ದಿನ ಕಳೆದಂತೆ ಕುಗ್ಗುತ್ತಿದೆ ಕೊರೊನಾ ಹಾವಳಿ; ರಾಜ್ಯದಲ್ಲಿಂದು 1,196 ಕೇಸ್ ದೃಢ
ಸೋಂಕಿತರ ಪೈಕಿ 8,72,038 ಜನ ಗುಣಮುಖರಾಗಿ ಡಿಸ್ಚಾರ್ಜ್. 17,409 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿದ್ದ ಕೊರೊನಾ ಹಾವಳಿ ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿದೆ. ದಿನೇದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1,196 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,01,410ಕ್ಕೇರಿದೆ.
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿರುವುದು ನಿಟ್ಟುಸಿರು ಬಿಡುವಂತೆ ಮಾಡಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 11,944 ಜನರ ಸಾವನಪ್ಪಿದ್ದಾರೆ. ಸೋಂಕಿತರ ಪೈಕಿ 8,72,038 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 17,409 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನಲ್ಲಿಂದು 672 ಹೊಸ ಕೊರೊನಾ ಕೇಸ್ ಪತ್ತೆ ಆಗಿದೆ. ಐವರ ಪೈಕಿ ಮೂವರು ಬೆಂಗಳೂರಿನಲ್ಲೇ ಮೃತಪಟ್ಟಿದ್ದಾರೆ. ಗದಗದಲ್ಲಿ ಇಂದು ಒಂದೇ ಒಂದು ಕೇಸ್ ಕೂಡ ಪತ್ತೆ ಆಗಿಲ್ಲ ಅನ್ನೋದು ವಿಶೇಷ. ಜನವರಿ ವೇಳೆಗೆ ಕೊರೊನಾ ಔಷಧ ಭಾರತದಲ್ಲಿ ಸಿಗುವ ನಿರೀಕ್ಷೆ ಇದೆ. ಅದಕ್ಕೂ ಮೊದಲೇ ಕೊರೊನಾ ನಿಯಂತ್ರಣಕ್ಕೆ ಬರುತ್ತಿರುವುದು ಖುಷಿಯ ವಿಚಾರ.
BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಕೊರೊನಾ ಪಾಸಿಟಿವ್, ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ
Published On - 8:27 pm, Sun, 13 December 20