ಕರ್ನಾಟಕ ರಾಜ್ಯದಲ್ಲಿ ಇಂದು 474 ಜನರಲ್ಲಿ ಕೊರೊನಾ ಸೋಂಕು ದೃಢ

|

Updated on: Feb 04, 2021 | 8:13 PM

ಕರ್ನಾಟಕ ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 12,227 ಜನರ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 9,22,907 ಜನ ಗುಣಮುಖರಾಗಿ ಡಿಸ್​ಚಾರ್ಜ್ ಆಗಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಇಂದು 474 ಜನರಲ್ಲಿ ಕೊರೊನಾ ಸೋಂಕು ದೃಢ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ದೇಶದಲ್ಲಿ  ಕೊರೊನಾ ಲಸಿಕೆ ಹಂಚಿಕೆ ಆರಂಭವಾಗಿದೆ.  ಈ ಮಧ್ಯೆ  ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿರುವುದು ಜನರು ನಿಟ್ಟುಸಿರು ಬಿಡುವಂತಾಗಿದೆ. ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.  ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 474 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,41,070ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆ ಕೂಡ  ಮಿತಿ ಮೀರಿ ಕಡಿಮೆ ಆಗಿದೆ.

ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 12,227 ಜನರ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 9,22,907 ಜನ ಗುಣಮುಖರಾಗಿ ಡಿಸ್​ಚಾರ್ಜ್ ಆಗಿದ್ದಾರೆ. 5,917 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ನಿತ್ಯ ರಾಜ್ಯದಲ್ಲಿ ಆ್ಯಕ್ಟಿವ್​ ಕೇಸ್​ಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿರುವುದು ಜನರಲ್ಲಿ ಹೊಸ ಆಶಾಭಾವ ಮೂಡಿಸಿದೆ.

ಕೊರೊನಾ ಆತಂಕ ದೂರವಾಗಿ, ಶಾಲೆಗೆ ಹತ್ತಿರವಾಗುತ್ತಿರುವ ವಿದ್ಯಾರ್ಥಿಗಳು; ಆದರೆ ಬಸ್​ಗಳಿಲ್ಲದೆ ಪರದಾಟ

Published On - 7:37 pm, Thu, 4 February 21