ರಾಜ್ಯದಲ್ಲಿ ಹೊಸ ಕೊರೊನಾ ಪ್ರಕರಣಗಳಲ್ಲಿ ತೀವ್ರ ಇಳಿಕೆ
ಕಳೆದ ಕೆಲ ವಾರಗಳಿಂದ ರಾಜ್ಯದಲ್ಲಿ 1200-1400 ಪ್ರಕರಣ ಪತ್ತೆ ಆಗುತ್ತಿವೆ. ಈಗ ಈ ಪ್ರಮಾಣ ಒಂದು ಸಾವಿರಕ್ಕಿಂತ ಕಡಿಮೆ ಆಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 857 ಜನರಿಗೆ ಕೊರೊನಾ ದೃಢವಾಗಿದೆ.
ಬೆಂಗಳೂರು: ಇಂಗ್ಲೆಡ್ನಲ್ಲಿ ಕೊರೊನಾ ವೈರಾಣು ರೂಪ ಬದಲಿಸಿದೆ ಎನ್ನುವ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ರೂಪಾಂತರ ಕೊರೊನಾದಿಂದ ಸೋಂಕು ಹರಡುವ ಪ್ರಮಾಣ ಹೆಚ್ಚಾಗಲಿದೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ರಾಜ್ಯದಲ್ಲಿ ಕೊರೊನಾ ಪ್ರಕರಣ ನಿಧಾನವಾಗಿ ಇಳಿಮುಖ ಕಾಣುತ್ತಿದೆ.
ಕಳೆದ ಕೆಲ ವಾರಗಳಿಂದ ರಾಜ್ಯದಲ್ಲಿ 1200-1400 ಪ್ರಕರಣ ಪತ್ತೆ ಆಗುತ್ತಿವೆ. ಈಗ ಈ ಪ್ರಮಾಣ ಒಂದು ಸಾವಿರಕ್ಕಿಂತ ಕಡಿಮೆ ಆಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 857 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,15,345 ಕ್ಕೇರಿದೆ.
ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿರುವುದು ನಿಟ್ಟುಸಿರು ಬಿಡುವಂತೆ ಆಗಿದೆ.
ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 12,051 ಜನರ ಸಾವನಪ್ಪಿದ್ದಾರೆ. ಸೋಂಕಿತರ ಪೈಕಿ 8,89,881 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 13,394 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 205 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿತ್ಯ ರಾಜ್ಯದಲ್ಲಿ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿರುವುದು ಜನರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.
ರೂಪಾಂತರಿ ಕೊರೊನಾ ನಿಯಂತ್ರಿಸಲು ಹೊಸ ಮಾರ್ಗಸೂಚಿ ಪ್ರಕಟಿಸುತ್ತೇವೆ: ಸಚಿವ ಡಾ.ಕೆ.ಸುಧಾಕರ್