೇನೆ. ಜನರು ಸದ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು, ಡಿಸೆಂಬರ್ 20: ರಾಜ್ಯದಲ್ಲಿ ಇಂದು ಕೊರೊನಾ (Corona) ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು ಹೊಸದಾಗಿ 22 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 19, ಬಳ್ಳಾರಿ ಜಿಲ್ಲೆಯಲ್ಲಿ 2, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್‌ಗಳ ಸಂಖ್ಯೆ 92ಕ್ಕೆ ಏರಿಕೆ ಆಗಿದ್ದು, ಕೊರೊನಾ ಪಾಸಿಟಿವಿಟಿ ದರ ಶೇಕಡಾ 2.47ರಷ್ಟಿದೆ. ನಗರದಲ್ಲಿ ಇಂದು 359 ಜನರಿಗೆ ಟೆಸ್ಟ್ ಮಾಡಲಾಗಿತ್ತು.
ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಿಷ್ಟು
ಆರೋಗ್ಯಸೌಧದಲ್ಲಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಏನೆಲ್ಲಾ ಸಿದ್ಧತೆ ಆಗಿದೆ ಎಂದು ಮಾಹಿತಿ ಪಡೆದಿದ್ದೇನೆ. ನಗರದಲ್ಲಿ ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಆದರೆ ಬೇರೆ ಬೇರೆ ಆರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿರುವ ಸಾಧ್ಯತೆಯಿದೆ. ಬೆಂಗಳೂರು ಹೆಚ್ಚು ಜನ ಇರುವ ಪ್ರದೇಶ. ಏನೆಲ್ಲಾ ಕ್ರಮ ತೆಗೆದುಕೊಂಡಿದೆ ಪರಿಶೀಲಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ರಾಮನಗರ ಜಿಲ್ಲೆಯಲ್ಲಿ 2ನೇ ಕೋವಿಡ್ ಪ್ರಕರಣ ಪತ್ತೆ: ಕಾರವಾರ, ಚಿಕ್ಕಮಗಳೂರಿನಲ್ಲೂ ಕೊರೊನಾ
ಪ್ರತಿದಿನ ಒಂದೂವರೆ ಸಾವಿರಕ್ಕೂ ಹೆಚ್ಚು ಟೆಸ್ಟಿಂಗ್ಗೆ ಸೂಚಿಸಿದ್ದೇವೆ. ವಲಯವಾರು ಅಧಿಕಾರಿಗಳು ಗಮನಹರಿಸಬೇಕು. ರಾಜ್ಯದಲ್ಲಿ ಇರುವಂತೆ ರಾಜಧಾನಿಯಲ್ಲೂ ಮುಂಜಾಗೃತೆ ತೆಗೆದುಕೊಳ್ಳಬೇಕು. ನಾಳೆ ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ ಜೊತೆ ಸಭೆ ಇದೆ. ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಯಲಿದೆ. ಸಭೆ ಬಳಿಕ ಎಷ್ಟು ಡ್ರಗ್ ಖರೀದಿಸಬೇಕು ನಿರ್ಧರಿಸುತ್ತೇವೆ. ಪರಿಸ್ಥಿತಿ ನೋಡಿಕೊಂಡು ಡ್ರಗ್ ಖರೀದಿಸುತ್ತೇವೆ. ಜನರು ಸದ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಬಿಬಿಎಂಪಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್ಗಳಿಲ್ಲ. ಕೇಸ್ ನೋಡಿಕೊಂಡು ಕ್ರಮ ತೆಗೆದುಕೊಳ್ಳಬೇಕಿದೆ. ನಾಳೆ ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.
ಇದನ್ನೂ ಓದಿ: ಕೋವಿಡ್ ಎದುರಿಸಲು ಸಿದ್ಧವಾದ ಹುಬ್ಬಳ್ಳಿಯ ಕಿಮ್ಸ್: ರೋಗಿಗಳಿಗಾಗಿ 100 ಬೆಡ್ ಮೀಸಲು
ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ JN.1 ಭೀತಿ ಹಿನ್ನೆಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ಸಭೆಯಲ್ಲಿ ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಆರೋಗ್ಯ ಇಲಾಖೆಯ ನಿರ್ದೇಶಕಿ ಪುಷ್ಪಲತಾ ಸೇರಿದಂತೆ ಹಿರಿಯ ಅಧಿಕಾರಿಗಳು, ಬಿಬಿಎಂಪಿ ಆರೋಗ್ಯಾಧಿಕಾರಿಗಳು ಭಾಗಿಯಾಗಿದ್ದರು. ಸೋಂಕು ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಚಿವರು ಮಾಹಿತಿ ಪಡೆದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.